Homeಮುಖಪುಟತಪ್ಪು ಮಾಡಿದವರನ್ನು ಎನ್‌ಕೌಂಟರ್‌ ಮಾಡುತ್ತೇವೆ: ತೆಲಂಗಾಣ ಸಚಿವರ ಎಚ್ಚರಿಕೆ

ತಪ್ಪು ಮಾಡಿದವರನ್ನು ಎನ್‌ಕೌಂಟರ್‌ ಮಾಡುತ್ತೇವೆ: ತೆಲಂಗಾಣ ಸಚಿವರ ಎಚ್ಚರಿಕೆ

"ಡು ರಾಂಗ್, ದೇರ್ ವಿಲ್ ಬಿ ಎನ್ಕೌಂಟರ್" ಎಂದು ತೆಲಂಗಾಣ ಸಚಿವರು ಅತ್ಯಾಚಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಹೈದರಾಬಾದ್ ಬಳಿ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ನಾಲ್ವರು ಆರೋಪಿಗಳನ್ನು ಕಾನೂನು ಬಾಹಿರವಾಗಿ ಹತ್ಯೆಯನ್ನು ಎಂದು ತೆಲಂಗಾಣದ ಮಂತ್ರಿ ತಲಸಾನಿ ಶ್ರೀನಿವಾಸ್ ಯಾದವ್ ಸಮರ್ಥಿಸಿಕೊಂಡಿದ್ದಲ್ಲದೆ, ಯಾರಾದರೂ ಕ್ರೂರ ಅಪರಾಧ ಎಸಗಿದರೆ ಅವರನ್ನು ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

“ಇದು ಒಂದು ಪಾಠ. ಇನ್ನು ಮುಂದೆ ನಿಮ್ಮ ನಡವಳಿಕೆ ತಪ್ಪಾಗಿದ್ದರೆ, ಯಾವುದೇ ನ್ಯಾಯಾಲಯದ ವಿಚಾರಣೆ, ಜೈಲು ಶಿಕ್ಷೆ ಅಥವಾ ಪ್ರಕರಣವು ಎಳೆಯುತ್ತಿದ್ದಂತೆ ಜಾಮೀನಿನಿಂದ ಹೊರಬರುವ ಯಾವುದೇ ಪ್ರಯೋಜನ ಇರುವುದಿಲ್ಲ. ನೀವು ತುಂಬಾ ತಪ್ಪು ಮತ್ತು ಕ್ರೂರವಾದದ್ದನ್ನು ಮಾಡಿದರೆ, ಅಲ್ಲಿ ಎನ್ಕೌಂಟರ್ ಇರುತ್ತದೆ” ಎಂದು ರಾಜ್ಯ ಪಶು ಸಂಗೋಪನಾ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಸ್ಥಳೀಯ ಟೆಲಿವಿಷನ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ ನಿವಾರಣೆಗೆ ಕೆ ಚಂದ್ರಶೇಖರ್ ರಾವ್ ಸರ್ಕಾರದ ಬದ್ಧತೆಗೆ ಇದು ಉದಾಹರಣೆಯಾಗಿದೆ. “ಇದು ನಾವು ಕಳುಹಿಸಿದ ಅತ್ಯಂತ ಬಲವಾದ ಸಂದೇಶವಾಗಿದೆ. ಇದು ನಾವು ದೇಶಕ್ಕೆ ಕೊಟ್ಟ ಆದರ್ಶವಾಗಿದೆ. ನಾವು ನಮ್ಮ ಕಲ್ಯಾಣ ಯೋಜನೆಗಳ ಮೂಲಕ ಮಾತ್ರವಲ್ಲದೆ ಕಾನೂನು ಸುವ್ಯವಸ್ಥೆ ಸಮಸ್ಯೆಗಳನ್ನು ನಿಭಾಯಿಸುವ ಮೂಲಕವೂ ಒಂದು ಮಾದರಿಯನ್ನು ರೂಪಿಸುತ್ತಿದ್ದೇವೆ” ಎಂದು ಹಿರಿಯ ಸಚಿವರು ಹೇಳಿದ್ದಾರೆ. ಈ ಕ್ರಮವನ್ನು ಎಲ್ಲೊ ಕೆಲವರು ವಿರೋಧಿಸಿದರೂ ಬಹಳಷ್ಟು ಜನ ನಮ್ಮ ಮುಖ್ಯಮಂತ್ರಿಗಳನ್ನು ಬೆಂಬಲಿಸುತ್ತಾರೆ ಎಂದು ತಿಳಿಸಿದ್ದಾರೆ.

ಈ ಮೊದಲು ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಬಲಿಪಶುವಿನ ಕುಟುಂಬಕ್ಕೆ ಭೇಟಿ ನೀಡಿರಲಿಲ್ಲ ಮಾತ್ರವಲ್ಲ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಹೇಳಿಕೆ ಕೂಡ ನೀಡಿರಲಿಲ್ಲ. ಇದಕ್ಕೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಹಾಗಾಗಿ ಅವರು ಮನಬಂದಂತೆ ಗುಡುಗಿದ್ದಾರೆ.

ತೆಲಂಗಾಣ ಸಾರಿಗೆ ಸಚಿವ ಪಿ.ಅಜಯ್ ಕುಮಾರ್ ಅವರು ಶುಕ್ರವಾರ ಇದೇ ರೀತಿಯ ಹೇಳಿಕೆ ನೀಡಿದ್ದು, “ತ್ವರಿತ ನ್ಯಾಯ” ವನ್ನು ಖಾತರಿಪಡಿಸುವಲ್ಲಿ ರಾಜ್ಯವು ತನ್ನನ್ನು ಆದರ್ಶಪ್ರಾಯವೆಂದು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ. “ಎನ್ಕೌಂಟರ್” ಸಂತ್ರಸ್ತೆಯ ಕುಟುಂಬಕ್ಕೆ ಶಾಂತಿಯನ್ನು ನೀಡುತ್ತದೆ. ನಮ್ಮ ಹೆಣ್ಣುಮಕ್ಕಳ ಮೇಲೆ ಯಾರಾದರೂ ಕೆಟ್ಟ ಕಣ್ಣು ಹಾಕಿದರೆ ನಾವು ಅವರ ಕಣ್ಣುಗಳನ್ನು ಕಿತ್ತುಹಾಕುತ್ತೇವೆ ಎಂದು ನಾವು ತೋರಿಸಿದ್ದೇವೆ ಎಂದು ಸಚಿವರು ಮಾಧ್ಯಮಗಳಿಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಂವಿಧಾನಬದ್ದವಾಗಿ ನಡೆದುಕೊಳ್ಳಬೇಕಾಗಿರುವ ಸಚಿವರೊಬ್ಬರು “ಜಂಗಲ್ ರಾಜ್” ನ ಪ್ರತಿನಿಧಿಯಂತೆ ಮಾತನಾಡಿರುವುದು ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...