Homeಕರ್ನಾಟಕಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

- Advertisement -
- Advertisement -

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮೇಲಿಂದ ಮೇಲೆ ನಾಲಿಗೆ ಹರಿಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡುವುದರಲ್ಲಿ ಖ್ಯಾತಿ ಗಳಿಸಿದ್ದಾರೆ. ಇದೀಗ ಮತ್ತೆ ವಿವಾದಾತ್ಮಕ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ. ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಆಝಾನ್‍ ಕೇಳಿಸಿದೆ. ಅದನ್ನು ಸಹಿಸದ ಈಶ್ವರಪ್ಪ ಅಲ್ಲಿಯೇ ಸಿಟ್ಟು ಹೊರಹಾಕಿದ್ದಾರೆ.

ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಈಶ್ವರಪ್ಪ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಮಸೀದಿಯಿಂದ ಆಝಾನ್  ಕೇಳಿಬಂದಿದೆ. ಇದಕ್ಕೆ ಸಿಟ್ಟಾದ ಈಶರಪ್ಪ ”ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನೆ ಮಾಡಿದ್ದಾರೆ.

”ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್‌ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

”ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕೇಳುತ್ತದೆ ಎನ್ನುವುದಾದರೆ, ಅವನು ಕಿವುಡನಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು” ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆ ಬಳಿಕ ಮಂಗಳೂರಿನಲ್ಲಿ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ”ಮುಸ್ಲಿಮರ ಅಝಾನ್‌ ಕುರಿತು ಹೇಳಿಕೆ ವಿವಾದವಲ್ಲ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಅಲ್ಲಾಹುವಿನ ಬಗ್ಗೆ ಅವಹೇಳನ ಮಾಡಿಲ್ಲ. ಆದರೆ ಅಝಾನ್‌ ವಿಚಾರದಲ್ಲಿ ಯಾರಾದರೂ ಮಾತನಾಡಲೇಬೇಕಿತ್ತು, ಮಾತನಾಡಿದ್ದೇನೆ. ಅದು ಶ್ರೀಸಾಮಾನ್ಯನ ಅನಿಸಿಕೆ, ನಾನು ಅದನ್ನು ವ್ಯಕ್ತಪಡಿಸಿದ್ದೇನೆ” ಎಂದು ಹೇಳಿದರು.

”ಲೌಡ್‌ ಸ್ಪೀಕರ್‌ ನಲ್ಲಿ ಅಝಾನ್‌ನಿಂದ ಅನೇಕರಿಗೆ ತೊಂದರೆಯಾಗುತ್ತಿದೆ. ಸುಪ್ರೀಂಕೋರ್ಟ್‌ ತೀರ್ಪು ಅದರ ವಿರುದ್ಧವೇ ಇದೆ. ಮುಸ್ಲಿಂ ನಾಯಕರು ಈ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಬೇಕು” ಎಂದರು.

”ನಾನು ಮುಸ್ಲಿಮರ ಮತಗಳು ಬೇಡವೇ ಬೇಡ ಎಂದಿಲ್ಲ, ರಾಷ್ಟ್ರೀಯವಾದಿ ಮುಸ್ಲಿಮರ ಮತ ಇರಲಿ. ಚುನಾವಣೆ ಸಂದರ್ಭದಲ್ಲಿ ಮಾತನಾಡಿ ವಿವಾದ ಮಾಡುವ ವಿಚಾರ ಇಲ್ಲಿ ಬರುವುದೇ ಇಲ್ಲ. ಗೋಹತ್ಯೆ ತಡೆ ಕಾಯ್ದೆ, ಮತಾಂತರ ತಡೆ ಕಾಯ್ದೆ, ತ್ರಿವಳಿ ತಲಾಖ್‌ ರದ್ದು ಇತ್ಯಾದಿಗಳೆಲ್ಲವೂ ನಮ್ಮ ಸರಕಾರದ ಸಾಧನೆಗಳು. ಎಲ್ಲಾ ರಾಷ್ಟ್ರೀಯವಾದಿ ಮುಸ್ಲಿಮರೂ ಅದನ್ನು ಸ್ವಾಗತಿಸಿದ್ದಾರೆ. ಕಾಂಗ್ರೆಸ್‌ ಇಂತಹ ವಿಚಾರದಲ್ಲಿ ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳಿಗೆ ವಂಚನೆ ಮಾಡುತ್ತಾ ಬಂದಿದೆ” ಎಂದು ಕೆಎಸ್ ಈಶ್ವರಪ್ಪ ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...