Homeಕರೋನಾ ತಲ್ಲಣಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

- Advertisement -
- Advertisement -

ತನಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ಕೋವಿಡ್ ಲಸಿಕೆ ಅಗತ್ಯವಿಲ್ಲ ಎಂದು ಹೇಳಿದ್ದ ಯೋಗ ಗುರು ರಾಮದೇವ್, ಯೂಟರ್ನ್ ಹೊಡೆದಿದ್ದು, ಶೀಘ್ರದಲ್ಲೇ ಕೊರೊನಾ ಲಸಿಕೆ ಪಡೆಯುವುದಾಗಿ ಹೇಳಿದ್ದಾರೆ. ಜೊತೆಗೆ ಅಲೋಪತಿ ವೈದ್ಯರನ್ನು “ಭೂಮಿಯ ಮೇಲಿನ ದೇವದೂತರು” ಎಂದು ಹೊಗಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ವಿರುದ್ಧ ಅಲೋಪಥಿಕ್ ಔಷಧಿಗಳ ಪರಿಣಾಮಕಾರಿತ್ವದ ಕುರಿತು ರಾಮ್‌ದೇವ್ ಈ ಹಿಂದೆ ಅಭಿಪ್ರಾಯ ಹೊರಹಾಕಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ವೈದ್ಯಕೀಯ ವಲಯ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿತ್ತು. ಭಾರತೀಯ ವೈದ್ಯಕೀಯ ಸಂಘ ರಾಮ್‌ದೇವ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು.

ಜೂನ್ 21 ರಿಂದ ಎಲ್ಲರಿಗೂ ಉಚಿತ ಲಸಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯನ್ನು ಸ್ವಾಗತಿಸಿರುವ ಬಾಬಾ ರಾಮದೇವ್ ಇದನ್ನು “ಐತಿಹಾಸಿಕ” ಹೆಜ್ಜೆ ಎಂದು ಬಣ್ಣಿಸಿದರು ಮತ್ತು ತಮ್ಮನ್ನು ತಾವು ಲಸಿಕೆ ಪಡೆಯುವಂತೆ ಎಲ್ಲರಿಗೂ ಮನವಿ ಮಾಡಿದರು.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆಯಿರಿ. ಇದರ ಜೊತೆಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಪಡೆಯಿರಿ ಇದರಿಂದ ರಕ್ಷಣೆ ದೊರೆಯುತ್ತದೆ ಆಗ ಕೋವಿಡ್‌ನಿಂದ ಯಾವ ವ್ಯಕ್ತಿಯು ಸಾಯುವುದಿಲ್ಲ” ಎಂದಿದ್ದಾರೆ. ಶೀಘ್ರದಲ್ಲೇ ತಾವು ಲಸಿಕೆ ಪಡೆಯುವುದಾಗಿ ತಿಳಿಸಿದ್ದಾರೆ.

ಅಲೋಪತಿ ವೈದ್ಯರ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ ರಾಮ್‌ದೇವ್, ಉತ್ತಮ ಅಲೋಪತಿ ವೈದ್ಯರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವೈದ್ಯರನ್ನು ಭೂಮಿಯ ಮೇಲಿನ ದೇವರ ದೂತರು ಎಂದು ಬಣ್ಣಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘ (ಐಎಂಎ) ಯೊಂದಿಗೆ ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿರುವ ಅವರು, ’ಯಾವುದೇ ಸಂಘಟನೆಯೊಂದಿಗೆ ದ್ವೇಷವಿಲ್ಲ. ಔಷಧಿಗಳ ಹೆಸರಿನಲ್ಲಿ ಜನರ ಮೇಲೆ ನಡೆಯುವ ಶೋಷಣೆಗೆ ನನ್ನ ವಿರೋಧ’ ಎಂದಿದ್ದಾರೆ.

ತುರ್ತು ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ ಬಂದಾಗ, ಅಲೋಪತಿ ಉತ್ತಮವಾಗಿದೆ. ಇದರ ಬಗ್ಗೆ ಎರಡು ಅಭಿಪ್ರಾಯಗಳಿಲ್ಲ. ಆದರೆ, ಅನೇಕ ವೈದ್ಯರು ಅಗ್ಗದ ಜನರಿಕ್ ಔಷಧಿಗಳ ಬದಲಿಗೆ ದುಬಾರಿ ಔಷಧಿಗಳನ್ನು ಶಿಫಾರಸು ಮಾಡುತ್ತಿದ್ದ ಪ್ರವೃತ್ತಿಯಿಂದಾಗಿ ಪ್ರಧಾನ್ ಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಬೇಕಾಗಿತ್ತು ಎಂದಿದ್ದಾರೆ.


ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...