ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.
ಪ್ರಬಲ ಜಾತಿಗಳಿಗೆ ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ. ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದೆ.
ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.
ಇದನ್ನೂ ಓದಿ: ಮೀಸಲಾತಿ ಬೇಡಿಕೆ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ- ಬಸವರಾಜ ಬೊಮ್ಮಾಯಿ
’ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಇರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿ ಜನರಿಗೆ ತೊಂದರೆ ಉಂಟಾಗುತ್ತದೆ’ ಎಂದು ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ನಿಯೋಗ ತಿಳಿಸಿದೆ.
ಮಾಜಿ ಸಭಾಪತಿ ಶ್ರೀ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ ಉಪಸ್ಥಿತರಿದ್ದರು.
ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ



ಅತಿ ಹಿಂದುಳಿದ ವರ್ಗ ಯಾವುದು ಸ್ವಾಮಿ!!!!!
ಓದಲು ಹಣವಿಲ್ಲದ ಬ್ರಾಹ್ಮಣ ಹುಡುಗ ಅಲ್ಲ,
ಹಣವಿಲ್ಲದೆ ಬೆಳೆಗೆ ಬೆಲೆ ಇಲ್ಲದೆ ಸಾಲ ಮಾಡಿ ಸಾಯುತ್ತಿರುವ ಲಿಂಗಾಯತ ರೈತನಲ್ಲ,
ಕಾರ್ ಬಂಗಲೆ ಕಟ್ಟಿಕೊಂಡಿರುವ, ಎಲ್ಲವನ್ನು ಉಚಿತವಾಗಿ ಪಡೆಯುವ, ಭಾರತೀಯ ಸರ್ಕಾರ ಒದಗಿಸುವ ಪ್ರತಿ ಸೌಲಭ್ಯಕ್ಕೂ ಹಕ್ಕುದಾರರಾಗಿರುವ ಆಆಆ ವ್ಯಕ್ತಿ.. ಹೌದೇ!!!!!!
ಬಡವನಿಗೆ ಸೌಲಭ್ಯ ದೊರೆಯದಿದ್ದರೂ ಕುಟುಂಬದ ಹಿನ್ನೆಲೆಯಿಂದ ಶ್ರೀಮಂತರಿಗೂ ಸೌಲಭ್ಯ ದೊರೆಯುವ ಭಾರತ…
ಕೂಳಿಗೆ ಹಣವಿಲ್ಲದವನು ಟ್ಯಾಕ್ಸ್ ಪಾವತಿಸಿ ಆ ಶ್ರೀಮಂತನಿಗೆ ಸಹಾಯ ಮಾಡುವ ಭಾರತ…
ಧನ್ಯ ಭಾರತ ಮಾತೆ ನೀನೆ ಧನ್ಯ..