ತಮಿಳುನಾಡಿನ ಆಡಳಿತಾರೂಢ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಸರ್ಕಾರವು “ಅಪ್ರಾಮಾಣಿಕ”ವಾಗಿದ್ದು, ಜೊತೆಗೆ ರಾಜ್ಯದಲ್ಲಿ ಪಿಎಂಶ್ರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಸಂಪೂರ್ಣ “ಯು-ಟರ್ನ್” ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಆರೋಪಿಸಿದ್ದಾರೆ. ಡಿಎಂಕೆ ಸಂಸದರು ಅನಾಗರಿಕರು
ಕೇಂದ್ರ ಸರ್ಕಾರ ಪ್ರಾಯೋಜಿತ ಈ ಯೋಜನೆಯು ಕೇಂದ್ರ, ರಾಜ್ಯ ಅಥವಾ ಪ್ರಾದೇಶಿಕ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಶಾಲೆಗಳ ಮೂಲಸೌಕರ್ಯವನ್ನು ನವೀಕರಿಸುವ ಗುರಿಯನ್ನು ಹೊಂದಿದೆ. ಆದಾಗ್ಯೂ, ಯೋಜನೆಯ ಪ್ರಯೋಜನಗಳನ್ನು ಪಡೆಯಲು, ರಾಜ್ಯ ಸರ್ಕಾರಗಳು ಮೊದಲು 2020 ರ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ಜಾರಿಗೆ ತರಲು ಕೇಂದ್ರದೊಂದಿಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಬೇಕು.
“ತಮಿಳುನಾಡು ಸರ್ಕಾರ ಆರಂಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿತ್ತು” ಎಂದು ಪ್ರಧಾನ್ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಹೇಳಿದ್ದಾರೆ. “ಆದರೆ ಈಗ ಅವರು ನಿಲುವನ್ನು ಬದಲಾಯಿಸಿದ್ದು, ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಅನೇಕ ಬಿಜೆಪಿಯೇತರ ಆಡಳಿತದ ರಾಜ್ಯಗಳು ಒಪ್ಪಂದಕ್ಕೆ ಸಹಿ ಹಾಕಿವೆ.” ಎಂದು ಅವರು ಹೇಳಿದ್ದಾರೆ. ಡಿಎಂಕೆ ಸಂಸದರು ಅನಾಗರಿಕರು
“ಅವರು [ದ್ರಾವಿಡ ಮುನ್ನೇತ್ರ ಕಳಗಂ] ಅಪ್ರಾಮಾಣಿಕರು ಮತ್ತು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಭಾಷಾ ಅಡೆತಡೆಗಳನ್ನು ಹುಟ್ಟುಹಾಕುವುದು ಅವರ ಏಕೈಕ ಕೆಲಸ. ಅವರು ರಾಜಕೀಯ ಮಾಡುತ್ತಿದ್ದಾರೆ… ಅವರು ಪ್ರಜಾಪ್ರಭುತ್ವ ವಿರೋಧಿಗಳು ಮತ್ತು ಅನಾಗರಿಕರು.” ಎಂದು ಸಚಿವ ಪ್ರಧಾನ್ ಹೇಳಿದ್ದಾರೆ.
https://twitter.com/ANI/status/1898976526949101635
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಆದೇಶದ ಕುರಿತು ಕೇಂದ್ರ ಸಚಿವ ಧರ್ಮೇಂಧ್ರ ಪ್ರಧಾನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಡುವೆ ನಡೆಯುತ್ತಿರುವ ಮಾತಿನ ಸಮರದ ಮಧ್ಯೆ ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆಗಳು ಬಂದಿವೆ.
ತ್ರಿಭಾಷಾ ಆದೇಶವು ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ರಾಜ್ಯವೊಂದರ ಸ್ಥಳೀಯ ಭಾಷೆಯನ್ನು ಕಲಿಸುವುದನ್ನು ಸೂಚಿಸುತ್ತದೆ. ಇದನ್ನು 1968 ರಲ್ಲಿ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಚಯಿಸಲಾಯಿತು ಮತ್ತು 2020 ರಲ್ಲಿ ಪರಿಚಯಿಸಲಾದ ಹೊಸ ನೀತಿಯಲ್ಲಿ ಉಳಿಸಿಕೊಳ್ಳಲಾಯಿತು. ದ್ರಾವಿಡ ಮುನ್ನೇತ್ರ ಕಳಗಂ ಸೇರಿದಂತೆ ತಮಿಳುನಾಡಿನ ರಾಜಕೀಯ ಪಕ್ಷಗಳು ತ್ರಿಭಾಷಾ ಸೂತ್ರದ ಅಡಿಯಲ್ಲಿ ರಾಜ್ಯದ ಮೇಲೆ ಹಿಂದಿ ಹೇರುವ ಪ್ರಯತ್ನಗಳನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿವೆ.
ಸೋಮವಾರ ಧರ್ಮೇಂದ್ರ ಪ್ರಧಾನ್ ಅವರು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ(ಪಿಎಂ ಶ್ರೀ) ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿದ್ದರು. ಅವರ ಹೇಳಿಕೆಗಳು ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಅವರ ಹೇಳಿಕೆ ವಿರೋಧಿಸಿ ದ್ರಾವಿಡ ಮುನ್ನೇತ್ರ ಕಳಗಂ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಈ ವೇಳೆ ಸ್ಪೀಕರ್ ಓಂ ಬಿರ್ಲಾ ಆರಂಭದಲ್ಲಿ ಸಂಸದರು ತಮ್ಮ ಸ್ಥಾನಗಳಿಗೆ ಮರಳುವಂತೆ ಒತ್ತಾಯಿಸಿದ್ದು, ನಂತರ ಅಧಿವೇಶನವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಮಿತ್ ಶಾ ಜೊತೆ ಸಭೆ ನಡೆಸಲಿರುವ ಬಿಜೆಪಿ ಭಿನ್ನಮತೀಯ ಬಣ

