ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌ |ನಾನುಗೌರಿ
PC: One India

ಕಳೆದ ವರ್ಷ ದೆಹಲಿಯ ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆಯಂತೆ ರೈತರ ಆಂದೋಲನವು ನಡೆಯುತ್ತಿದೆ. ಕೇಂದ್ರ ಸರ್ಕಾರ ಅಂದು ಅವರನ್ನು ನಡೆಸಿಕೊಂಡಂತೆ ರೈತರನ್ನು ನಡೆಸಿಕೊಳ್ಳಬಾರದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಬುಧವಾರ ಹೇಳಿದ್ದಾರೆ. ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರವೇ ಪ್ರತಿಭಟನಾಕಾರರು ಮನೆಗೆ ತೆರಳುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರತಿಭಟನಾ ನಿರತ ರೈತರು ಕೊರೊನಾದ ಎಲ್ಲಾ ಮಾರ್ಗಸೂಚಿ‌ಗಳನ್ನು ಅನುಸರಿಸುತ್ತಿದ್ದಾರೆ. ಅಗತ್ಯವಿದ್ದರೆ, 2023 ರವರೆಗೆ ತಮ್ಮ ಆಂದೋಲನವನ್ನು ಮುಂದುವರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

2019 ರ ಡಿಸೆಂಬರ್‌ನಲ್ಲಿ ಪ್ರಾರಂಭವಾದ ಒಂದು ತಿಂಗಳ ಕಾಲ ನಡೆದ ಧರಣಿಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರಿಂದ ಶಹೀನ್ ಬಾಗ್ ಕಳೆದ ವರ್ಷ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ದದ ಪ್ರತಿಭಟನೆಯ ಕೇಂದ್ರಬಿಂದುವಾಗಿ ಹೊರಹೊಮ್ಮಿತ್ತು. ದೇಶದಲ್ಲಿ ಕೊರೊನಾ ವೈರಸ್ ಹರಡುತ್ತಿದ್ದರಂತೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೊಳಿಸುವ ಒಂದು ದಿನ ಮೊದಲು 2020 ರ ಮಾರ್ಚ್ 24 ರಂದು ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಟಿಕಾಯತ್‌, “ಈ ಕಾನೂನುಗಳನ್ನು ರದ್ದುಪಡಿಸುವವರೆಗೂ ರೈತರು ಮನೆಗೆ ಹಿಂತಿರುಗುವುದಿಲ್ಲ. ಕೇಂದ್ರವು ಕೊರೊನಾ ವೈರಸ್ ಬಗ್ಗೆ ಮಾತನಾಡುತ್ತಾರೆ ಆದರೆ ಶಹೀನ್‌ಬಾಗ್‌ ಅನ್ನು ನಡೆಸಿಕೊಂಡಂತೆ ರೈತರನ್ನು ನಡೆಸಿಕೊಳ್ಳಬಾರದು ಎಂದು ಸರ್ಕಾರಕ್ಕೆ ತಿಳಿಸಿದ್ದೇವೆ. ಈ ಆಂದೋಲನ ಕೊನೆಗೊಳ್ಳುವುದಿಲ್ಲ. ನಾವು ಕೊರೊನಾ ವೈರಸ್ ಮಾರ್ಗಸೂಚಿಗಳನ್ನು ಅನುಸರಿಸುತ್ತೇವೆ. ಈ ಆಂದೋಲನವು ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ: ಚಹಾ ತೋಟಗಳ ನವಗುಲಾಮಗಿರಿಯಲ್ಲಿ ನರಳಿರುವ ಆದಿವಾಸಿಗಳು

“2023 ರವರೆಗೆ ಪ್ರತಿಭಟನೆಯನ್ನು ಮುಂದುವರಿಸಬೇಕಾಗಿದ್ದರೂ, ನಾವು ಅದಕ್ಕೆ ಸಿದ್ಧರಿದ್ದೇವೆ. ಈ ಕಾನೂನುಗಳನ್ನು ರದ್ದುಗೊಳಿಸದಿರುವವರೆಗೆ ಮತ್ತು ಎಂಎಸ್‌ಪಿ ಮೇಲೆ ಕಾನೂನು ರೂಪಿಸದವರೆಗೆ ರೈತರು ಮನೆಗೆ ಹಿಂದಿರುಗುವುದಿಲ್ಲ” ಎಂದು ಹೇಳಿದ್ದಾರೆ.

ರೈತರು ಸರ್ಕಾರದೊಂದಿಗೆ ಮಾತನಾಡಲು ಸಿದ್ಧರಾಗಿದ್ದಾರೆ ಎಂದು ಪುನರುಚ್ಚರಿಸಿದ ಅವರು, “ಸರ್ಕಾರಕ್ಕೆ ಸಮಯ ಬಂದಾಗಲೆಲ್ಲಾ ನಾವು ಮಾತನಾಡಲು ಸಿದ್ಧರಿದ್ದೇವೆ. ಅವರ ಕರೆಗಾಗಿ ನಾವು ಕಾಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ: ಸಿದ್ದರಾಮಯ್ಯ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here