Homeಮುಖಪುಟಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆ ಕುರಿತ ಎರಡು ಭಾಗಗಳ ಸಾಕ್ಷ್ಯಚಿತ್ರದಿಂದ ಭಾರತ, ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ಬಿಬಿಸಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಜಸ್ಟಿಸ್ ಆನ್ ಟ್ರಯಲ್ ಎಂಬ ಗುಜರಾತ್ ಮೂಲದ ಸರ್ಕಾರೇತರ ಸಂಸ್ಥೆ ಈ ಪ್ರಕರಣವನ್ನು ದಾಖಲಿಸಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸೆಪ್ಟೆಂಬರ್‌ನಲ್ಲಿ ವಿಚಾರಣೆಗೆ ಪಟ್ಟಿ ಮಾಡಿದ್ದಾರೆ. ಇದೀಗ ದೆಹಲಿ ಹೈಕೋರ್ಟ್‌ ಬ್ರಿಟನ್‌ನ ಬಿಬಿಸಿ ಸಂಸ್ಥೆಗೆ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಬಿಬಿಸಿಯು ‘ಭಾರತ: ಮೋದಿ ಪ್ರಶ್ನೆ’ ಎನ್ನುವ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಜನವರಿ 17 ರಂದು ಬಿಡುಗಡೆ ಮಾಡಿತು. ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು, ಆ ಹತ್ಯಾಕಾಂಡದ ವಾತಾವರಣಕ್ಕೆ ನೇರ ಹೊಣೆಗಾರರಾಗಿದ್ದಾರೆ. 2002ರ ಗಲಭೆಗಳು ಮತ್ತು ಅವರು ಮಧ್ಯಪ್ರವೇಶಿಸದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದರು ಎಂದು ಆ ಸಾಕ್ಷ್ಯ ಚಿತ್ರ ಹೇಳುತ್ತದೆ.

ಈ ಗಲಭೆಯಲ್ಲಿ 1,000 ಕ್ಕೂ ಹೆಚ್ಚು ಜನರು ಮುತ್ತಪಟ್ಟರು ಅವರಲ್ಲಿ ಹೆಚ್ಚಿನವರು ಮುಸ್ಲಿಂರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಈ ಸಾಕ್ಷ್ಯಚಿತ್ರವು ಮಾನಹಾನಿಕರವಾದ ಆರೋಪವನ್ನು ಮಾಡುತ್ತದೆ. ದೇಶ ಮತ್ತು ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಪ್ರಧಾನ ಮಂತ್ರಿಯ ವಿರುದ್ಧ ನಿಂದನೆಗಳನ್ನು ಮಾಡುತ್ತದೆ ಎಂದು ವಾದಿಸಲಾಗಿದೆ. ಹೀಗಾಗಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಎನ್‌ಜಿಒ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ. ಎರಡು ಭಾಗಗಳಲ್ಲಿರುವ ಸಾಕ್ಷ್ಯಚಿತ್ರವು ನ್ಯಾಯಾಂಗ ಸೇರಿದಂತೆ ದೇಶವನ್ನು ದೂಷಿಸಿದೆ ಎಂದು ಅವರು ಪ್ರತಿಪಾದಿಸಿದರು.

ಇತ್ತೀಚೆಗೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಬಿಬಿಸಿ, ವಿಕಿಮೀಡಿಯಾ ಫೌಂಡೇಶನ್ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್‌ ನೀಡಿತ್ತು. ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್‌ಗೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷ್ಯಚಿತ್ರ ಪ್ರಕಟಿಸದಂತೆ ತಡೆಯಬೇಕೆಂದು ಬಿಜೆಪಿ ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಪ್ರಕರಣ ವಿಚಾರಣೆ ಮಾಡಿದ ಬಳಿಕ ವಿಚಾರಣಾ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆಗ ಗಲಭೆಯನ್ನು ಹತ್ತಿಕ್ಕುವಲ್ಲಿ ಮೋದಿ ನಿರ್ವಹಿಸಿದ್ದ ಪಾತ್ರ ಅನುಮಾನಾಸ್ಪದವಾಗಿದೆ ಎಂದು ಬಿಬಿಸಿಯ ಸಾಕ್ಷ್ಯಚಿತ್ರದಲ್ಲಿ ಆರೋಪಿಸಲಾಗಿತ್ತು. ಈ ಸಾಕ್ಷ್ಯಚಿತ್ರವನ್ನು ದೇಶದಲ್ಲಿ ಪ್ರಸಾರ ಆಗದಂತೆ ಮೋದಿ ಸರ್ಕಾರ ನಿಯಂತ್ರ ಹೇರಿತ್ತು. ಮಾಹಿತಿ ತಂತ್ರಜ್ಞಾನ ನಿಯಮಗಳು, 2021ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಬಳಸಿ, ಅದರ ಕ್ಲಿಪ್‌ಗಳನ್ನು ಹಂಚಿಕೊಳ್ಳದಂತೆ ತಡೆಯಲು ನಿರ್ದೇಶನಗಳನ್ನು ನೀಡಿತು.

ಇದಕ್ಕೂ ಮೊದಲು ಮೇ 3 ರಂದು, ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಸಲ್ಲಿಸಿದ ಮಾನನಷ್ಟ ದೂರಿನ ಮೇರೆಗೆ ದೆಹಲಿ ನ್ಯಾಯಾಲಯವು BBC, ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್ ಜಾರಿ ಮಾಡಿತ್ತು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ. ಹಾಗಾಗಿ ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಸಿಂಗ್ ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದರು.

ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ BBC ಬೆದರಿಕೆಗಳನ್ನು ಎದುರಿಸುತ್ತಿದೆ. ಬಿಡುಗಡೆಯಾದ ಕೇವಲ ಒಂದು ತಿಂಗಳ ನಂತರ, ಭಾರತದಲ್ಲಿರುವ ಅವರ ಕಛೇರಿಗಳ ಮೇಲೆ ಐಟಿ ದಾಳಿ ನಡೆಸಿತು. ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆ ಹೆಸರಿನಲ್ಲಿ ದಾಳಿ ನಡೆಸಿತು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಹೊಂದಾಣಿಕೆಯಾಗಿಲ್ಲ ಎಂದು ತೆರಿಗೆ ಇಲಾಖೆ ಹೇಳಿಕೊಂಡಿದೆ.

ಕಳೆದ ತಿಂಗಳು, ಜಾರಿ ನಿರ್ದೇಶನಾಲಯವು (ಇಡಿ) ಬಿಬಿಸಿ ಇಂಡಿಯಾ ವಿರುದ್ಧ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ಪ್ರಕರಣವನ್ನು ದಾಖಲಿಸಿದೆ. ಬ್ರಿಟಿಷ್ ಬ್ರಾಡ್‌ಕಾಸ್ಟರ್‌ನ ಭಾರತ ಘಟಕದ ವಿದೇಶಿ ರವಾನೆಗಳನ್ನು ಪರಿಶೀಲಿಸಿದ ನಂತರ ಕೇಂದ್ರೀಯ ಏಜೆನ್ಸಿಯು ಮಾಧ್ಯಮ ಕಂಪನಿಯನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...