Homeಮುಖಪುಟಜಾಲತಾಣದಲ್ಲಿ ಸಮಸ್ಯೆ ಬಿಚ್ಚಿಡುವ ಜನರಿಗೆ ಕಿರುಕುಳ ನೀಡದಿರಿ: ಸುಪ್ರೀಂ ಎಚ್ಚರಿಕೆ

ಜಾಲತಾಣದಲ್ಲಿ ಸಮಸ್ಯೆ ಬಿಚ್ಚಿಡುವ ಜನರಿಗೆ ಕಿರುಕುಳ ನೀಡದಿರಿ: ಸುಪ್ರೀಂ ಎಚ್ಚರಿಕೆ

ಕಿರುಕುಳ ನೀಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಸರ್ಕಾರಗಳಿಗೆ ಎಚ್ಚರಿಕೆ ನೀಡಿದೆ

- Advertisement -
- Advertisement -

ಜನರು ತಮ್ಮ ಕುಂದುಕೊರತೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದರೆ ಯಾವುದೇ ರಾಜ್ಯವು ಈ ಮಾಹಿತಿಗಳನ್ನು ತಡೆಗಟ್ಟಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. “ಒಂದು ವೇಳೆ ಜನರಿಗೆ ಕಿರುಕುಳ ನೀಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸುಲಾಗುತ್ತದೆ” ಎಂದು ನ್ಯಾಯಾಲವು ಒತ್ತಿ ಹೇಳಿದೆ.

“ನಾಗರಿಕನಾಗಿ ಅಥವಾ ನ್ಯಾಯಾಧೀಶನಾಗಿ ನನಗೆ ಇದು ಬಹಳ ಕಳವಳಕಾರಿ ಸಂಗತಿಯಾಗಿದೆ. ಜನರು ತಮ್ಮ ಕುಂದುಕೊರತೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದರೆ, ಅವರ ಮೇಲೆ ಬಲಪ್ರಯೋಗ ಮಾಡುವುದನ್ನು ಬಿಟ್ಟು ಅವರ ಅಳಲನ್ನು ಕೇಳೋಣ. ನಾವು ಮಾನವೀಯ ಬಿಕ್ಕಟ್ಟಿನಲ್ಲಿದ್ದೇವೆ, ಹಾಸಿಗೆ ಮತ್ತು ಆಕ್ಸಿಜನ್ ಇಲ್ಲವೆಂದು ಹೇಳಿದ ಜನರಿಗೆ ಕಿರುಕುಳ ನೀಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸುತ್ತೇವೆ”ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಇಂದು ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಸಹ ಹಾಸಿಗೆಗಳನ್ನು ಪಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದು, “ಪರಿಸ್ಥಿತಿಯು ಕಠಿಣವಾಗಿದೆ” ಎಂದು ಉಲ್ಲೇಖಿಸಿದೆ.

ಕೊರೊನಾ ಎರಡನೆ ಅಲೆಯು ದೇಶದಾದ್ಯಂತ ತೀವ್ರವಾಗಿ ಹೆಚ್ಚುತ್ತಿದೆ. ಇಂದು ದೇಶದಲ್ಲಿ 3.86 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಸೋಂಕಿನ ಎರಡನೆ ಅಲೆಯ ಬಗ್ಗೆ ತಜ್ಞರು ಬಿಜೆಪಿಯ ನರೇಂದ್ರ ಮೋದಿ ಸರ್ಕಾರವನ್ನು ಈ ಹಿಂದೆಯೆ ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಯಾವುದೆ ತಯಾರಿಗಳನ್ನು ಮಾಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

“ನಾಗರಿಕರು ಅಂತರ್ಜಾಲದಲ್ಲಿ ಎತ್ತುತ್ತಿರುವ ಕುಂದುಕೊರತೆಗಳು ಸುಳ್ಳು ಎಂದು ಯಾವುದೇ ಊಹೆಯಿರಬಾರದು” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇತ್ತೀಚೆಗೆ ಉತ್ತರ ಪ್ರದೇಶದ ಸರ್ಕಾರವು ಟ್ವಿಟರ್‌ನಲ್ಲಿ ಆಕ್ಸಿಜನ್ ಬೇಕು ಎಂದು ಕೇಳಿದ್ದ ಯುವಕನ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿ ಎಫ್‌ಐಆರ್‌ ದಾಖಲಿಸಿತ್ತು. ಈ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್‌ನ ಈ ಆದೇಶವು ಮಹತ್ವದ್ದಾಗಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...