Homeಮುಖಪುಟಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

ಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

- Advertisement -
- Advertisement -

ತಮಿಳುನಾಡು ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ವಿಭಿನ್ನ ರೀತಿಯಲ್ಲಿ ನಡೆಯುತ್ತಿದೆ. ಇದಕ್ಕೆ ಹೊಸ ರೂಪ ಕೊಟ್ಟಿರುವ ಡಿಎಂಕೆ ಅಭ್ಯರ್ಥಿಗಳು, ತಮ್ಮ ಎದುರಾಳಿ ಬಿಜೆಪಿ ಮತ್ತು ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿಕೊಂಡಿದ್ದಾರೆ!

ಹೌದು, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಕಣಕ್ಕಿಳಿದಿದೆ. ಇವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಬಿಜೆಪಿ ತಂಡವೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಇಂದು ಟ್ವಿಟರ್‌ ಸಮರ ಆರಂಭಿಸಿರುವ ಡಿಎಂಕೆ ನಾಯಕರು, ತಮ್ಮ ಕ್ಷೇತ್ರಗಳಲ್ಲಿನ ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ದಯವಿಟ್ಟು ಬನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನಿಸಿದ್ದಾರೆ. ನೀವು ಬಂದು ಪ್ರಚಾರ ಮಾಡುವುದರಿಂದ ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಧರಮಪುರಿಯಿಂದ ತಿರುವಣ್ಣಾಮಲೈ ಮತ್ತು ಕಾಂಚೀಪುರಂನಿಂದ ಕೃಷ್ಣಗಿರಿವರೆಗಿನ ಎಲ್ಲಾ ಡಿಎಂಕೆ ನಾಯಕರು ಸಂಘಟಿತ ಐಟಿ ಸೆಲ್ ಅಭಿಯಾನದಲ್ಲಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ರಾಜ್ಯದಲ್ಲಿ ನರೇಂದ್ರ ಮೋದಿ ವಿರುದ್ಧದ ದೊಡ್ಡ ಅಲೆಯಿದ್ದು, ಮೋದಿ ಬಂದು ವಿರೋಧಿಗಳ ಪರ ಪ್ರಚಾರ ನಡೆಸಿದರೆ ನಮ್ಮ ಗೆಲುವು ಸುಲಭ ಎಂದು ಡಿಎಂಕೆ ಅಭ್ಯರ್ಥಿಗಳು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಟ್ವಿಟರ್‌ ಅಭಿಯಾನವನ್ನು ಮಾರ್ಚ್ 31 ರಂದು ಡಿಎಂಕೆ ಪರಿಸರ ವಿಭಾಗದ ಕಾರ್ಯದರ್ಶಿ ಕಾರ್ತಿಕೇಯ ಶಿವಸೇನಾಪತಿ ಅವರು ಪ್ರಾರಂಭಿಸಿದರು.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಾರ್ತಿಕೇಯ ಶಿವಸೇನಾಪತಿ, ’ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ… ಸಚಿವ ಎಸ್.ಪಿ.ವೇಲುಮನಿ ಅವರಿಗಾಗಿ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಡಿಎಂಕೆ ಅಭ್ಯರ್ಥಿಯಾಗಿದ್ದೇನೆ. ನೀವು ಅವರನ್ನು ಬೆಂಬಲಿಸಿದರೆ ಅದು ನನಗೆ ತುಂಬಾ ಉಪಯುಕ್ತವಾಗಿರುತ್ತದೆ. ಧನ್ಯವಾದಗಳು ಸರ್” ಎಂದಿದ್ದಾರೆ.

ಇದೇ ರೀತಿ ಎಲ್ಲಾ ಡಿಎಂಕೆ ನಾಯಕರು ಕೂಡ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿ ಬಿಜೆಪಿ ಮುಖಂಡರಿಗೆ ಟ್ಯಾಗ್ ಮಾಡಿ ವ್ಯಂಗ್ಯವಾಡಿದ್ದಾರೆ.

ಶಾಸಕ ಎಸ್.ಆರ್‌. ರಾಜಾ ಟ್ವೀಟ್ ಮಾಡಿ, ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ.. ದಯವಿಟ್ಟು ಟಿಕೆಎಂ ಚಿನ್ನಯ್ಯ ಪರ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಸ್ಪರ್ಧಿಸಿರುವ ಡಿಎಂಕೆ ಅಭ್ಯರ್ಥಿ. ಅವರ ಪರವಾಗಿ ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತರವನ್ನು ಹೆಚ್ಚಿಸಲು ತುಂಬಾ ಉಪಯೋಗವಾಗುತ್ತದೆ. ಧನ್ಯವಾದಗಳು ಸರ್” ಎಂದು ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ.

ಡಿಎಂಕೆ ನಾಯಕರ ಜೊತೆಗೆ ಶ್ರೀಪೆರುಂಬದೂರ್‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೆಲ್ವಪೆರುಂದಗೈ ಕೂಡ ಈದೇ ರೀತಿಯ ಟ್ವೀಟ್ ಮಾಡಿದ್ದು, ಮೋದಿಯವರೆ ನನ್ನ ಪ್ರತಿಸ್ಪರ್ಧಿ ಕೆ.ಪಳನಿ ಪರ ಪ್ರಚಾರ ನಡೆಸಿ. ನಾನು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೇನೆ. ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತಹ ಹೆಚ್ಚಾಗುತ್ತದೆ ಎಂದಿದ್ದಾರೆ.

ಡಿಎಂಕೆ ನಾಯಕರ ಟ್ವೀಟ್‌ಗಳನ್ನು ಸೇರಿಸಿ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ತಾವು ಕೂಡ ವ್ಯಂಗ್ಯವಾಡಿದ್ದಾರೆ.

234 ವಿಧಾನಸಭಾ ಕ್ಷೇತ್ರಗಳ ತಮಿಳುನಾಡಿನ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದೆ. ಶುಕ್ರವಾರ (ಏಪ್ರಿಲ್ 2) ರಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅಳಿಯ ಸಬರೀಸನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಯತ್ತಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...