HomeಮುಖಪುಟSIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

- Advertisement -
- Advertisement -

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದಲ್ಲಿ ಮತದಾರರ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದೆ. ಮತಗಳ್ಳತನದ ವಿರುದ್ಧ ಹೋರಾಟ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ. ಪಕ್ಷದ ಇತರ ಕೆಲಸಗಳನ್ನು ಬದಿಗಿಟ್ಟು ವೋಟ್ ಚೋರಿ ವಿರುದ್ಧ ಹೋರಾಟ ನಡೆಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್ನ ಬಿಎಲ್ಎ-2 ಗಳು ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು. ಮತದಾರರ ನೋಂದಣಿ ಅರ್ಜಿ ಗಳನ್ನು ವಾಪಾಸ್ ಸಲ್ಲಿಸದೇ ಇರುವವರನ್ನು ಸಂಪರ್ಕಿಸಿ, ಅರ್ಜಿ ವಾಪಾಸ್ ನೀಡುವಂತೆ ಮಾಡಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಅಳಿಸದಂತೆ ಎಚ್ಚರಿಕೆ ವಹಿಸಬೇಕು. 18 ವರ್ಷ ತುಂಬಿದ ಯುವಕರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಧಿಕಾರ ಶಾಶ್ವತವಲ್ಲ, ಪಕ್ಷ ಉಳಿದರೆ ಸರ್ಕಾರ ಹಾಗೂ ಅಧಿಕಾರ ಎಲ್ಲವೂ ಉಳಿಯುತ್ತದೆ. ಹೀಗಾಗಿ ವ್ಯಕ್ತಿ ಪೂಜೆ ಮಾಡುವ ಬದಲು ಪಕ್ಷವನ್ನು ಬಲಪಡಿಸಬೇಕು ಸ್ವಾತಂತ್ರ್ಯ ಅಮೂಲ್ಯವಾದದ್ದು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಹೊಸ ಮುನ್ನುಡಿ ಬರೆಯಲಾಗಿತ್ತು. ಇಂದು ಸರ್ವಾಧಿಕಾರಿ ಮನಸ್ಥಿತಿಯವರು ಅಧಿಕಾರ ಬಿಟ್ಟು ತೊಲಗಬೇಕು ಎಂಬ ಸಂದೇಶ ನೀಡಬೇಕಿದೆ. ಅಂದು ಸ್ವರಾಜ್ಯ ನಮ ಜನಸಿದ್ಧ ಹಕ್ಕು ಎಂಬ ಘೋಷಣೆ ಮೊಳಗಿದ್ದರೆ, ಇಂದು ಪ್ರತಿಭಟನೆ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವುದು ನಮ ಜನಸಿದ್ಧ ಹಕ್ಕು ಎಂಬ ಘೋಷಣೆ ಮೊಳಗಬೇಕಿದೆ ಎಂದರು.

ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ನಮ ಹೆಗಲ ಮೇಲೆ ತ್ರಿವರ್ಣ ಧ್ವಜವಿದೆ. ಕಾಂಗ್ರೆಸ್ ಪಕ್ಷ ಯಾರಿಗೂ ತಲೆಬಾಗುವುದಿಲ್ಲ. ಗಾಂಧೀ ಕುಟುಂಬವನ್ನು ದೇಶದಿಂದ ಹೊರ ಹಾಕಲು ಹಲವು ರೀತಿಯ ಅಪಪ್ರಚಾರ ಹಾಗೂ ಷಡ್ಯಂತ್ರಗಳು ನಡೆದವು. ಯುಪಿಎ ಸರ್ಕಾರದ ವಿರುದ್ಧ ನಡೆದ ಅಪಪ್ರಚಾರದಿಂದ ಕಾಂಗ್ರೆಸ್ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಬೇಕಾಯಿತು. ಯುವ ಸಮುದಾಯಕ್ಕೆ ವಾಸ್ತವಾಂಶ ತಿಳಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದರು. ಕರ್ನಾಟಕದಲ್ಲಿ ಚಾಮರಾಜನಗರದಿಂದ ಬೀದರ್ವರೆಗೆ ನಡೆದ ಯಾತ್ರೆಗೆ ಅಪಾರ ಜನಬೆಂಬಲ ದೊರೆಯಿತು ಎಂದು ಸರಿಸಿದರು.

ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ಇದರ ಅಂಗವಾಗಿ ರಾಜ್ಯಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಬಿಜೆಪಿ ರೀತಿಯಲ್ಲಿ ನೂರಾರು ಎಕರೆ ಜಾಗವನ್ನು ಪಡೆದುಕೊಂಡಿಲ್ಲ. ಇಂದಿರಾ ಭವನ ಹಾಗೂ ಪ್ರಿಯದರ್ಶಿನಿ ಭವನಗಳಿಗೆ ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದರು.

ಶೀಘ್ರದಲ್ಲೇ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಗಾಂಧಿನಗರದ ರೇಸ್ಕೋರ್ಸ್ ರಸ್ತೆಯ ನಿವೇಶನದಲ್ಲಿ ನೂತನ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೂ ಏಕಕಾಲದಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಶಂಕುಸ್ಥಾಪನೆ ಕಾರ್ಯಕ್ರಮದ ದಿನ 70 ವರ್ಷ ಮೇಲ್ಪಟ್ಟ 100 ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಮನವಿ ಮಾಡಿದರು. ಪಕ್ಷಕ್ಕಾಗಿ ನಿಷ್ಠೆಯಿಂದ ಹಾಗೂ ಪ್ರಾಮಾಣಿಕವಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸಿ ಗೌರವಿಸಬೇಕು. ಪಕ್ಷದ ಕಚೇರಿಗಳಿಗೆ ನಿವೇಶನ ನೀಡಿದವರು ಹಾಗೂ ಆರ್ಥಿಕ ನೆರವು ನೀಡಿದವರನ್ನೂ ರಾಜ್ಯೋತ್ಸವ ಮಾದರಿಯಲ್ಲಿ ಸನಾನಿಸಿ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಭಾರತ್ ಜೋಡೋ ಯಾತ್ರೆಯ ನೆನಪಿಗಾಗಿ ಸುಮಾರು 1,000 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಯುವಕರನ್ನು ಒಳಗೊಂಡ 10 ಸಾವಿರ ಸಂಘಟನೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಶೀಘ್ರದಲ್ಲೇ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಈ ಸಂಘಟನೆಗಳಿಗೆ ಹೊಸ ಲಾಂಛನವನ್ನೂ ನೀಡಲಾಗುವುದು. 2029ರ ವೇಳೆಗೆ ದೇಶದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಆಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ಸುಮಾರು 70 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. 2028ರ ವಿಧಾನಸಭೆ ಹಾಗೂ 2029ರ ಲೋಕಸಭೆ ಚುನಾವಣೆ ಕಾಂಗ್ರೆಸ್ನ ಪ್ರಮುಖ ಗುರಿಯಾಗಿರಬೇಕು. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅದು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೂ ಗ್ಯಾರಂಟಿ ಯೋಜನೆಗಳ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲಾಗುವುದು. ಈಗಾಗಲೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿಗಳ ನೇಮಕಾತಿ ಮಾಡಲಾಗಿದೆ. ಪಂಚಾಯಿತಿ ಮಟ್ಟದಲ್ಲಿ ಕಾರ್ಯಕರ್ತರನ್ನು ಗುರುತಿಸುವುದರಿಂದ ಗ್ಯಾರಂಟಿ ಯೋಜನೆಗಳಿಗೆ ಮತ್ತಷ್ಟು ಬಲ ಬರಲಿದೆ ಎಂದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು. ಆದರೆ ಇದೇ ಯೋಜನೆಗಳನ್ನು ಇದೀಗ ದೇಶದ ವಿವಿಧ ರಾಜ್ಯಗಳಲ್ಲಿ ಮಾದರಿಯಾಗಿ ಅನುಸರಿಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಸಚಿವರಾದ ರಾಮಲಿಂಗಾ ರೆಡ್ಡಿ, ಶಿವರಾಜ ತಂಗಡಗಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರಾದ ರಾಣಿ ಸತೀಶ್, ಉಮಾಶ್ರೀ, ರಾಜ್ಯಸಭೆಯ ಮಾಜಿ ಸದಸ್ಯ ಎಲ್.ಹನುಮಂತಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಪುನಃ ಅಗ್ರಸ್ಥಾನ ಪಡೆದ ಗೌತಮ್ ಅದಾನಿ; ಶೇ. 13 ರಷ್ಟು ಸಂಪತ್ತು ಹೆಚ್ಚಳ

ಎಂ3ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ರ ಪ್ರಕಾರ, ಭಾರತದ ಬಿಲಿಯನೇರ್‌ಗಳ ಸಂಖ್ಯೆಯು ದಾಖಲೆಯ 391 ಕ್ಕೆ ತಲುಪಿದ್ದು, ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ ಮತ್ತು ಅವರ ಕುಟುಂಬವು...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...