Homeಮುಖಪುಟಅಕ್ರಮವಾಗಿ ರೆಮ್‌ಡೆಸಿವಿರ್‌ ಮಾರಾಟ: ವೈದ್ಯ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ರೆಮ್‌ಡೆಸಿವಿರ್‌ ಮಾರಾಟ: ವೈದ್ಯ ಸೇರಿ ನಾಲ್ವರ ಬಂಧನ

- Advertisement -
- Advertisement -

ತೀವ್ರವಾಗಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ರೆಮ್‌ಡೆಸಿವಿರ್‌ ಲಸಿಕೆಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ. ದೇಶದಲ್ಲಿ ಎರಡನೇ ಅಲೆ ಆರಂಭವಾದಾಗಿನಿಂದ ಕೊರೊನಾ ಲಸಿಕೆ ಜೊತೆಗೆ ರೆಮ್‌ಡೆಸಿವಿರ್‌ ಕೂಡ ಹೆಚ್ಚು ಮಾನ್ಯತೆ ಪಡೆಯುತ್ತಿದೆ. ಇಂತಹ ಸಮಯದಲ್ಲಿ ರೆಮ್‌ಡೆಸಿವಿರ್‌ ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡುವುದು ಆರಂಭವಾಗಿದೆ.

ಗುಜರಾತ್‌ನಲ್ಲಿ ಅಕ್ರಮವಾಗಿ ರೆಮ್‌ಡೆಸಿವಿರ್‌ ಲಸಿಕೆ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ವೈದ್ಯ ಸೇರಿದಂತೆ ನಾಲ್ವರನ್ನು ಸೂರತ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ.

ಗುಜರಾತ್‌ನಲ್ಲಿ ಶನಿವಾರ ವಿವಿಧ ಪ್ರದೇಶಗಳ ಮೇಲೆ ದಾಳಿ ಮಾಡಿದ ಅಪರಾಧ ಶಾಖೆ ತಂಡವು ಈ ನಾಲ್ವರನ್ನು ಬಂಧಿಸಿ, ರೆಮ್‌ಡೆಸಿವಿರ್‌ ಔಷಧದ ಮೂರು ಬಾಟಲುಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಿದ್ದಾರೆ.

ಆರೋಪಿಗಳು ಔಷಧಿಯನ್ನು ಅದರ ಎಂಆರ್‌ಪಿ (maximum retail price) ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

ಆರೋಪಿಗಳಿಗೆ ರೆಮ್‌ಡೆಸಿವಿರ್ ಬಾಟಲುಗಳನ್ನು ಸರಬರಾಜು ಮಾಡಿದ ಆರೋಪಿಯನ್ನು ಬಂಧಿಸುವ ಪ್ರಯತ್ನವೂ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 420 (ಮೋಸ) ಮತ್ತು 120-ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ, ಅಗತ್ಯ ಸರಕುಗಳ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಾಲ್‌ಗೇಟ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ರೋಗಿಗಳಿಗೆ ರೆಮ್‌ಡೆಸಿವಿರ್‌ ಔಷಧಿ ನೀಡಲು ವೈದ್ಯರು ಸೂಚಿಸುತ್ತಿದ್ದಾರೆ. ಕೋವಿಡ್ ಪ್ರಕರಣಗಳ ತೀವ್ರ ಉಲ್ಬಣದಿಂದಾಗಿ ಔಷಧದ ಬೇಡಿಕೆ ಹಠಾತ್ತನೆ ಏರಿಕೆಯಾದ  ಹಿನ್ನೆಲೆಯಲ್ಲಿ, ಪರಿಸ್ಥಿತಿ ಸುಧಾರಿಸುವವರೆಗೆ ರೆಮ್‌ಡೆಸಿವಿರ್‌ ರಫ್ತು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.

ಕೆಲವು ದಿನಗಳ ಹಿಂದೆ ಗುಜರಾತ್ ಹೈಕೋರ್ಟ್, ರೆಮ್‌ಡೆಸಿವಿರ್‌ಗೆ ಇರುವ ಹೆಚ್ಚಿನ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಗಳಿಗೆ ಚುಚ್ಚುಮದ್ದನ್ನು ವಿತರಿಸುವ ನೀತಿಯನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.


ಇದನ್ನೂ ಓದಿ: ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...