Homeಕರ್ನಾಟಕದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ಎರಡು ವರ್ಷದ ಹಿಂದಿನ ಕಾರ್ಯಕ್ರಮದ ಶುಲ್ಕ ಪಾವತಿಸುವಂತೆ ಈಗ ಸೂಚಿಸಿದ ಕಾಲೇಜು

- Advertisement -
- Advertisement -

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ,ಈಗ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

2022ರ ನವೆಂಬರ್ 4 ಮತ್ತು 5ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು (ಕೆಎಸ್‌ಹೆಚ್‌ಇಸಿ) ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಜಂಟಿಯಾಗಿ ‘Financial Education and Investment Awareness Course’ವಿಷಯಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನಡೆಸಿತ್ತು. ಅದರ ಶುಲ್ಕ 150 ರೂಪಾಯಿಯನ್ನು ಪಾವತಿಸುವಂತೆ ಈಗ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

2021-22ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಸ್ತುತ 6ನೇ ಸೆಮಿಸ್ಟರ್‌ ಬಿಎ, ಬಿಕಾಂ ಮತ್ತು ಬಿಎಸ್ಸಿ ತರಗತಿಗಳನ್ನು ವ್ಯಾಸಂಗ ಮಾಡುತ್ತಿರುವ (ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ 150 ರೂ. ಪಾವತಿಸುವಂತೆ ಪ್ರಾಂಶುಪಾಲರ ಕಚೇರಿಯಿಂದ 26 ಜೂನ್ 2024ರಂದು ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಅಣಿಯಾಗಿದ್ದು, ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಹಾಲ್‌ ಟಿಕೆಟ್ ತಡೆ ಹಿಡಿಯುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಬಿಎಸ್ಸಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ವಿನಾಯಕ್ ” ಖಾಸಗಿ ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ನಾವು ಸರ್ಕಾರಿ ಕಾಲೇಜಿಗೆ ಸೇರಿದ್ದೇವೆ. ಇಲ್ಲೂ ಈ ರೀತಿ ಹೆಚ್ಚುವರಿ ಹಣ ಪಾವತಿಸಲು ಸೂಚಿಸಿದರೆ ಬಡ ವಿದ್ಯಾರ್ಥಿಗಳಾದ ನಾವು ಏನು ಮಾಡುವುದು? ಎಂದು ಅಳಲು ತೋಡಿಕೊಂಡಿದ್ದಾರೆ.

“ಪ್ರಸ್ತುತ 6ನೇ ಸೆಮಿಸ್ಟರ್ ಪರೀಕ್ಷೆ ಹತ್ತಿರ ಬಂದಿದೆ. ಆದರೆ, ನಮಗೆ 5ನೇ ಸೆಮಿಸ್ಟರ್ ಫಲಿತಾಂಶವನ್ನೇ ತಿಳಿಸಿಲ್ಲ. 6ನೇ ಸೆಮಿಸ್ಟರ್ ಪರೀಕ್ಷೆ ಕೂಡ ತಡವಾಗಿ ನಡೆಸಲಾಗ್ತಿದೆ. ಇದರಿಂದ ಸ್ನಾತಕ್ಕೋತ್ತರ ತರಗತಿಗೆ ಪ್ರವೇಶ ಪಡೆಯಲು ನಮಗೆ ಸಮಸ್ಯೆಯಾಗ್ತಿದೆ” ಎಂದಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಮನೋಜ್ ಮಾತನಾಡಿ “ವರ್ಷಕ್ಕೆ 2,700 ರೂಪಾಯಿ ಕಾಲೇಜು ಶುಲ್ಕ ಪಾವತಿಸಿದ್ದೇವೆ. 5ನೇ ಸೆಮಿಸ್ಟರ್ ಪರೀಕ್ಷೆಗೆ 750 ರೂ. ಶುಲ್ಕ ಪಾವತಿಸಿದ್ದೇವೆ. ಈಗ 6ನೇ ಸೆಮಿಸ್ಟರ್‌ಗೆ ಶುಲ್ಕ ಹೆಚ್ಚಿಸಿ 950 ರೂ. ಮಾಡಲಾಗಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇದು ನಮಗೆ ಬಹಳ ಹೊರೆಯಾಗ್ತಿದೆ. 150 ರೂ. ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿನ ಪರಿಸ್ಥಿಗೆ ಸಿಲುಕಿದ್ದೇವೆ” ಎಂದು ತಿಳಿಸಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಸ್ನೇಹಾ ಮಾತನಾಡಿ, “ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ ಈಗ ನಮ್ಮಿಂದ ಶುಲ್ಕ ವಸೂಲಿ ಮಾಡಲಾಗ್ತಿದೆ. ಗ್ರಾಮೀಣ ಬಡ ವಿದ್ಯಾರ್ಥಿಗಳಾದ ನಮಗೆ ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ ಹಣ ಪಾವತಿಸಲು ಸಾಧ್ಯವಿಲ್ಲ. ನಾವು ಹೆಚ್ಚುವರಿ ಹಣ ಪಾವತಿಸುವುದೂ ಇಲ್ಲ. ಯಾವುದೇ ವಿದ್ಯಾರ್ಥಿಯೂ ಹಣ ಪಾವತಿಸಿಲ್ಲ. ಮುಂದಿನ ನಡೆಯ ಬಗ್ಗೆ ನಾವು ಚರ್ಚಿಸುತಿದ್ದೇವೆ” ಎಂದಿದ್ದಾರೆ.

ದೂರವಾಣಿ ಮೂಲಕ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಮೂವರೂ ಕೂಡ “ನಮ್ಮಂತೆ ನೂರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಅವರು “ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ವಿಶ್ವವಿದ್ಯಾನಿಲಯದ ಆದೇಶವನ್ನು ನಾವು ಪಾಲಿಸಿದ್ದೇವೆ. ಕೆಎಸ್‌ಹೆಚ್‌ಇಸಿ ಮತ್ತು ವಿವಿ ತರಬೇತಿ ನಡೆಸಿತ್ತು. ಈಗ ಶುಲ್ಕ ವಸೂಲಿ ಮಾಡುವಂತೆ ನಮಗೆ ಸೂಚಿಸಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಈ ಬಗ್ಗೆ ವಿವಿಯನ್ನೇ ವಿಚಾರಿಸಬೇಕಿದೆ” ಎಂದು ಹೇಳಿದ್ದಾರೆ.

5ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾತನಾಡಿದ ಅವರು ” ಕೋವಿಡ್ ಬಳಿಕ ಶೈಕ್ಷಣಿಕ ವರ್ಷ ಇನ್ನೂ ಹಳಿಗೆ ಬಂದಿಲ್ಲ. ಮುಂದಿನ ವರ್ಷದಿಂದ ಎಲ್ಲವೂ ಹಿಂದಿನ ರೀತಿಗೆ ಮರಳಲಿದೆ. ಜುಲೈ ತಿಂಗಳಲ್ಲಿ ಈ ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಎಲ್ಲಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ನಾತಕ್ಕೋತ್ತರ ಪದವಿ ಪ್ರವೇಶಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : 7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...