Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಡಾ.ಎಚ್‌.ವಿ.ವಾಸು ಅವರು ಮೊಟ್ಟೆಯ ಅಗತ್ಯತೆಯನ್ನು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು ಎಂದು ಆಗ್ರಹಿಸುತ್ತಿರುವುದು ವಿಜ್ಞಾನಕ್ಕೆ ವಿರುದ್ಧವಾದದ್ದು ಎನ್ನುತ್ತಾರೆ ವೈದ್ಯರು. ಮಕ್ಕಳಿಗೆ ಮೊಟ್ಟೆ ಅಗತ್ಯ ಎಂದು ಜನಪರ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಎಚ್‌.ವಿ.ವಾಸು ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ

2008ನೇ ಇಸವಿಯಿಂದ ನಾನು ಮತ್ತು ನರೇಂದ್ರ ನಾಯಕ್‌ ಅಂಥವರೆಲ್ಲ ಸೇರಿ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಕೆಂದು ಬೇಡಿಕೆ ಇಡಲಾರಂಭಿಸಿದೆವು. ಅಂದು ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಆಗಿನಿಂದಲೂ ಮೊಟ್ಟೆ ಕೊಡುವುದಕ್ಕೆ ವಿರೋಧ ನಡೆಯುತ್ತಲೇ ಇದೆ. ಅಂದೇ ಕೇಂದ್ರ ಸರ್ಕಾರ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಕೊಡಲು ಹಣ ನೀಡಲು ಶುರುಮಾಡಿತು. ಅಲ್ಲಿಗೆ ಹದಿಮೂರು ವರ್ಷಗಳಾಯಿತು. ಅಂದಿನಿಂದಲೇ ಈ ಸ್ವಾಮೀಜಿಗಳು ಸಮಸ್ಯೆಯನ್ನು ಉಂಟುಮಾಡಲು ಆರಂಭಿಸಿದರು.

ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ. ಕರ್ನಾಟಕ ರಾಜ್ಯದಲ್ಲಿ ಮೊಟ್ಟೆ ಪ್ರಸ್ತಾಪ 2007- 2008ರಲ್ಲಿ ಬಂದಾಗಿನಿಂದಲೂ ಈ ಸ್ವಾಮೀಜಿಗಳು ಸಮಸ್ಯೆ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿ ಮಕ್ಕಳ ಅಪೌಷ್ಟಿಕತೆ ಶೇ. 37ರಷ್ಟಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಕುಪೋಷಣೆಯ ಪ್ರಮಾಣ ಇನ್ನೂ ಹೆಚ್ಚಿದೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ


ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಸರ್ಕಾರ ಕೊಡಬೇಕೆಂದು ನಿರ್ಧರಿಸಿದ್ದು ವೈಜ್ಞಾನಿಕ ಕಾರಣದಿಂದ. ಮಕ್ಕಳಲ್ಲಿ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತವಾಗಿದೆ. ಈ ಕಾರಣದಿಂದಾಗಿ ಮೊಟ್ಟೆ ಕೊಡಬೇಕೆಂದು ಸರ್ಕಾರ ವೈಜ್ಞಾನಿಕ ಆಧಾರದಲ್ಲಿ, ತಜ್ಞರ ಶಿಫಾರಸ್ಸಿನಂತೆ ಕ್ರಮ ಕೈಗೊಡಿದೆ. ಮೊಟ್ಟೆಗಳನ್ನು ಕೊಡುವುದು ಜನರು ಕಟ್ಟುತ್ತಿರುವ ತೆರಿಗೆ ಹಣದಲ್ಲೇ ಹೊರತು ಸ್ವಾಮೀಜಿಯ ಹಣದಲ್ಲಿ ಅಲ್ಲ. ಸುಪ್ರಿಂಕೋರ್ಟ್ ಆದೇಶದ ಅನ್ವಯ ಮಧ್ಯಾಹ್ನದ ಬಿಸಿಯೂಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು ಎಲ್ಲ ರಾಜ್ಯಗಳಲ್ಲಿ ನೀಡುತ್ತಿವೆ.

ಈ ಹದಿಮೂರು ವರ್ಷಗಳಲ್ಲಿ ವೈದ್ಯರು, ವೈಜ್ಞಾನಿಕ ಕಾರ್ಯಕರ್ತರು ಈ ರಾಜ್ಯದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲು ಒತ್ತಡ ಹಾಕಿರುವುದಕ್ಕೆ ಬೆಲೆಯೇ ಇಲ್ಲವಾ? ಈ ಮೂರ್ನಾಲ್ಕು ಸ್ವಾಮೀಜಿಗಳು ಹೇಳಿದ್ದಕ್ಕಷ್ಟೇ ಬೆಲೆ ಎನ್ನುವುದಕ್ಕೆ ಅರ್ಥವೇನಿದೆ? ಮಕ್ಕಳಿಗೆ ನೀಡುವ ಮೊಟ್ಟೆಗೆ ಪರ್ಯಾಯವಿಲ್ಲ. ಯಾವುದೇ ಸಸ್ಯಾಹಾರವು, ಮಾಂಸಾಹಾರಕ್ಕೆ ಪರ್ಯಾಯ ಅಲ್ಲವೇ ಅಲ್ಲ. ಯಾವುದೇ ಸಸ್ಯಾಹಾರದಲ್ಲಿ ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್ ಸಿಗುವುದಿಲ್ಲ. ಈ ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರ ತಿನ್ನುವವರು. ಶೇ. 12ರಿಂದ 20ರಷ್ಟು ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಡಿ.

ಮದನ್‌ ಮೋಹನ್‌ ಅವರು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಇದೇ ರಾಜ್ಯ ಸರ್ಕಾರ ಸರ್ವೇ ಮಾಡಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗಲೇ ಮಾಡಿದ್ದ ಸರ್ವೇ ಅದು. ಶೇ. 95ರಷ್ಟು ಮಕ್ಕಳು ನಮಗೆ ಹಾಲು ಬೇಡ, ಮೊಟ್ಟೆ ಬೇಕು ಎಂದು ಹೇಳಿದರು. ವಿಜ್ಞಾನಿಗಳು, ವೈದ್ಯರು, ಪ್ರಜ್ಞಾವಂತರು, ಸ್ವತಃ ಮಕ್ಕಳೇ ತಮಗೆ ಮೊಟ್ಟೆ ಬೇಕು ಎಂದು ಹೇಳಿರುವಾಗ, ಐದು ದಿನಗಳು ಮೊಟ್ಟೆ ನೀಡಲು ಬೇಕಾದಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡುವಾಗ ಇವರ್‍ಯಾರು ನಾಲ್ಕು ಜನ ಮೊಟ್ಟೆ ಬೇಡ ಎನ್ನುವವರು? ಈ ಹದಿಮೂರು ವರ್ಷಗಳಿಂದ ಇವರ ಬುದ್ಧಿ ಸರಿ ಇರಲಿಲ್ಲವಾ?

“ಬೇಡ ಎನ್ನುವವರ ಮಕ್ಕಳಿಗೆ ಮೊಟ್ಟೆ ಕೊಡಬೇಡಿ, ನಮ್ಮ ಮಕ್ಕಳಿಗೆ ಕೊಡಿ” ಎಂದು ಪೋಷಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ. ತಮ್ಮ ಮಕ್ಕಳಿಗೆ ಮೊಟ್ಟೆ ಬೇಡ ಎನ್ನವವವರಿಗೆ ಕೊಡುವುದು ಬೇಡ ಬಿಡಿ. ಬೇಕಿದ್ದವರಿಗೆ ಕೊಡಬಹುದಲ್ಲ! ಅದಕ್ಕೆ ಅಡ್ಡಿ ಬರುವುದಕ್ಕೆ ಇವರಿಗೆ ಅಧಿಕಾರ ಕೊಟ್ಟಿವವರು ಯಾರು?

***

ಡಾ.ಎಚ್‌.ವಿ.ವಾಸು ಅವರ ಅಭಿಪ್ರಾಯ

ಹಸಿವು ಮತ್ತು ಅಪೌಷ್ಟಿಕತೆ ನಮ್ಮ ದೇಶದಲ್ಲಿ ಇಂದಿಗೂ ಮುಂದುವರೆಯುತ್ತಿರುವುದು ಆರ್ಥಿಕ ದಾರಿದ್ರ್ಯದಿಂದ ಅಲ್ಲ. ಬೌದ್ಧಿಕ ಮತ್ತು ಸಾಂಸ್ಕೃತಿಕ ದಾರಿದ್ರ್ಯದಿಂದ ಮತ್ತು ಹುನ್ನಾರಗಳ ಕಾರಣದಿಂದ.

ಕೋಟಿಗಟ್ಟಲೆ ಮಕ್ಕಳು ಕ್ಯಾಲೊರಿ ಅಪೌಷ್ಟಿಕತೆಯಿಂದ ಬಾಧಿತರಾಗಿದ್ದರೆ, ಕೋಟಿ ಕೋಟಿ ಜನರು ಅತಿ ಹೆಚ್ಚು ಶರ್ಕರಪಿಷ್ಟವನ್ನು ಮಾತ್ರ ತಿಂದು ಪ್ರೋಟೀನ್ ಹಾಗೂ ಇನ್ನಿತರ ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಬಡವರೂ ಡಯಾಬಿಟಿಕ್ ಆಗುವುದು ನಮ್ಮ ದೇಶದಲ್ಲಿ ಮಾತ್ರ ಎನಿಸುತ್ತದೆ.

ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ.

ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...