Homeಚಳವಳಿನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮ ಬೇಡಿಕೆಗಳನ್ನು ಈಡೇರಿಸಿ: ರೈತ ಸಂಘಟನೆ

ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮ ಬೇಡಿಕೆಗಳನ್ನು ಈಡೇರಿಸಿ: ರೈತ ಸಂಘಟನೆ

- Advertisement -
- Advertisement -

ರಾಷ್ಟ್ರ ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯ ಮಧ್ಯೆಯೇ ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, “ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮೊಂದಿಗೆ ಮಾತುಕತೆ ಪ್ರಾರಂಭಿಸಿ ಮತ್ತು ಬೇಡಿಕೆಗಳನ್ನು ಈಡೇರಿಸಿ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆ ಕಾನೂನು ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಿ ಸುಮಾರು ಆರು ತಿಂಗಳಿನಿಂದ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ಸಿಂಘು, ಟಿಕ್ರಿ, ಗಾಝಿಪುರ್ ಮತ್ತು ಶಹಾಜಾನ್‌ಪುರ್‌ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ರೈತರ ಚಳವಳಿಯಲ್ಲಿ ಈವರೆಗೆ 470 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಅನೇಕ ಚಳವಳಿಗಾರರು ತಮ್ಮ ಉದ್ಯೋಗ, ಶಿಕ್ಷಣ ಮತ್ತು ಇತರ ಕೆಲಸಗಳನ್ನು ತ್ಯಜಿಸಿದ್ದಾರೆ. ಸರ್ಕಾರ ತನ್ನ ಸ್ವಂತ ನಾಗರಿಕರ ಬಗ್ಗೆ ಎಷ್ಟು ಅಮಾನವೀಯತರ ಮತ್ತು ಅಸಡ್ಡೆ ಹೊಂದಿದೆ ಎಂಬುದನ್ನು ಅದರ ವರ್ತನೆ ತೋರಿಸುತ್ತದೆ. ಸರ್ಕಾರವು ತನ್ನ ರೈತರ ಬಗ್ಗೆ ಕಾಳಜಿ ವಹಿಸಿದ್ದರೆ ಮತ್ತು ಅವರ ಕಲ್ಯಾಣವನ್ನು ಬಯಸಿದ್ದರೇ, ಅದು ರೈತರೊಂದಿಗೆ ಮಾತುಕತೆಯನ್ನು ಪ್ರಾರಂಭಿಸಬೇಕು ಮತ್ತು ಅವರ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ರೈತರ ತಾಳ್ಮೆ ಪರೀಕ್ಷಿಸಬೇಡಿ “ಎಂದು ರೈತ ಸಂಘಟನೆ ಎಸ್‌ಕೆಎಂ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೇ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಇಲ್ಲಿಯವರೆಗೆ, ಪ್ರತಿಭಟನಾ ನಿರತ ರೈತರು ಮತ್ತು ಸರ್ಕಾರದ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಎರಡೂ ಕಡೆಯವರು ತಮ್ಮ ನಿಲುವಿಗೆ ಅಂಟಿಕೊಂಡಿರುವುದರಿಂದ ಮಾತುಕತೆಗಳು ಮುರಿದುಬಿದ್ದಿದ್ದು, ಪ್ರತಿಭಟನೆ ಮುಂದುವರೆದಿದೆ.

ತೌತೆ ಚಂಡಮಾರುತದ ಪರಿಣಾಮದಿಂದಾಗಿ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಸ್ಥಳಗಳಲ್ಲಿ ಭಾರಿ ಅಡ್ಡಿ ಮತ್ತು ನಷ್ಟಕ್ಕೆ ಕಾರಣವಾಗಿದೆ. “ಮಳೆಯಿಂದಾಗಿ ಆಹಾರ ಮತ್ತು ಮೂಲಸೌಕರ್ಯಗಳು ಅಸ್ತವ್ಯಸ್ತವಾಗಿದೆ. ಗಡಿಯಲ್ಲಿನ ರಸ್ತೆಗಳು ಮತ್ತು ಪ್ರತಿಭಟನಾ ಸ್ಥಳಗಳ ಹಲವಾರು ಭಾಗಗಳು ಮಳೆನೀರಿನಿಂದ ತುಂಬಿವೆ” ಎಂದು ರೈತ ಸಂಘಟನೆ ತಿಳಿಸಿದೆ.

“ಆರು ತಿಂಗಳುಗಳಿಂದ, ಯಾವುದೇ ಸರ್ಕಾರಿ ಸೌಲಭ್ಯಗಳು ಮತ್ತು ಬೆಂಬಲಗಳಿಲ್ಲದೇ, ಪ್ರತಿಭಟನಾ ನಿರತ ರೈತರು ಸ್ವತಃ ತಮ್ಮ ಮೂಲಸೌಕರ್ಯಗಳನ್ನು ನಿಭಾಯಿಸುತ್ತಿದ್ದಾರೆ” ಎಂದು ಎಸ್‌ಕೆಎಂ ಹೇಳಿದೆ.

ಜನವರಿಯಲ್ಲಿ, ವಿವಾದಿತ ಕೃಷಿ ಕಾನೂನುಗಳನ್ನು 12 ರಿಂದ 18 ತಿಂಗಳುಗಳವರೆಗೆ ಅಮಾನತುಗೊಳಿಸಲು ಸರ್ಕಾರ ಮುಂದಾಗಿತ್ತು, ಆದರೆ, ರೈತ ಸಂಘಗಳು ಸರ್ಕಾರದ ಮನವಿಯನ್ನು ತಿರಸ್ಕರಿಸಿದವು. ಕಾಯ್ದೆಗಳು ರದ್ದಾಗುವವರೆಗೆ ಹೋರಾಟ ನಡೆಸುವುದಾಗಿ ತಿಳಿಸಿವೆ. ಕಾನೂನುಗಳ ಅನುಷ್ಠಾನವನ್ನು ತಡೆಹಿಡಿದು ಬಿಕ್ಕಟ್ಟನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಸಮಿತಿಯನ್ನು ರಚಿಸಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...