Homeಮುಖಪುಟಸಿಎಂ ಪಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ ಡಿಎಂಕೆ ನಾಯಕ

ಸಿಎಂ ಪಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ ಡಿಎಂಕೆ ನಾಯಕ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರ ತಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ನಾಯಕ ಎ.ರಾಜಾ ಕ್ಷಮೆಯಾಚಿಸಿದ್ದಾರೆ. ಎ.ರಾಜಾ ಹೇಳಿಕೆಗೆ ಸಿಎಂ ಪಳನಿಸ್ವಾಮಿ ಕಣ್ಣೀರು ಸುರಿಸಿದ ಘಟನೆ ನಡೆದಿತ್ತು.

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ ಡಿಎಂಕೆ ಮುಖಂಡ ಎ.ರಾಜಾ, ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಉದಯಾನಿಧಿ ಸ್ಟಾಲಿನ್ ಪರ ಪ್ರಚಾರ ಮಾಡುವ ವೇಳೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು AIADMK ಮತ್ತು ಬಿಜೆಪಿ ಪ್ರತಿಭಟನೆ ನಡೆಸಿದ್ದರು. ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸದಂತೆ ತಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

ಘಟನೆ ಕುರಿತು ಕ್ಷಮೆಯಾಚಿಸರುವ ಎ ರಾಜಾ, “ನಾನು ನನ್ನ ಹೇಳಿಕೆಯನ್ನು ಪುನರುಚ್ಚರಿಸುತ್ತೇನೆ. ನನ್ನ ಭಾಷಣವು ಇಬ್ಬರು ನಾಯಕರ ವಿರುದ್ಧದ ವೈಯಕ್ತಿಕ ಟೀಕೆ ಅಲ್ಲ. ನನ್ನ ಭಾಷಣವು ಸಾರ್ವಜನಿಕ ಜೀವನದಲ್ಲಿರುವ ಇಬ್ಬರು ವ್ಯಕ್ತಿಗಳ ಹೋಲಿಕೆಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ

“ನನ್ನ ಮಾತುಗಳಿಂದ ಮುಖ್ಯಮಂತ್ರಿಗಳಿಗೆ ನೋವುಂಟಾಗಿದೆ ಎಂದು ಮಾಧ್ಯಮಗಳಲ್ಲಿ ಓದಿ ನನಗೆ ನೋವಾಗಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಆದರೂ ನಾನು ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇದಲ್ಲದೆ, ರಾಜಕೀಯ ಕಾರಣಗಳನ್ನು ಬಿಟ್ಟು, ಇದರಿಂದ ಅವರಿಗೆ ನೋವುಂಟಾಗಿದ್ದರೆ, ಮನಃಪೂರ್ವಕವಾಗಿ ಕ್ಷಮೆಯಾಚಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಎ.ರಾಜಾ ಹೇಳಿದ್ದಾರೆ.

ಉದಯನಿಧಿ ಸ್ಟಾಲಿನ್ ಸ್ಪರ್ಧಿಸುತ್ತಿರುವ ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ,  ’ಪಳನಿಸ್ವಾಮಿ ಜನನ ಅಕ್ರಮ ಸಂಬಂಧದಿಂದ ಮತ್ತು ಅಕಾಲಿಕ ಜನನ’ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೂ ಮೊದಲು ಮುಖ್ಯಮಂತ್ರಿಯನ್ನು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ಚಪ್ಪಲಿಗಿಂತ ಒಂದು ರೂಪಾಯಿ ಕಡಿಮೆ ಎಂದು ಕರೆದಿದ್ದರು.

ಎ.ರಾಜಾ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 294 ಬಿ (ಸಾರ್ವಜನಿಕ ಸ್ಥಳದಲ್ಲಿ ಕೆಟ್ಟ ಭಾಷೆ) ಮತ್ತು ಜನರ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 127 (ಚುನಾವಣಾ ಸಭೆಗಳಲ್ಲಿ ಅಡಚಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜಾ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಮತ್ತು ಅವರು ಈ ಹೇಳಿಕೆಗಳನ್ನು ರಾಜಕೀಯ ಸನ್ನಿವೇಶದ ಬಳಕೆ ಮಾಡುತ್ತಿದ್ದಾರೆ. ರಾಜಾ ಅವರ ಹೇಳಿಕೆ ಪಳನಿಸ್ವಾಮಿ ಅವರ ವೈಯಕ್ತಿಕ ಜೀವನದ ಬಗ್ಗೆ ಅಲ್ಲ. ಅದು ರಾಜಕೀಯವಾಗಿ ಹೇಳಿದ್ದು ಎಂದು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಹೇಳಿದ್ದಾರೆ. ಜೊತೆಗೆ ತಮ್ಮ ಪಕ್ಷದ ಸದಸ್ಯರಿಗೆ ಪ್ರಚಾರದಲ್ಲಿ ಮತ್ತು ಭಾಷಣಗಳಲ್ಲಿ ಗೌರವಯುತವಾಗಿ ಮಾತನಾಡಬೇಕು ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

0
ಕೇರಳದ ಕಾಸರಗೋಡಿನಲ್ಲಿ ಬುಧವಾರ (ಏ.17) ನಡೆದ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಮಲದ ಚಿಹ್ನೆಯೊಂದಿಗೆ ತಲಾ...