Homeಮುಖಪುಟದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ವೇಲ್ಫೇರ್‌ ಪಾರ್ಟಿ ಆಫ್‌ ಇಂಡಿಯಾ ಖಂಡನೆ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ವೇಲ್ಫೇರ್‌ ಪಾರ್ಟಿ ಆಫ್‌ ಇಂಡಿಯಾ ಖಂಡನೆ

- Advertisement -
- Advertisement -

ಸ್ವರಾಜ್‌ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಂಧನವನ್ನು ವೇಲ್ಫೇರ್‌ ಪಾರ್ಟಿ ಆಫ್‌ ಇಂಡಿಯಾ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇಲ್ಫೇರ್‌ ಪಾರ್ಟಿ ಆಫ್‌ ಇಂಡಿಯಾದ ರಾಜ್ಯಾಧ್ಯಕ್ಷರು, ವಕೀಲರು ಆದ ತಾಹೀರ್ ಹುಸೇನ್‌, ’ಹೋರಾಟಗಾರರನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರವು ಜನಪರ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ.

ಜನಪರ ಹೋರಾಟಗಳಲ್ಲಿ ಯಾವತ್ತೂ ಮೂಂಚೂಣಿಯಲ್ಲಿರುತ್ತಿದ್ದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು 25 ವರ್ಷದಿಂದ ತಲೆಮರೆಸಿಕೊಂಡಿದ್ದಾರೆಂದು ಪೊಲೀಸರು ಹೇಳುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ, ಅವರು ಸದಾ ಮುಖ್ಯವಾಹಿನಿ ಚಳವಳಿಯಲ್ಲಿದ್ದರು ಎಂದಿದ್ದಾರೆ.

ವಿಚಾರಣೆ ನೆಪದಲ್ಲಿ ಅವರನ್ನು ಬಂಧಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...