Homeಮುಖಪುಟಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿಲ್ಲ ಎಂದು ಟ್ವಿಟರ್‌ ತನ್ನ ಹೇಳಿಕೆಯಲ್ಲಿ ಹೇಳಿತ್ತು.

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ಟ್ವಿಟರ್ ನಡುವಿನ‌ ಸಂಘರ್ಷ ತಾರಕಕ್ಕೇರಿದ್ದು, ಸಾಮಾಜಿಕ ಜಾಲತಾಣ ಪ್ಲ್ಯಾಟ್‌ಫಾರ್ಮ್‌ಗಳ ಡಬಲ್ ಸ್ಟ್ಯಾಂಡರ್ಡ್ ಅನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್ ಗುರುವಾರ ಹೇಳಿದರು. “ಇದು ಟ್ವಿಟರ್, ಫೇಸ್‌ಬುಕ್, ಲಿಂಕ್ಡ್‌ಇನ್ ಅಥವಾ ವಾಟ್ಸಾಪ್ ಸೇರಿದಂತೆ ಯಾವುದೆ ಪ್ಲ್ಯಾಟ್‌ಫಾರ್ಮ್‌ಗಳು ಆಗಿರಲಿ ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ಹೇಳಿದರು.

“ಭಾರತದಲ್ಲಿ ಕೆಲಸ ಮಾಡಿ. ನಿಮಗೆ ಇಲ್ಲಿ ಕೋಟಿ ಅನುಯಾಯಿಗಳಿವೆ. ಹಣ ಸಂಪಾದಿಸಿ ಆದರೆ ನೀವು ಭಾರತೀಯ ಕಾನೂನು ಮತ್ತು ಸಂವಿಧಾನವನ್ನು ಪಾಲಿಸಬೇಕಾಗುತ್ತದೆ” ಎಂದು ಸಚಿವರು ಹೇಳಿದರು.

“ನಾವು ಈಗ ಟ್ವಿಟರ್‌‌ ಜೊತೆಗಿನ ಸಮಸ್ಯೆಯನ್ನು ಎತ್ತಿದ್ದೇವೆ. ನಮ್ಮ ಇಲಾಖೆಯು ಟ್ವಿಟರ್‌ನೊಂದಿಗೆ ಮಾತುಕತೆಯಲ್ಲಿದೆ. ಅದಕ್ಕಾಗಿಯೇ ನಾನು ಈ ವಿಷಯದ ಬಗ್ಗೆ ಬಹಿರಂಗವಾಗಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಅಮೆರಿಕದ ಕ್ಯಾಪಿಟಲ್ ಹಿಲ್‌‌‌ನಲ್ಲಿ ಹಿಂಸಾಚಾರ ನಡೆದಾಗ ಏನಾಗಿದೆ ಎಂಬ ಬಗ್ಗೆ ನಾವು ಪಶ್ನೆಗಳನ್ನು ಎತ್ತಿದ್ದೇವೆ. ಅಲ್ಲಿ ಸಾಮಾಜಿಕ ಜಾಲತಾಣದ ಫ್ಲ್ಯಾಟ್‌‌ಪಾರ್ಮ್‌ ಪೊಲೀಸ್ ತನಿಖೆಗೆ ನಿಲ್ಲುತ್ತವೆ ಆದರೆ ಕೆಂಪು ಕೋಟೆಯಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಅದೇ ಫ್ಲ್ಯಾಟ್‌‌ಫಾರ್ಮ್ ಭಾರತ ಸರ್ಕಾರದ ವಿರುದ್ಧ ನಿಲ್ಲುತ್ತಿದೆ. ಕೆಂಪು ಕೋಟೆ ನಮ್ಮ ಹೆಮ್ಮೆಯ ಸಂಕೇತವಾಗಿದೆ. ನಾವು ಈ ಡಬಲ್ ಸ್ಟ್ಯಾಂಡರ್ಡ್ ಅನ್ನು ಅನುಮತಿಸುವುದಿಲ್ಲ” ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಯ ನಂತರ ಕೇಂದ್ರ ಸರ್ಕಾರವು ಎರಡು ಆದೇಶಗಳಲ್ಲಿ 1,300 ಖಾತೆಗಳನ್ನು ಮತ್ತು ಪೋಸ್ಟ್‌ಗಳ ಪಟ್ಟಿಯನ್ನು ಹಸ್ತಾಂತರಿಸಿ ಅದನ್ನು ತೆಹಿಡಿಯುವಂತೆ ಕೇಳಿಕೊಂಡಿದೆ. ಆದರೆ ಬುಧವಾರ, ಟ್ವಿಟರ್ ತನ್ನ ಹೇಳಿಕೆಯನ್ನು ಪ್ರಕಟಿಸಿ, ಕೆಲವು ಹ್ಯಾಂಡಲ್‌ಗಳನ್ನು ನಿರ್ಬಂಧಿಸದಿರುವ ತನ್ನ ಕ್ರಮವನ್ನು ವಿವರಿಸಿದೆ. ಅದು ತನ್ನ ಹೇಳಿಕೆಯಲ್ಲಿ, “… ನಮಗೆ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿರುತ್ತವೆ ಎಂದು ನಾವು ನಂಬುವುದಿಲ್ಲ” ಎಂದು ಹೇಳಿದೆ.

“ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ತತ್ವಗಳನ್ನು ಅನುಸರಿಸಿ ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳನ್ನು ಒಳಗೊಂಡಿರುವ ಖಾತೆಗಳ ಮೇಲೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹಾಗೆ ಮಾಡಿದರೆ, ಭಾರತೀಯ ಕಾನೂನಿನಡಿಯಲ್ಲಿ ಅವರ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ಟ್ವಿಟರ್‌ ಹೇಳಿತ್ತು.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ಟ್ವಿಟರ್ ಈ ಹೇಳಿಕೆಯನ್ನು ನೀಡಿದ ಕೂಡಲೇ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಸ್ವದೇಶಿ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌‌ನಲ್ಲಿ, ಟ್ವಿಟ್ಟರ್‌ ಹೇಳಿಕೆಯನ್ನು “ಅಸಾಮಾನ್ಯ” ಎಂದು ಕರೆದಿದೆ. ’ಕೂ’ ಆಪ್‌ನಲ್ಲಿ ಪ್ರತಿಕ್ರಿಯೆ ನೀಡಿದ ಕೆಲವೆ ಗಂಟೆಗಳ ನಂತರ, ಸಚಿವಾಲಯದ ಪ್ರತಿನಿಧಿಗಳು ಮತ್ತು ಟ್ವಿಟರ್‌ನ ಜಾಗತಿಕ ನೀತಿ ಮತ್ತು ಸುರಕ್ಷತಾ ತಂಡಗಳು ಸಭೆ ನಡೆಸಿದೆ.

ಸಭೆಯಲ್ಲಿ ಟ್ವಿಟರ್‌ನ ಪ್ರತಿಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದೆ. “ಭಾರತದಲ್ಲಿ, ಅದರ ಸಂವಿಧಾನ ಮತ್ತು ಕಾನೂನುಗಳು ಸರ್ವೋಚ್ಚವಾಗಿವೆ. ಇದನ್ನು ಜವಾಬ್ದಾರಿಯುತ ಘಟಕಗಳು ದೃಡೀಕರಿಸುವುದು ಮಾತ್ರವಲ್ಲದೆ ನೆಲದ ಕಾನೂನಿಗೆ ಅನುಸಾರವಾಗಿ ಬದ್ಧವಾಗಿರುತ್ತವೆ ಎಂದು ನಿರೀಕ್ಷಿಸುತ್ತೇವೆ” ಎಂದು ಸಚಿವಾಲಯವು ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಟ್ವಿಟರ್ ತಾನು ಕಾನೂನು ಆಯ್ಕೆಯನ್ನು ನೋಡುತ್ತಿದ್ದೇನೆ ಎಂದು ಹೇಳಿದೆ. “ನಾವು ಸೇವೆ ಸಲ್ಲಿಸುವ ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ. ನಾವು ಭಾರತೀಯ ಕಾನೂನಿನಡಿಯಲ್ಲಿ ನಮಗೆ ಇರುವ ಆಯ್ಕೆಗಳನ್ನು ಹುಡುಕುತ್ತಿದ್ದೇವೆ” ಅದು ಹೇಳಿದೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...