Homeಮುಖಪುಟಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

ಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

- Advertisement -
- Advertisement -

ಭಾಷೆಯ ಅಡೆತಡೆಯ ನಡುವೆಯೂ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಅನೇಕ ಸಣ್ಣ ದೇಶಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿರುವ ಪ್ರಧಾನಿ ಮೋದಿ, ಖಾಸಗಿ ವಲಯವು ಈ ಕ್ಷೇತ್ರದಲ್ಲಿ ದೊಡ್ಡ ಅಸ್ತಿತ್ವವನ್ನು ಸಾಧಿಸುವಂತೆ ಶನಿವಾರ ಒತ್ತಾಯಿಸಿದ್ದಾರೆ.

ಆರೋಗ್ಯ ಕ್ಷೇತ್ರದ ಕುರಿತು ಒಕ್ಕೂಟ ಸರ್ಕಾರದ ಬಜೆಟ್ ಘೋಷಣೆಗಳ ಕುರಿತು ವೆಬ್‌ನಾರ್‌ನಲ್ಲಿ ಮಾತನಾಡಿದ ಮೋದಿ, “ವೈದ್ಯಕೀಯ ಶಿಕ್ಷಣಕ್ಕೆ ಭೂಮಿ ಹಂಚಿಕೆಗಾಗಿ ರಾಜ್ಯ ಸರ್ಕಾರಗಳು ‘ಉತ್ತಮ ನೀತಿಗಳನ್ನು’ ರೂಪಿಸಬೇಕು, ಇದರಿಂದ ಭಾರತವು ಜಾಗತಿಕ ಬೇಡಿಕೆಯನ್ನು ಪೂರೈಸಲು ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ಅರೆವೈದ್ಯರನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ” ಎಂದು ಸಲಹೆ ನೀಡಿದ್ದಾರೆ.

ಭಾರತದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವವರು ರಷ್ಯಾ ನಡೆಸುತ್ತಿರುವ ದಾಳಿಯಿಂದಾಗಿ ಉಕ್ರೇನ್‌‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿಯ ಈ ಹೇಳಿಕೆಗಳು ಬಹಳ ಪ್ರಾಮುಖ್ಯತೆ ಪಡೆದಿವೆ. ಆದರೆ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎರಡು ದೇಶಗಳ ನಡುವೆ ನಡೆಯುತ್ತಿವ ಬಿಕ್ಕಟ್ಟಿನ ಬಗ್ಗೆ ನೇರವಾಗಿ ಪ್ರಸ್ತಾಪಿಸಲಿಲ್ಲ.

ಭಾರತೀಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ, ಇದರಿಂದಾಗಿ ನೂರಾರು ಶತಕೋಟಿ ರೂಪಾಯಿಗಳು ದೇಶದಿಂದ ಹೊರದೇಶಕ್ಕೆ ಹರಿಯುತ್ತಿವೆ ಎಂದು ಪ್ರಧಾನಿ ಹೇಳಿದ್ದಾರೆ.

“ಇಂದು ನಮ್ಮ ಮಕ್ಕಳು ಅಧ್ಯಯನಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಸಣ್ಣ ದೇಶಗಳಿಗೆ ಹೋಗುತ್ತಿದ್ದಾರೆ. ಅಲ್ಲಿ ಭಾಷೆಯ ಸಮಸ್ಯೆ ಇದ್ದರೂ, ಅಲ್ಲಿಗೆ ಹೋಗುತ್ತಿದ್ದಾರೆ… ನಮ್ಮ ದೇಶದ ಖಾಸಗಿ ಕ್ಷೇತ್ರವು ಈ ಕ್ಷೇತ್ರವನ್ನು ದೊಡ್ಡ ರೀತಿಯಲ್ಲಿ ಪ್ರವೇಶಿಸಲು ಸಾಧ್ಯವಿಲ್ಲವೇ? ನಮ್ಮ ರಾಜ್ಯ ಸರ್ಕಾರಗಳು ಈ ಬಗ್ಗೆ ಭೂ ಮಂಜೂರಾತಿಗೆ ಒಳ್ಳೆಯ ನೀತಿಯನ್ನು ರೂಪಿಸುವುದಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಕಳೆದ ಹಲವು ದಶಕಗಳಲ್ಲಿ ಭಾರತೀಯ ವೈದ್ಯರು ತಮ್ಮ ಕೆಲಸದಿಂದ ವಿಶ್ವದಾದ್ಯಂತ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನರಿಗೆ ಗುಣಮಟ್ಟದ ಆರೋಗ್ಯ ಮತ್ತು ಕ್ಷೇಮ ಸೇವೆಗಳನ್ನು ಒದಗಿಸಲು ತನ್ನ ಸರ್ಕಾರ ಪ್ರಯತ್ನ ಮಾಡಿದೆ ಎಂದು ಮೋದಿ ಹೇಲಿದ್ದಾರೆ.

ಸರ್ಕಾರವು ‘ಒಂದು ಭಾರತ ಒಂದು ಆರೋಗ್ಯ’ ಎಂಬ ಮನೋಭಾವದಿಂದ ಕೆಲಸ ಮಾಡುತ್ತಿದೆ, ಇದರಿಂದ ದೂರದ ಸ್ಥಳಗಳಲ್ಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುತ್ತಿದೆ. ಗುಣಮಟ್ಟದ ಆರೋಗ್ಯ ಸೌಲಭ್ಯವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮಾನ್ಯ ಪ್ರಧಾನೀಯವರೇ ಭಾರತದಲ್ಲಿ ಒಂದು ವರ್ಷಕ್ಕೆ ಕಟ್ಟಲಾಗುವ ಫೀಸಿನಲ್ಲಿ ಸಣ್ಣಪುಟ್ಟ ರಾಷ್ಟ್ರಗಳಿಗೆ ಹೋದರೆ ವೈದ್ಯಕೀಯ ಶಿಕ್ಷಣವೇ ಮುಗಿಸಿ ಬರಬಹುದು

  2. ಈವಯ್ಯನಿಗೆ ವೈದ್ಯಕೀಯ ವಿಧ್ಯಾರ್ಥಿಗಳು ಸಣ್ಣ ಸಣ್ಣ ದೇಶಕ್ಕೆ ಹೋಗ್ತಾರೆ ಅಂತಾ ಇನ್ನೂ ತಿಳಿದಿಲ್ಲಾ… ಇಲ್ಲಿ ಸರಕಾರಿ ಸೀಟುಗಳಿರೋದು ಬರೀ‌ ೨೦೫೫. ಮತ್ತು ಖಾಸಗೀ ಕಾಲೆಜುಗಳದು ೩೦೦೦ ಸೀಟುಗಳು.. ಖಾಸಗೀ ಕಾಲೆಝುಗಳಲ್ಲಿ ವರುಷಕ್ಕೆ ಫ಼ೀಸು ೧೫೦೦೦೦೦. ಇದನ್ನ ತುಂಬಲು ಆಗದೆ ಸಣ್ಣ ಸಣ್ಣ ದೇಶಗಳಿಗೆ ಕಲಿಲಿಕ್ಕೆ ಹೋಗ್ತಾರೆ ಈ ಚಿಕ್ಕ ವಿಷಯ ಈವಯ್ಯನಿಗೆ ಗೊತ್ತಾಗದೇ ಮತ್ತೆ ಖಾಸಗಿ ಕ್ಷೇತ್ರಗಳಿಗೆ ಕಾಲೇಕಾಲೇ ಉ ತೆರೆಯಲು ಹೇಳ್ತಾ ಇದ್ದರೆ ಯಾಕೊ ಇವರಿಗೆ ಖಾಸಗಿ ಕ್ಷೇತ್ರಗಳ ಮೇಲೆ ಬಾಳ‌ ಪ್ರೀತಿ ಇದ್ದಂಗೈತೆ.

    ಯಾಕೆ ಇವರೇ ಅಂದ್ರೆ ಸರಕಾರದವರೇ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನ ಪ್ರಾರಂಭಿಸಬಾರದು..?

  3. ಮೋದಿ ಜಿ ಯವರ ಅಜಂಡವೇ ಭಾರತದಲ್ಲಿ ಎಲ್ಲವನ್ನು ಖಾಸಗೀಕರಣ ಮಾಡುವುದು ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....