Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...