Homeಮುಖಪುಟವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

- Advertisement -
- Advertisement -

ವೈದ್ಯೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ, ವೈದ್ಯರಿಗೆ ರಕ್ಷಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ  ಪಶ್ಚಿಮ ಬಂಗಾಳದ ಇತರ ನಾಲ್ಕು ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ 100 ಕ್ಕೂ ಹೆಚ್ಚು ಹಿರಿಯ ವೈದ್ಯರು ಕಳೆದ ಇಂದು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಕಿರಿಯ ಸಹೋದ್ಯೋಗಿಗಳು ತಮ್ಮ ಸಹೋದ್ಯೋಗಿ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಆಮರಣಾಂತ ಉಪವಾಸ ಆರಂಭಿಸಿದ್ದಾರೆ. ಸಾಮೂಹಿಕ ರಾಜೀನಾಮೆ ನೀಡಿದ ಒಟ್ಟು ಹಿರಿಯ ವೈದ್ಯರ ಸಂಖ್ಯೆ 200 ದಾಟಿದೆ.

ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಕಲ್ಕತ್ತಾ ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 50 ಹಿರಿಯ ವೈದ್ಯರು, ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 34 ವೈದ್ಯರು, ಸ್ಕೂಲ್ ಆಫ್ ಮೆಡಿಸಿನ್, ಸಾಗೋರ್ ದತ್ತಾ ಆಸ್ಪತ್ರೆಯಿಂದ 30 ಮತ್ತು ಜಲ್ಪೈಗುರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ 19 ಮಂದಿ ಇಂದು ರಾಜೀನಾಮೆ ನೀಡಿದ್ದಾರೆ.

ಹಿಂದಿನ ದಿನ, ಕಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 70 ಹಿರಿಯ ವೈದ್ಯರು ಮತ್ತು ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 40 ಮಂದಿ ತಮ್ಮ ಸಾಮೂಹಿಕ ರಾಜೀನಾಮೆಯನ್ನು ಸಲ್ಲಿಸಿದರು.

ರಾಜ್ಯದ ಇತರ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಂದ ಅಲ್ಲಿನ ಹಿರಿಯ ವೈದ್ಯರು ಮುಂದಿನ ಒಂದೆರಡು ದಿನಗಳಲ್ಲಿ ಇದೇ ರೀತಿಯ ಸಾಮೂಹಿಕ ರಾಜೀನಾಮೆಗೆ ನೀಡಲು ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಮಂಗಳವಾರ ಮಧ್ಯಾಹ್ನ ಸುಮಾರು 50 ಹಿರಿಯ ವೈದ್ಯರು ಆರ್.ಜಿ. ಕರ್ ಆಸ್ಪತ್ರೆ, ಅಲ್ಲಿನ ಅಧ್ಯಾಪಕರ ಪ್ರತಿನಿಧಿಗಳು ಸೇರಿದಂತೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

“ನಾವು ಇದೀಗ ಸಾಮೂಹಿಕ ರಾಜೀನಾಮೆ ನೀಡಿದ್ದೇವೆ, ರಾಜ್ಯ ಸರ್ಕಾರ ಬಯಸಿದರೆ, ನಾವು ನಂತರದ ಹಂತದಲ್ಲಿ ನಮ್ಮ ವೈಯಕ್ತಿಕ ರಾಜೀನಾಮೆಗಳನ್ನು ರವಾನಿಸುತ್ತೇವೆ. ಕೋಲ್ಕತ್ತಾದ ಕಿರಿಯ ವೈದ್ಯರಿಗೆ ಏನಾದರೂ ಸಂಭವಿಸಿದರೆ, ಅದಕ್ಕೆ ಯಾರು ಹೊಣೆಗಾರರಾಗುತ್ತಾರೆ? ವಿಷಯ ಗಂಭೀರ ಸ್ವರೂಪ ಪಡೆದುಕೊಳ್ಳುವ ಮುನ್ನ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ” ಎಂದು ರಾಜೀನಾಮೆ ನೀಡಿದ ಹಿರಿಯ ವೈದ್ಯರು ತಿಳಿಸಿದ್ದಾರೆ.

ಶನಿವಾರ ಸಂಜೆಯಿಂದ ಸೆಂಟ್ರಲ್ ಕೋಲ್ಕತ್ತಾದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಏಳು ಕಿರಿಯ ವೈದ್ಯರ ಆರೋಗ್ಯದಲ್ಲಿ ಕ್ಷೀಣತೆಯ ಲಕ್ಷಣಗಳು ಕಂಡುಬರುತ್ತಿವೆ. ಬುಧವಾರ ಬೆಳಗ್ಗೆ ಹಿರಿಯ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿತು, ನಂತರ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆಯ ಹರಿವು ಪ್ರಾರಂಭವಾಯಿತು.

ಇದನ್ನೂ ಓದಿ; ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...