ಮಹಿಳಾ ವೈದ್ಯೆಯೊಬ್ಬರನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 30 ವರ್ಷದ ಐಪಿಎಸ್ ಅಧಿಕಾರಿಯ ವಿರುದ್ಧ ಮಹಾರಾಷ್ಟ್ರದ ನಾಗ್ಪುರದಲ್ಲಿ ಪ್ರಕರಣ ದಾಖಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪ್ರಕರಣದಲ್ಲಿ ಎಫ್‌ಐಆರ್ ದಾಖಲಾದ ನಂತರ 28 ವರ್ಷದ ಮಹಿಳೆ ಶುಕ್ರವಾರ ನಾಗ್ಪುರದ ಇಮಾಮ್‌ವಾಡಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರುದಾರರ ಪ್ರಕಾರ, ವೈದ್ಯೆ ಮತ್ತು ಐಪಿಎಸ್ ಅಧಿಕಾರಿ ನವೆಂಬರ್ 2022 ರಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕದಲ್ಲಿದ್ದರು. ಆರೋಪಿಯು ನಂತರ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾಗ, ಮಹಿಳೆ ಎಂಬಿಬಿಎಸ್ ಕೋರ್ಸ್ ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅವರ ಆನ್‌ಲೈನ್ ಸಂಭಾಷಣೆಗಳು ಶೀಘ್ರದಲ್ಲೇ ಫೋನ್ ಕರೆಗಳಾಗಿ ಮಾರ್ಪಟ್ಟವು. ಅವರು ಸ್ನೇಹಿತರಾದ ನಂತರ, ಆರೋಪಿಯು ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಅವರೊಂದಿಗೆ ದೈಹಿಕ ಸಂಬಂಧ ಬೆಳೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಗೆ ಆಯ್ಕೆಯಾದ ನಂತರ, ಆರೋಪಿಯು ಮಹಿಳೆಯಿಂದ ಅಂತರ ಕಾಯ್ದುಕೊಂಡಿದ್ದಾನೆ. ಬಳಿಕ ಆಕೆಯನ್ನು ಮದುವೆಯಾಗಲು ನಿರಾಕರಿಸಿದನು ಎಂದು ಅಧಿಕಾರಿ ಹೇಳಿದರು.
ಆ ವ್ಯಕ್ತಿಯ ಕುಟುಂಬ ಕೂಡ ಮಹಿಳೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ಇದರಿಂದ ಅವರು ಅಸಮಾಧಾನಗೊಂಡು ಇಮಾಮ್‌ವಾಡ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯ ದೂರಿನ ಆಧಾರದ ಮೇಲೆ, ಐಪಿಎಸ್ ಅಧಿಕಾರಿಯ ವಿರುದ್ಧ ಶನಿವಾರ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಅತ್ಯಾಚಾರ-ಕೊಲೆ ಆರೋಪಿ ಶವವಾಗಿ ಪತ್ತೆ
ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿರುವ ಮತ್ತೊಂದು ಪ್ರಕರಣದಲ್ಲಿ ಕಲ್ಯಾಣ್ ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿ ಭಾನುವಾರ ಮುಂಜಾನೆ ನೆರೆಯ ನವಿ ಮುಂಬೈನ ತಲೋಜಾ ಕೇಂದ್ರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಆರೋಪಿ ವಿಶಾಲ್ ಗಾವ್ಲಿ (35) ಬೆಳಗಿನ ಜಾವ 3.30 ರ ಸುಮಾರಿಗೆ ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅವರು ಹೇಳಿದರು.
ಗಾವ್ಲಿ ಶೌಚಾಲಯಕ್ಕೆ ಹೋಗಿ ಟವಲ್ ಬಳಸಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಂತರ ಜೈಲು ಅಧಿಕಾರಿಗಳು ಶವವನ್ನು ನೋಡಿದ್ದಾರೆ ಎಂದು ಖಾರ್ಘರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಯಿತು ಮತ್ತು ಪಂಚನಾಮ (ಸ್ಥಳ ಪರಿಶೀಲನೆ) ನಡೆಸಲಾಯಿತು.
ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸಲು ಮೃತದೇಹವನ್ನು ನೆರೆಯ ಮುಂಬೈನಲ್ಲಿರುವ ಸರ್ಕಾರಿ ಸ್ವಾಮ್ಯದ ಜೆಜೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಡಿಸೆಂಬರ್ 2024 ರಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ಪ್ರದೇಶದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪವನ್ನು ಗಾವ್ಲಿ ಎದುರಿಸುತ್ತಿದ್ದರು.
3 ತಿಂಗಳ ಒಳಗೆ ಮಸೂದೆಗಳ ತೆರವುಗೊಳಿಸಿ; ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್


