Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...