Homeಮುಖಪುಟಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಇದು ಜಾಗತಿಕ ಸರ್ವಾಧಿಕಾರ. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರವಿರಲು ಹೇಳಬೇಡಿ. ಇವೆಲ್ಲ ನಮ್ಮ ಸಮಸ್ಯೆಗಳು- ಮೀನಾ ಹ್ಯಾರಿಸ್

- Advertisement -
- Advertisement -

ಭಾರತದ ಆಂತರಿಕ ವಿಷಯಗಳಲ್ಲಿ ಅಂತರಾಷ್ಟ್ರೀಯ ಗಣ್ಯರು ಪ್ರತಿಕ್ರಿಯಿಸಬಾರದು ಎಂದು ಭಾರತ ಸರ್ಕಾರ ನಿರ್ದಾಕ್ಷೀಣ್ಯವಾಗಿ ಹೇಳಿದೆ. ಇದರ ಬೆನ್ನಲ್ಲೇ ಗ್ರೇಟಾ ಥನ್‌ಬರ್ಗ್ ಮತ್ತೊಮ್ಮೆ ಪ್ರತಿಕ್ರಿಯಿಸಿ ‘ನಾನು ಈಗಲೂ ರೈತಪ ಇದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಈಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

“ಇದು ಕೇವಲ ಕೃಷಿ ನೀತಿಯ ಬಗ್ಗೆ ಅಲ್ಲ. ಇದು ಧಾರ್ಮಿಕ ಅಲ್ಪಸಂಖ್ಯಾತರ ಕಿರುಕುಳದ ಬಗ್ಗೆಯೂ ಇದೆ. ಇದು ಪೊಲೀಸ್ ಹಿಂಸೆ, ಉಗ್ರಗಾಮಿ ರಾಷ್ಟ್ರೀಯತೆ ಮತ್ತು ಕಾರ್ಮಿಕ ಹಕ್ಕುಗಳ ಮೇಲಿನ ದಾಳಿ. ಇದು ಜಾಗತಿಕ ಸರ್ವಾಧಿಕಾರ. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರವಿರಲು ಹೇಳಬೇಡಿ. ಇವೆಲ್ಲ ನಮ್ಮ ಸಮಸ್ಯೆಗಳು” ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಈ ಹಿಂದೆಯೂ ಮೀನಾ ಹ್ಯಾರಿಸ್ ರೈತರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ, “ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿರುವುದು ಕಾಕತಾಳೀಯವಲ್ಲ, ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಪಡೆಗಳ ದೌರ್ಜನ್ಯದ ವಿರುದ್ಧ ನಾವೆಲ್ಲರೂ ಆಕ್ರೋಶಗೊಳ್ಳಬೇಕು”ಎಂದು ಅವರು ಟ್ವೀಟ್ ಮಾಡಿದ್ದರು.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.


ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಕೇವಲ ಎಡಪಂಥೀಯ ಚಿಂತನೆಗಳು ಮಾತ್ರ ಇದರಲ್ಲಿ ಬರುತ್ತದೆ ಹೊರತು ಯಾವುದೇ ಪ್ರಯೋಜನವಿಲ್ಲ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...