Homeಕರ್ನಾಟಕರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಕಾವೇರಿಯ ನೀರು ಬಳಸಿಕೊಂಡು ತಮಿಳುನಾಡು ಸರ್ಕಾರ ನದಿ ಜೋಡನೆ ಮಾಡುತ್ತಿರುವುದನ್ನು ಇಬ್ಬರು ಮಾಜಿ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ.

- Advertisement -
- Advertisement -

ಕಾವೇರಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅದನ್ನು ವೈಗೈ, ವೆಲ್ಲಾರು, ಗುಂಡಾರು ನದಿಗಳಿಗೆ ಜೋಡಣೆ ಮಾಡುವ ತಮಿಳುನಾಡಿನ ಯೋಜನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರವೇ ಹಣಕಾಸಿನ ನೆರವು ನೀಡುತ್ತಿರುವ ವಿಚಾರ ರಾಜ್ಯ ಸರ್ಕಾರದ ಅರಿವಿಗೇ ಬಾರದೇ ಹೋಗಿದ್ದು ಆಶ್ಚರ್ಯಕರ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, “ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ನಾನು ಸಿಎಂ ಆಗಿದ್ದಾಗ ರೂಪಿಸಲಾದ ಮೇಕೆದಾಟು ಯೋಜನೆಗೆ ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಅಡಿಗಡಿಗೂ ಕಾಡಿತು. ತನ್ನ ಮಿತ್ರ ಪಕ್ಷ ಬಿಜೆಪಿಯ ನೆರವಿನಿಂದ ಆಕ್ಷೇಪಿಸುತ್ತಲೇ ಬಂದಿತ್ತು. ಅದರ ಆತಂಕಕ್ಕೆ ಕಾರಣವಾಗಿದ್ದದ್ದು ಇದೇ ಹೆಚ್ಚುವರಿ ನೀರು. ಮೇಕೆದಾಟು ಜಲಾಶಯ ನಿರ್ಮಾಣವಾದರೆ ಹೆಚ್ಚುವರಿ ನೀರು ಅಲಭ್ಯ ಎಂಬ ಕಾರಣಕ್ಕೆ ವಿರೋಧಿಸಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

“ಈಗ ಅದೇ ಹೆಚ್ಚುವರಿ 6 ಕ್ಯೂಬಿಕ್‌ ಫೀಟ್‌ ನೀರು ಬಳಸಿಕೊಂಡು ಎಐಎಡಿಎಂಕೆ ಸರ್ಕಾರ 342 ಕೆರೆ, 42,170 ಎಕರೆಗೆ ನೀರು ಪೂರೈಸುತ್ತಿದೆ. ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ, ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚುವರಿ ನೀರನ್ನೂ ತಮಿಳುನಾಡು ತನ್ನ ಹಕ್ಕೆಂದು ಪ್ರತಿಪಾದಿಸುವ ಅಪಾಯವಿದೆ” ಎಂದು ಅವರು ಎಚ್ಚರಿಸಿದ್ದಾರೆ.

“ವಿಚಾರ ಈಗ ಮಾಧ್ಯಮಗಳಿಂದ ಬಹಿರಂಗವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ, ಜಲಸಂಪನ್ಮೂಲ ಸಚಿವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ತೊಂದರೆಯಾಗದಂತೆ ಯೋಜನೆ ರೂಪಿಸಲು ಕೋರುವುದಾಗಿ ಹೇಳಿದ್ದಾರೆ. ರಾಜ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸುವುದು ಎಂದರೇನು? ಹೆಚ್ಚುವರಿ ನೀರೆಂಬುದು ಮುಂದೊಂದುದಿನ ರಾಜ್ಯಕ್ಕೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

“ಗಮನಿಸಬೇಕಾದ ಮತ್ತೊಂದು ವಿಚಾರವೆಂದರೆ, ಮೇಕೆದಾಟು ಜಲಾಶಯದ ವಿಚಾರದಲ್ಲಿ ಎಐಎಡಿಎಂಕೆಯ ಚಾಡಿ ಮಾತನ್ನು ಕಿವಿಕೊಟ್ಟು ಕೇಳಿ ಕರ್ನಾಟಕವನ್ನು ಹಿಂಸಿಸಿದ ಕೇಂದ್ರ ಸರ್ಕಾರ, ತಮಿಳುನಾಡಿನ ಯೋಜನೆಗೆ ಈಗ ಧನಸಹಾಯ ನೀಡುತ್ತಿದೆ. ರಾಜ್ಯದಿಂದ ಎಲ್ಲ ಪಡೆದುಕೊಂಡ ಪಕ್ಷವೊಂದು ಹೇಗೆ ಅದೇ ರಾಜ್ಯವನ್ನು ಶೋಷಿಸುತ್ತಿದೆ ಎಂಬುದಕ್ಕೆ ಇದು ತಾಜಾ ಉದಾಹರಣೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ದೀರ್ಘಾವಧಿಯ ಹೋರಾಟದಲ್ಲಿ ತಕ್ಕಮಟ್ಟಿನ ಯಶಸ್ಸು ಸಿಕ್ಕಿದೆ. ಈ ವರೆಗೆ ಜಲಸಂಪನ್ಮೂಲ ನಿರ್ವಹಿಸಿದವರ ಬದ್ಧತೆಯೂ ಇದಕ್ಕೆ ಕಾರಣ ಇರಬಹುದು. ಆದರೆ, ಈ ಸರ್ಕಾರದಲ್ಲಿ ಅದು ಕಾಣುತ್ತಿಲ್ಲ. ಇಲಾಖೆಯ ಕಚೇರಿಯಲ್ಲಿ ನಾನು ಕೂರಬೇಕೆಂಬುದಷ್ಟೇ ಸಚಿವರ ಇಚ್ಚೆಯಾಗಿತ್ತು. ಅದು ಈಡೇರಿದ ಮೇಲೆ ಇಲಾಖೆ ನಗಣ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿಯದ್ದೇ ಸರ್ಕಾರವಿದೆ. ರಾಜ್ಯದಿಂದ ಬಿಜೆಪಿಗೆ ಅತ್ಯಧಿಕ ಸಂಸದರು ಸಿಕ್ಕಿದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌರವಯುತವಾಗಿ, ನ್ಯಾಯಯುತವಾಗಿ ಕರ್ನಾಟಕದ ಹಿತ ಕಾಯಬೇಕು. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂಥದ್ದೊಂದು ಯೋಜನೆ ಬಗ್ಗೆ ಅರಿವಿಲ್ಲದೇ ಇದ್ದದ್ದು ರಾಜ್ಯದ ಜಲಸಂಪನ್ಮೂಲ ಸಚಿವರ ವೈಫಲ್ಯವೇ ಸರಿ. ಅವರು ಚಾಲೆಂಜ್‌ ರಾಜಕೀಯ ಮಾಡುವುದು ಬಿಟ್ಟು, ಅವರನ್ನು ಸೋಲಿಸುತ್ತೇನೆ, ಇವರನ್ನು ಸೋಲಿಸುತ್ತೇನೆ ಎನ್ನುವುದನ್ನು ಬಿಟ್ಟು ರಾಜ್ಯದ ಹಿತಕ್ಕಾಗಿ ಚಾಲೆಂಜ್‌ ಮಾಡಲಿ. ಕನಿಷ್ಠ ಜಲಸಂಪನ್ಮೂಲ ಇಲಾಖೆ ಏನು ಬೇಡುತ್ತದೆಯೋ ಅದನ್ನು ಗಳಿಸಿಕೊಳ್ಳಲಿ” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರೋಧ

ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ತಮಿಳುನಾಡಿನ ಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

“ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಯೋಜನೆಯನ್ನು ಕೈಬಿಡಲು ಒತ್ತಾಯಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...