Homeಮುಖಪುಟ'ಪ್ರಧಾನಿ ಮೋದಿಯನ್ನು ಗೊಂದಲಕ್ಕೀಡುಮಾಡಬೇಡಿ, ನನ್ನೊಂದಿಗೆ ಬಹಿರಂಗ ಚರ್ಚೆಗೆ ಒಪ್ಪಿಸಿ!': ಅಮಿತ್ ಷಾಗೆ ರಾಹುಲ್ ಗಾಂಧಿ ಆಗ್ರಹ!

‘ಪ್ರಧಾನಿ ಮೋದಿಯನ್ನು ಗೊಂದಲಕ್ಕೀಡುಮಾಡಬೇಡಿ, ನನ್ನೊಂದಿಗೆ ಬಹಿರಂಗ ಚರ್ಚೆಗೆ ಒಪ್ಪಿಸಿ!’: ಅಮಿತ್ ಷಾಗೆ ರಾಹುಲ್ ಗಾಂಧಿ ಆಗ್ರಹ!

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೊಂದಲಕ್ಕೀಡುಮಾಡುವ ಬದಲು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಇವಿಎಂ ಕುರಿತು ತಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರುವಂತೆ ಪ್ರಧಾನಿಯವರನ್ನು ಒಪ್ಪಿಸಬೇಕೆಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಸಂಸತ್ತಿನಲ್ಲಿ ಕಳೆದ ವರ್ಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಚರ್ಚಿಸಲು ಸಾಧ್ಯವಿಲ್ಲ ಎಂದಿದ್ದ ಅಮಿತ್ ಷಾ, ಇತ್ತೀಚೆಗೆ ವಿಶೇಷ ಅಧಿವೇಶನ ಕರೆಯಲು ಸರ್ಕಾರ ಸಿದ್ಧವಿದೆ ಎಂದು ನೀಡಿರುವ ಹೇಳಿಕೆಯ ವೀಡಿಯೋ ತುಣುಕನ್ನು ಹಂಚಿಕೊಂಡು ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘X’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಅವರು, “ಅಮಿತ್ ಷಾ ಅವರೇ, ಮೋದಿ ಜಿಯವರನ್ನು ಗೊಂದಲಕ್ಕೀಡುಮಾಡಬೇಡಿ. ನನ್ನೊಂದಿಗೆ ಬಹಿರಂಗ ಚರ್ಚೆಗೆ ಬರುವಂತೆ ಅವರನ್ನು ಒಪ್ಪಿಸಿ. ಯಾವುದೇ ವೇದಿಕೆ, ಯಾವುದೇ ಸಮಯದಲ್ಲಾದರೂ ಸರಿ… ‘ದರೋ ಮತ್’ (ಹೆದರಬೇಡಿ)” ಎಂದು ಚಾಟಿ ಬೀಸಿದ್ದಾರೆ. ಇದೇ ಪೋಸ್ಟ್ ಹಂಚಿಕೊಂಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪ್ರಧಾನಿಯವರು ಚರ್ಚೆಯಲ್ಲಿ ಬೇಕಿದ್ದರೆ ಟೆಲಿಪ್ರಾಮ್ಟರ್ ಕೂಡ ಬಳಸಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಅವರ ಈ ಬಹಿರಂಗ ಸವಾಲಿನ ಬೆನ್ನಲ್ಲೇ ಕಾಂಗ್ರೆಸ್‌ನ ಇತರ ಪ್ರಮುಖ ನಾಯಕರು ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮಿತ್ ಷಾ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ, “ನಿಯಮಿತ ಸಂಸತ್ ಅಧಿವೇಶನಗಳಲ್ಲಿ ನೀವು ಸುಮ್ಮನೆ ಕುಳಿತುಕೊಳ್ಳುತ್ತೀರಿ, ಹೀಗಿರುವಾಗ ವಿಶೇಷ ಅಧಿವೇಶನ ಕರೆಯುವ ಧೈರ್ಯ ನಿಮಗಲ್ಲಿಂದ ಬರಬೇಕು? ದೊಡ್ಡ ಹೆಸರುಗಳು, ಸಣ್ಣ ಆಲೋಚನೆಗಳು!” ಎಂದು ವ್ಯಂಗ್ಯವಾಡಿದ್ದಾರೆ.. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ವಾಗ್ದಾಳಿ ನಡೆಸಿ, “ರಾಹುಲ್ ಜಿ, ನೀವು ಬಿಜೆಪಿಯನ್ನು ಸಂಪೂರ್ಣವಾಗಿ ಕಂಗಾಲು ಮಾಡಿದ್ದೀರಿ. ಅಮಿತ್ ಷಾ ಅವರಿಂದ ಹಿಡಿದು ಪ್ರತಿಯೊಬ್ಬರೂ ದಿಕ್ಕುತೋಚದೆ ಓಡಾಡುತ್ತ ಏನೇನೋ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಪ್ರಧಾನಿ ಮೋದಿಯವರು ಎಲ್ಲಿದ್ದಾರೆ, ಎಲ್ಲಿ ಅಡಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ದೇಶವೇ ಕೇಳುತ್ತಿರುವ ಮತಗಳ ಕಳುವಿನ ಕುರಿತಾದ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಮುಂದೆ ಬಂದು ಉತ್ತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ ನವೆಂಬರ್ 4 ರಂದು ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದ ರಾಹುಲ್ ಗಾಂಧಿ, “ಅದಾನಿ ಅವರ ಎನ್‌ಡಿಟಿವಿ ವೇದಿಕೆಯಾಗಲಿ ಅಥವಾ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ನಿರ್ಣಾಯಕರಾಗಲಿ, ಬಹಿರಂಗ ಚರ್ಚೆಗೆ ಪ್ರಧಾನಿ ಬರಲಿ. ಕೇವಲ 5 ನಿಮಿಷದಲ್ಲಿ ಸತ್ಯ ಏನೆಂದು ನಿರೂಪಿಸುತ್ತೇನೆ” ಎಂದು ಸವಾಲೆಸೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕ ಅಧ್ಯಕ್ಷರ ಹತ್ಯೆ ಮಾಡುವಂತೆ ಧ್ವನಿ ಕೇಳಿಸುತ್ತಿತ್ತು’: ವೈಟ್ ಹೌಸ್ ಬಳಿ ಮಾರಕಾಸ್ತ್ರಗಳಿದ್ದ ಕಾರಿನೊಂದಿಗೆ ವೆನಿಜುವೆಲ್ಲಾ ಪ್ರಜೆ ಬಂಧನ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ 26 ವರ್ಷದ ರೋನಿ ಯೋರ್ಡ್ರಿಕ್ಸ್ ಗುವಾನಿಪಾ ಚ್ರಿನೋಸ್ ಎಂಬ ವೆನಿಜುಎಲ್ಲಾ ಮೂಲದ ವಲಸಿಗನನ್ನು ಯುಎಸ್ ಸೀಕ್ರೆಟ್ ಸರ್ವಿಸ್...

‘E20 turned into 420’ : ಕರ್ನಾಟಕ ಸರ್ಕಾರದ ಪರಿಶೀಲನೆಯಲ್ಲಿ ಬಯಲಾದ ‘ಪೆಟ್ರೋಲ್ ಚೋರಿ’; ಕೇಂದ್ರದ ವಿರುದ್ಧ ಜನಾಕ್ರೋಶ

E20 ಹೆಸರಿನಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್‌ನಲ್ಲಿ ಶೇಕಡ 30ಕ್ಕಿಂತ (31.2) ಅಧಿಕ ಎಥೆನಾಲ್ ಇರುವುದು ಕರ್ನಾಟಕ ಸರ್ಕಾರದ ನಡೆಸಿದ ಪರಿಶೀಲನೆಯಲ್ಲಿ ಬಟಾಬಯಲಾಗಿದ್ದು, ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ...

ಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಮಾಡಿದ ಕಟು...

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ : ಕೇಂದ್ರದಿಂದ ಸ್ಪಷ್ಟನೆ ಕೋರಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ ಮಟ್ಟವು...

ಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್...

ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಪಡೆಯುವುದು ಫಲಾನುಭವಿಗಳ ಹಕ್ಕಲ್ಲ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟನೆ

'ಗೃಹಲಕ್ಷ್ಮಿ' ಒಂದು ಕಲ್ಯಾಣ (ಪರೋಪಕಾರಿ) ಯೋಜನೆಯಾಗಿದ್ದು, ಇದರ ಅನುಷ್ಠಾನವು ಹೆಚ್ಚಾಗಿ ಆಡಳಿತಾತ್ಮಕ ಅಗತ್ಯತೆಗಳನ್ನು ಅವಲಂಬಿಸಿರುತ್ತದೆ. ಹಾಗಾಗಿ, ಈ ಯೋಜನೆಯ ಫಲಾನುಭವಿಗಳು ಇದನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸಲು ಸಾಧ್ಯವಿಲ್ಲ ಮತ್ತು ನ್ಯಾಯಾಂಗದ ಹಸ್ತಕ್ಷೇಪದ...

ಇನ್ಮುಂದೆ ಸರ್ಕಾರಿ ಯೋಜನೆಗಳ ಅರ್ಹತೆಗೆ ‘ಆಧಾರ್’ ಬದಲು ‘ವೋಟರ್ ಐಡಿ’?: ಕೇಂದ್ರ ಸಚಿವರ ಹೇಳಿಕೆಗೆ ರಾಹುಲ್ ಗಾಂಧಿ ತೀವ್ರ ಆಕ್ರೋಶ!

ಕೇಂದ್ರ ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಹಾಗೂ ಪಾವತಿ ಪ್ರಕ್ರಿಯೆಗಳನ್ನು ನಡೆಸಲು ಇನ್ಮುಂದೆ ಆಧಾರ್ ಕಾರ್ಡ್ ಬದಲು 'ವೋಟರ್ ಐಡಿ' (ಮತದಾರರ ಗುರುತಿನ ಚೀಟಿ) ಹಾಗೂ ಬಯೋಮೆಟ್ರಿಕ್ ಪರಿಶೀಲನೆಯನ್ನು ಆಧಾರವಾಗಿ ಬಳಸಲಾಗುವುದು...

AMU ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆಯಾದ ನಶ್ರಾ ನಯೀಮ್ : ಮೊದಲ ಬಾರಿಗೆ ಉನ್ನತ ಹುದ್ದೆಗೆ ಮಹಿಳೆ ಆಯ್ಕೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (AMUSU) 105 ವರ್ಷಗಳ ಇತಿಹಾಸದಲ್ಲೇ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಕಾನೂನು ವಿದ್ಯಾರ್ಥಿನಿ ನಶ್ರಾ ನಯೀಮ್ ಪಾತ್ರರಾಗಿದ್ದಾರೆ. ಶುಕ್ರವಾರ (ನ.6) ಪ್ರಕಟಗೊಂಡ ಚುನಾವಣೆಯ...

ಸ್ಥಳಾಂತರಗೊಂಡ ಮತದಾರರು ಫಾರಂ-6 ಅಥವಾ ಎಸ್‌ಐಆರ್ ಎನ್ಯುಮರೇಷನ್ ಫಾರಂ ಸಲ್ಲಿಸಿದರೆ ಸುಳ್ಳು ಘೋಷಣೆ ಮಾಡಿದಂತಾಗುತ್ತದೆ, ಕಾನೂನು ಕ್ರಮ ಎದುರಿಸಬೇಕಾದೀತು : ಬಾಂಬೆ ಹೈಕೋರ್ಟ್

ವಾಸಸ್ಥಳ ಬದಲಾಯಿಸಿದ ಅಥವಾ ಸ್ಥಳಾಂತರಗೊಂಡ ಮತದಾರರು ಕೇವಲ 'ಫಾರಂ-8' ಅನ್ನು ಮಾತ್ರ ಭರ್ತಿ ಮಾಡಬಹುದು; ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಮೊದಲೇ ಭರ್ತಿ ಮಾಡಲಾದ ಗಣತಿ ನಮೂನೆ (enumeration form)...

ವಿಳಾಸ ಬದಲಿಸಿದ್ದಕ್ಕೆ ಫಾರಂ-8 ಸಲ್ಲಿಸಿದ್ದರೂ ಒಂದೇ ಕುಟುಂಬದ 6 ಮಂದಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ : ಮರುಸೇರ್ಪಡೆಗೆ ಬಾಂಬೆ ಹೈಕೋರ್ಟ್ ಆದೇಶ

ಗೋವಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದ ಒಂದೇ ಕುಟುಂಬದ ಆರು ಸದಸ್ಯರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ (ನ.5) ಭಾರತೀಯ ಚುನಾವಣಾ...