‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ‘ಧರ್ಮಸ್ಥಳ ಚಲೋ’ ಮಾಡಿದ ರಾಜ್ಯ ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿದ್ದ ಬಿಜೆಪಿ ನಾಯಕರಿಗೆ ಸವಾಲು ಹಾಕಿರುವ ಸಚಿವರು, “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ” ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.
“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ ಎಂಬ ಕುಸುಮಾವತಿಯವರ ಮಾತಿಗೆ ರಾಜ್ಯ ಬಿಜೆಪಿ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? ಬಿವೈ ವಿಜಯೇಂದ್ರ ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು” ಎಂದು ಆಗ್ರಹಿಸಿದ್ದಾರೆ.
“ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ.
ಬಿಜೆಪಿ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ” ಎಂದು ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ?
“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು… pic.twitter.com/ekhvjwtQd5
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 3, 2025
“ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ? ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ” ಎಂದು ಅವರು ಹರಿಯಾಯ್ದಿದ್ದಾರೆ.
“ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು ‘ಧರ್ಮಸ್ಥಳದಿಂದ ವಾಪಸ್ ಚಲೋ’ ಕಾರ್ಯಕ್ರಮ ಮಾಡಬೇಕಿತ್ತು” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬಿಜೆಪಿ ಕುರಿತು ಬರೆದುಕೊಂಡಿದ್ದಾರೆ.
ಬಿಜೆಪಿಯಿಂದ ಧರ್ಮಸ್ಥಳ ಚಲೋ
ಧರ್ಮಸ್ಥಳ ಗ್ರಾಮದಲ್ಲಿ ಹಲವು ದಶಕಳಿಂದ ನಡೆದಿವೆ ಎನ್ನಲಾದ ಸರಣಿ ಕೊಲೆ-ಅತ್ಯಾಚಾರ ಮತ್ತು ಅನಧಿಕೃತ ಶವಸಂಸ್ಕಾರಗಳ ಕುರಿತು ಎಸ್‌ಐಟಿ ತನಿಖೆ ನಡೆಯುತ್ತಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ. ಸೆ.1 ರಂದು “ನಮ್ಮ ನಡಿಗೆ ಧರ್ಮದೆಡೆಗೆ-ಧರ್ಮಸ್ಥಳ ಚಲೋ” ಹೆಸರನಲ್ಲಿ ಬೃಹತ್ ಸಮಾವೇಶ ಏರ್ಪಡಿಸಿತ್ತು. ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರು ಕುಮಾರಿ ಸೌಜನ್ಯಾ ಮನೆಗೂ ಭೇಟಿ ನೀಡಿದ್ದರು.
"ಧರ್ಮಸಂಸ್ಥಾಪನಾರ್ಥಾಯ
ಸಂಭವಾಮಿ ಯುಗೇ ಯುಗೇ"ಧರ್ಮಸ್ಥಳದಲ್ಲಿಂದು ನಡೆದ “ನಮ್ಮ ನಡಿಗೆ ಧರ್ಮದೆಡೆಗೆ, ಧರ್ಮಸ್ಥಳ ಚಲೋ” ಗೆ ಕರೆ ನೀಡಿದ್ದ ಕಾರ್ಯಕ್ರಮ ಅಕ್ಷರಶಃ ಸಮರ ಭೂಮಿ ನೆನಪಿಸಿತು. ಧರ್ಮಸ್ಥಳದ ವಿರುದ್ಧ ಷಡ್ಯಂತರ ರೂಪಿಸಿದ್ದ ದುಷ್ಟ ಶಕ್ತಿಗಳ ದಮನ ಕಾರ್ಯ ತಾರ್ಕಿಕ ಅಂತ್ಯ ಕಾಣುವವರೆಗೂ ಧರ್ಮಯುದ್ಧ ನಿಲ್ಲಿಸುವ ಮಾತೇ ಇಲ್ಲ ಎಂಬ ಸಂದೇಶ… pic.twitter.com/GJCDPND3vG
— Vijayendra Yediyurappa (@BYVijayendra) September 1, 2025
“ಹತಭಾಗ್ಯೆ ಹೆಣ್ಣುಮಗಳು ಸೌಜನ್ಯಳ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಪತ್ತೆಯಾಗದಿರುವುದು ಬಹುದೊಡ್ಡ ವಿಪರ್ಯಾಸ. ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಸಹಾನುಭೂತಿ ಹಾಗೂ ಬೆಂಬಲ ವ್ಯಕ್ತಪಡಿಸಲು ಸೌಜನ್ಯ ಅವರ ಮನೆಗೆ ತೆರಳಿ ಅವರ ತಾಯಿ ಕುಸುಮಾವತಿ ಯವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಅಭಯ ನೀಡಲಾಯಿತು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡಿ: ಅಲೆಮಾರಿಗಳ ಬೆಂಗಳೂರು ಚಲೋ ಬೃಹತ್ ಸಮಾವೇಶದಲ್ಲಿ ಆಗ್ರಹ


