Homeಕರ್ನಾಟಕರೈತರಿಗಾಗುತ್ತಿರುವ ಅನ್ಯಾಯವನ್ನು ಕೇಳೋರೇ ಇಲ್ಲ - ಡಿ.ಕೆ.ಶಿವಕುಮಾರ್

ರೈತರಿಗಾಗುತ್ತಿರುವ ಅನ್ಯಾಯವನ್ನು ಕೇಳೋರೇ ಇಲ್ಲ – ಡಿ.ಕೆ.ಶಿವಕುಮಾರ್

- Advertisement -
- Advertisement -

“ಕರಾಳ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಣ್ಣುಮುಚ್ಚಿ ಕುಳಿತಿವೆ. ಕೊರೊನ ಸಂಕಷ್ಟದಲ್ಲಿ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಕೇಳೋರೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು.

ಪೆಟ್ರೋಲ್, ಡಿಸೆಲ್ ಮತ್ತು ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗಿದೆ. ಇಂತಹ ಪರಿಸ್ಥಿತಿ ಇದ್ದರೂ ತೆರಿಗೆಗಳನ್ನು ಜನರ ಮೇಲೆ ಹೇರಲಾಗುತ್ತಿದೆ. ರೈತರ ಸಂಕಷ್ಟ ಹೇಳತೀರದು. ಹಾಗಾಗಿ ಕಾಂಗ್ರೆಸ್ ಪಕ್ಷ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ರಾಜಭವನ ಚಲೋ ಹಮ್ಮಿಕೊಂಡಿದೆ. ಈ ಮೂಲಕ ಸರ್ಕಾರ ಗಮನ ಸೆಳೆಯಲಾಗುವುದು ಎಂದರು.

ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ತಮ್ಮ ಪುತ್ರಿಯ ವಿವಾಹದ ಆಹ್ವಾನ ಪತ್ರಿಕೆಯನ್ನು ಸಿದ್ದಲಿಂಗ ಸ್ವಾಮೀಜಿಗೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಿವಾದಿತ ಮೂರು ಕೃಷಿ ಕಾಯ್ದೆಗಳು ರೈತರಿಗೆ ಮರಣಶಾಸನವಾಗಿವೆ. ಕೇಂದ್ರ ಸರ್ಕಾರ ಅಂತಹ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ರೈತರ ನೆರವಿಗೆ ಬರಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಆರೋಪ: ‘ತಾಂಡವ್’ ವೆಬ್‌ ಸೀರೀಸ್ ವಿರುದ್ಧ ದೂರು

ಕೇಂದ್ರ ಸರ್ಕಾರ ಪ್ರಾದೇಶಿಕತೆಯನ್ನು ನಾಶ ಮಾಡಲು ಹೊರಟಿದೆ. ಕನ್ನಡ ಭಾಷೆ, ಸಂಸ್ಕೃತಿ, ಚಿಂತನೆಗಳು ಕೇಂದ್ರಕ್ಕೆ ಬೇಕಾಗಿಲ್ಲ. ಕನ್ನಡನಾಡಿಗೆ ದ್ರೋಹ ಬಗೆಯುತ್ತಿದ್ದರೂ ಅಧಿಕಾರದ ಆಸೆಗಾಗಿ ಬಿಜೆಪಿಯ ಲೋಕಸಭಾ ಸದಸ್ಯರು ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ. ಪ್ರಾದೇಶಿಕತೆ ನಾಶಕ್ಕೆ ಇವರೂ ಕೈಜೋಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷವನ್ನೂ ಯಾರಿಂದಲೂ ಮುಳುಗಿಸಲು ಸಾಧ್ಯವಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಯಾರು ಏನೇ ಮಾಡಿದರೂ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಏರುವುದನ್ನು ತಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರು.


ಇದನ್ನೂ ಓದಿ: ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...