Homeಕರ್ನಾಟಕಯಡಿಯೂರಪ್ಪ ಗಟ್ಟಿ ಮನುಷ್ಯ, ಸಿಎಂ ಹೇಳಿಕೆಯನ್ನು 2-3 ರೀತಿಯಲ್ಲಿ ವಿಶ್ಲೇಷಿಸಬಹುದು- ಡಿ.ಕೆ.ಶಿವಕುಮಾರ್‌

ಯಡಿಯೂರಪ್ಪ ಗಟ್ಟಿ ಮನುಷ್ಯ, ಸಿಎಂ ಹೇಳಿಕೆಯನ್ನು 2-3 ರೀತಿಯಲ್ಲಿ ವಿಶ್ಲೇಷಿಸಬಹುದು- ಡಿ.ಕೆ.ಶಿವಕುಮಾರ್‌

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ಗಟ್ಟಿ ಮನುಷ್ಯ, ಅವರ ಹೇಳಿಕೆಯನ್ನು ಎರಡು-ಮೂರು ರೀತಿಯಲ್ಲಿ ವಿಶ್ಲೇಷಿಸಬಹುದು ಎಂದಿದ್ದಾರೆ.

‘ರಾಜಕಾರಣದಲ್ಲಿ ನಾನಾ ತಂತ್ರಗಾರಿಕೆ ಇರುತ್ತವೆ. ಹಾಗೆಯೇ ಯಡಿಯೂರಪ್ಪನವರ ರಾಜೀನಾಮೆ ಕುರಿತ ಹೇಳಿಕೆ ಹಿಂದೆ ಬೇರೆಯದೇ ತಂತ್ರಗಾರಿಕೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾನುವಾರ ತಮ್ಮ ಸದಾಶಿವನಗರ ಮನೆಯಲ್ಲಿ ಸುದ್ದಿಗಾರರೊಂದಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

’ಯಡಿಯೂರಪ್ಪರವರ ಹೇಳಿಕೆಯನ್ನು ಎರಡ್ಮೂರು ರೀತಿಯಲ್ಲಿ ವಿಶ್ಲೇಷಣೆ ಮಾಡಬಹುದು. ನನ್ನನ್ನು ಮುಟ್ಟಿ ನೋಡಿ ಎಂಬ ಎಚ್ಚರಿಕೆ ಇರಬಹುದು, ನಾನು ಶಿಸ್ತಿನ ಸಿಪಾಯಿ ಎಂದೂ ಇರಬಹುದು. ನೀವು ಹೇಗೆ ವಿಶ್ಲೇಷಣೆ ಮಾಡುತ್ತೀರೋ ಮಾಡಿ. ರಾಜ್ಯ ಹಾಗೂ ಬಿಜೆಪಿ ರಾಜಕಾರಣದಲ್ಲಿ ಯಡಿಯೂರಪ್ಪ ಗಟ್ಟಿ ನಾಯಕ. ಅಷ್ಟು ಸಲೀಸಾಗಿ ಅವರು ಜಗ್ಗಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

‘ರಾಜ್ಯ ಹಾಗೂ ಬಿಜೆಪಿ ರಾಜಕಾರಣದಲ್ಲಿ ಯಡಿಯೂರಪ್ಪ ಅವರು ಗಟ್ಟಿ ನಾಯಕ. ಅವರ ನಾಯಕತ್ವದಲ್ಲಿ ಚುನಾವಣೆ ನಡೆದಿದೆ. ಅವರ ನಾಯಕತ್ವದಲ್ಲೇ ನಮ್ಮ ಪಕ್ಷದ ಸ್ನೇಹಿತರನ್ನು ಕರೆದುಕೊಂಡು ಹೋಗಿ, ಸರಕಾರ ರಚಿಸಿದ್ದಾರೆ. ದುರ್ದೈವ ಏನೆಂದರೆ, ಬಿಜೆಪಿಯವರು ಶಿಸ್ತು ಕಳೆದುಕೊಂಡಿದ್ದಾರೆ. ಶಿಸ್ತು ಅನ್ನುವುದಿಲ್ಲ’ ಎಂದಿದ್ದಾರೆ.

’ಮುಂದೆ ಯಡಿಯೂರಪ್ಪನವರೇ ನಮ್ಮ ಸಿಎಂ ಎನ್ನುವವರು, ಹಿಂದೆ ತಾವೇ ಸೂಟ್ ಹೊಲಿಸಿ, ಮುಹೂರ್ತ ಇಟ್ಟುಕೊಂಡು ರೆಡಿಯಾಗಿದ್ದಾರೆ. ಬಿಜೆಪಿಯಲ್ಲಿನ ಏಳೆಂಟು ಮುಖಂಡರು ತಾವೇ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ಧವಾಗಿದ್ದಾರೆ. ಎಲ್ಲವೂ ನಮ್ಮಗೆ ಗೊತ್ತಿದೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಭಾನುವಾರ ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ’ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಪರ್ಯಾಯ ನಾಯಕ ಇಲ್ಲ ಎನ್ನುವುದು  ಸತ್ಯವಲ್ಲ’ ಎಂದಿದ್ದರು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...