Homeಮುಖಪುಟಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

ಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

- Advertisement -
- Advertisement -

ಹರಿಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಿಂದೂ ಧಾರ್ಮಿಕ ಮೆರವಣಿಗೆ ವೇಳೆ ಕತ್ತಿ ಮತ್ತು ಕೋಲುಗಳನ್ನು ಯಾರು ಒಯ್ಯುತ್ತಾರೆ ಎಂದು ಕೇಂದ್ರ ಸಚಿವ ಮತ್ತು ಗುರುಗ್ರಾಮ್ ಸಂಸದ ರಾವ್ ಇಂದರ್‌ಜಿತ್ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಈ ಹಿಂಸಾಚಾರದ ಬಗ್ಗೆ ಮಾತನಾಡಿರುವ ಅವರು, ಎರಡೂ ಕಡೆಯಿಂದ ಪ್ರಚೋದನೆ ನಡೆದಿರಬಹುದು. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಧಾರ್ಮಿಕ ಮೆರವಣಿಗೆಗಾಗಿ ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡಿದ್ದು ಯಾರು? ಇದು ತಪ್ಪು” ಎಂದು ಸಂಸದರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು ಮಧ್ಯಾಹ್ನ ಹರಿಯಾಣದ ನುಹ್‌ನಲ್ಲಿ ಸಂಭವಿಸಿದ ಕೋಮು ಉದ್ವಿಗ್ನತೆಯಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಹಿಂಸಾಚಾರ ಸೊಹ್ನಾ, ಪಲ್ವಾಲ್ ಮತ್ತು ಗುರುಗ್ರಾಮ್‌ ಹರಡಿತ್ತು. ನುಹ್‌ನಲ್ಲಿ ಹಿಂದೂ ರ್ಯಾಲಿ ಮೇಲೆ ಕಲ್ಲು ತೂರಾಟ ನಡೆಯಿತು. ಇದರ ಬೆನ್ನಲ್ಲೇ ಗುರುಗ್ರಾಮ್‌ನ ಮಸೀದಿಯ ಮೇಲೆ ದಾಳಿ ನಡೆದು, ಅಲ್ಲಿ ಇಮಾಮ್ ಹತ್ಯೆಗೊಳಗಾದರು.

ಈ ಹಿಂಸಾಚಾರಕ್ಕೆ ಗೋರಕ್ಷಕ ಮೋನು ಮಾನೇಸರ್ ಅವರ ವಿಡಿಯೊವೇ ಕಾರಣ ಎಂದು ಹೇಳಲಾಗಿದ್ದರೂ ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಮೆರವಣಿಗೆಗೆ ಆಯುಧಗಳನ್ನು ಕೊಟ್ಟವರು ಯಾರು? ಕತ್ತಿ ಅಥವಾ ಕೋಲುಗಳನ್ನು ಹೊತ್ತ ಮೆರವಣಿಗೆಗೆ ಯಾರು ಹೋಗುತ್ತಾರೆ? ಇದು ತಪ್ಪು. ಈ ಕಡೆಯಿಂದಲೂ ಪ್ರಚೋದನೆ ನಡೆದಿದೆ. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

”ಹಿಂಸಾಚಾರ ಪ್ರಾರಂಭವಾದ ದಿನ ಅಂದರೆ ಜುಲೈ 31 ರಂದು ಕೇಂದ್ರ ಸಚಿವರು ಈ ಬೆಳವಣಿಗೆಗಳು ದುರದೃಷ್ಟಕರ. 1947 ರಲ್ಲಿ, ಭಾರತ ಮತ್ತು ವಿಭಜನೆಯಾದಾಗ ಮತ್ತು ಪಾಕಿಸ್ತಾನವನ್ನು ರಚಿಸಿದಾಗ ಮೇವಾತ್‌ನಲ್ಲಿ ಶಾಂತಿ ನೆಲೆಸಿತ್ತು. ಗಲಭೆಗೆ ಕಾರಣರಾದವರನ್ನು ಬಿಡುವುದಿಲ್ಲ. ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಹರ್ಯಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಲಿದೆ” ಎಂದು ಸಂಸದರು ಹೇಳಿದ್ದಾರೆ.

ಕೇಂದ್ರ ಸಚಿವ ರಾವ್ ಇಂದರ್‌ಜಿತ್ ಸಿಂಗ್ ಅವರು ಇಂದು(ಬುಧವಾರ) ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನುಹ್‌ನಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಅವರು, ”ಎರಡೂ ಸಮುದಾಯಗಳು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ, ಅವರು ಆ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆದರು? ಅವರು ಅಂತಹ ವಾತಾವರಣವನ್ನು ಏಕೆ ಸೃಷ್ಟಿಸಿದರು? ಎಂಬುದು ವಿಚಾರಣೆಯ ವಿಷಯವಾಗಿದೆ. ಹರ್ಯಾಣ ಸರ್ಕಾರ ತನಿಖೆ ನಡೆಸುತ್ತದೆ” ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಮೋದಿ ಸರ್ಕಾರದ ಸಚಿವರ ಹೇಳಿಕೆಯ ಹೊರತಾಗಿಯೂ, ಕ್ರಮವು ಏಕಪಕ್ಷೀಯವಾಗಿರುತ್ತದೆ. ಬಂದೂಕು ಹಿಡಿದು ತಿರುಗಾಡುವ, ಅಮಾಯಕರ ಜೀವ ಮತ್ತು ಆಸ್ತಿಗೆ ಹಾನಿ ಮಾಡುವವರನ್ನು ‘ಹೃದಯ ಸಾಮ್ರಾಟ್’ ಎಂದು ಕರೆದು ಮಹಾಪಂಚಾಯತ್‌ನಲ್ಲಿ ಸನ್ಮಾನಿಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...