Homeಕರ್ನಾಟಕಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ಮತ್ತೆ ಈ ಬಾರಿಯ ಅಧಿವೇಶನದಲ್ಲಿ ಕಾರ್ಮಿಕ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯಿದೆಗಳ ಮಂಡನೆ ಮಾಡಲಿದ್ದು, ಅವುಗಳ ಬಗ್ಗೆ ದೀರ್ಘವಾಗಿ ಚರ್ಚಿಸಲಾಗುವುದು.

- Advertisement -
- Advertisement -

ಸದ್ಯ ನೀತಿಸಂಹಿತೆ ಜಾರಿಯಲ್ಲಿದ್ದು, ನಾಳೆಯಿಂದ ಗ್ರಾಮ ಪಂಚಾಯತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಈ ವೇಳೆ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆ ಕಾಯ್ದೆಗಳನ್ನು ಜಾರಿಗೆ ತಂದರೆ ಮತದಾರರ ಮೇಲೆ ಪರಿಣಾಮ ಬೀರಲಿದ್ದು, ನೀತಿಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ವಿಧಾನಸಭಾ ಅಧಿವೇಶನ ಆರಂಭವಾಗಲಿದೆ. ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿದೆ. ನೌಕರರ ಸಂಬಳ, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಪಿಂಚಣಿ ನೀಡಲು ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದಿದ್ದಾರೆ.

ಗೃಹ ನಿರ್ಮಾಣ ಯೋಜನೆಗಳಿಗೆ ಅಗತ್ಯ ಹಣ ಬಿಡುಗಡೆ ಮಾಡುತ್ತಿಲ್ಲ. ಬಿಜೆಪಿ ಸರ್ಕಾರ ತಮ್ಮ ಪಕ್ಷದ ಅರ್ಜಿದಾರರನ್ನು ಗುರುತಿಸಿ ಹಣ ಬಿಡುಗಡೆ ಮಾಡುತ್ತಿದೆ. ಇತರೆ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡವರ ಅರ್ಜಿಗಳನ್ನು ಬಾಕಿ ಇಡಲಾಗಿದೆ. ಇದು ಬಡಜನರಿಗೆ ಮಾಡುತ್ತಿರುವ ದ್ರೋಹ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಮತ್ತೆ ಈ ಬಾರಿಯ ಅಧಿವೇಶನದಲ್ಲಿ ಕಾರ್ಮಿಕ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯಿದೆಗಳ ಮಂಡನೆ ಮಾಡಲಿದ್ದು, ಅವುಗಳ ಬಗ್ಗೆ ದೀರ್ಘವಾಗಿ ಚರ್ಚಿಸಲಾಗುವುದು. ಯಾವುದೇ ಕಾರಣಕ್ಕೂ ಇಂತಹ ಜನವಿರೋಧಿ, ರೈತವಿರೋಧಿ ಕಾಯ್ದೆಗಳ ಜಾರಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳು ಈ ವರ್ಷ ಮೂರು ಬಾರಿ ಪ್ರವಾಹದಿಂದ ಹಾನಿಗೀಡಾಗಿವೆ, ಈವರೆಗೂ ನಷ್ಟಕ್ಕೊಳಗಾದ ಜನರಿಗೆ ಸೂಕ್ತ ಪರಿಹಾರ ನೀಡಿಲ್ಲ. ಜೊತೆಗೆ ಅನೇಕ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿಲ್ಲ, ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದೆ. ಈ ಎಲ್ಲಾ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.


ಇದನ್ನೂ ಓದಿ: ದೇಶಾದ್ಯಂತ ಸರಕು ಸಾಗಣೆ ನಿಲ್ಲಿಸಿ ಭಾರತ್‌ ಬಂದ್‌ಗೆ ಬೆಂಬಲ ನೀಡಲಿರುವ ಸರಕು ಸಾರಿಗೆ ಸಂಘಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...