Homeಕರೋನಾ ತಲ್ಲಣವೈದ್ಯ ಆತ್ಮಹತ್ಯೆ:‌ ಮೈಸೂರು ಜಿಲ್ಲಾ ಪಂಚಾಯಿತಿ‌ ಅಧಿಕಾರಿ ವಿರುದ್ಧ ಎಫ್‌ಐಆರ್

ವೈದ್ಯ ಆತ್ಮಹತ್ಯೆ:‌ ಮೈಸೂರು ಜಿಲ್ಲಾ ಪಂಚಾಯಿತಿ‌ ಅಧಿಕಾರಿ ವಿರುದ್ಧ ಎಫ್‌ಐಆರ್

ಸಹ ವೈದ್ಯರ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡಾ ಎಸ್.ಆರ್.ನಾಗೇಂದ್ರ ತಮ್ಮ ಟಿಪ್ಪಣಿಯೊಂದರಲ್ಲಿ ಆರೋಪಿಸಿದ್ದಾರೆ. 

- Advertisement -
- Advertisement -

ಕೊರೊನಾ ವೈರಸ್ ಕರ್ತವ್ಯದಲ್ಲಿದ್ದ‌ ಮೈಸೂರು ಜಿಲ್ಲೆಯ ಸರ್ಕಾರಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಆಗಸ್ಟ್ 20 ರಂದು ಮೈಸೂರು ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸಹ ವೈದ್ಯರ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡಾ ಎಸ್.ಆರ್.ನಾಗೇಂದ್ರ ತಮ್ಮ ಟಿಪ್ಪಣಿಯೊಂದರಲ್ಲಿ ಆರೋಪಿಸಿದ್ದಾರೆ.

ನಂಜನಗೂಡು ತಾಲ್ಲೂಕಿನಲ್ಲಿ ಕೊರೊನಾ ವೈರಸ್ ಕ್ಷಿಪ್ರ ಆಂಟಿಜೆನ್ ಪರೀಕ್ಷೆಗಳನ್ನು ನಡೆಸುವ ಗುರಿಗಳನ್ನು ಪೂರೈಸಲು ಮಿಶ್ರಾ ವೈದ್ಯರ ಮೇಲೆ ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಲು ಕೋರಿ ಮೈಸೂರಿನ ವೈದ್ಯರು ಮುಷ್ಕರ ಆರಂಭಿಸಿದ್ದಾರೆ.

ಅಧಿಕಾರಿ ವೈದ್ಯರನ್ನು ನಿಂದಿಸಿದ್ದಾರೆ. ಈ ಅವಮಾನವನ್ನು ತಡೆದುಕೊಳ್ಳಲು ಸಾಧ್ಯವಾಗದ ಕಾರಣ ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಅವರು ಆರೋಪಿಸಿದರು.

ಆರೋಪಿಯನ್ನು ಪ್ರಶಾಂತ್ ಕುಮಾರ್ ಮಿಶ್ರಾ ಎಂದು ಗುರುತಿಸಲಾಗಿದೆ. ಆಗಸ್ಟ್ 20 ರಂದು ನಂಜನ‌ಗೂಡು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಅವರ ಆತ್ಮಹತ್ಯೆ ಸಾವಿಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿಯ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದಿಸುವ ಇಂತಹ ಯಾವುದೇ ಅಪರಾದಕ್ಕೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

ನಾಗೇಂದ್ರ ಅವರ ತಂದೆ ರಾಮಕೃಷ್ಣ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮಿಶ್ರಾ ಹಾಕಿದ ಒತ್ತಡದಿಂದಾಗಿ ತಮ್ಮ ಮಗ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ವೈದ್ಯ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತನಿಖೆಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಶುಕ್ರವಾರ ಆದೇಶಿಸಿದ್ದರು. ನಾಗೇಂದ್ರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ 50 ಲಕ್ಷ ರೂ.ಗಳ ಪರಿಹಾರ ಘೋಷಿಸಿ, ಏಳು ದಿನಗಳಲ್ಲಿ ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ, ಆದರೆ ಕೊರೊನಾ ವೈರಸ್ ಸಮಯದಲ್ಲಿ ಪ್ರತಿಭಟಿಸುವ ಮೂಲಕ ರೋಗಿಗಳನ್ನು ತೊಂದರೆಗೆ ಸಿಲುಕಿಸಬೇಡಿ” ಮುಷ್ಕರದಲ್ಲಿರುವ ವೈದ್ಯರಿಗೆ ಮತ್ತೆ ಕೆಲಸಕ್ಕೆ ಹೋಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವಿನಂತಿಸಿದರು.

ʼವೈದ್ಯ ನಾರಾಯಣೋ ಹರಿಹಿʼ [ವೈದ್ಯರು ದೇವರು] ಎಂಬ ಜನರ ನಂಬಿಕೆಗೆ ಅನುಗುಣವಾಗಿ ಮುಂದುವರಿಯಿರಿʼ ಎಂದೂ ಹೇಳಿದ್ದಾರೆ.

ಆದರೆ ಈ ಘಟನೆಯಿಂದ ಕರ್ನಾಟಕದ ವೈದ್ಯರು ತೀವ್ರ ತೊಂದರೆಗೀಡಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಎರಡು ದಿನಗಳ ಕಾಲ ಕಪ್ಪಪಟ್ಟಿ ಮತ್ತು ಮೇಣದಬತ್ತಿ ಹಚ್ಚಿ ಪ್ರತಿಭಟನೆ ಮಾಡುತ್ತೇವೆ ಎಂದು ಐಎಂಎ ರಾಷ್ಟ್ರೀಯ ಅಧ್ಯಕ್ಷ ಡಾ.ರಾಜನ್ ಶರ್ಮಾ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ಆರ್.ವಿ.ಅಶೋಕನ್ ಪತ್ರದಲ್ಲಿ ತಿಳಿಸಿದ್ದಾರೆ.

ಜೀವ ಅಮೂಲ್ಯವಾಗಿದೆ ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ವೈದ್ಯರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಹೈದರಾಬಾದ್ ಕಿರಿಯ ವೈದ್ಯರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...