Homeಮುಖಪುಟ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

- Advertisement -
- Advertisement -

ಹಿಂದಿ ಹೇರಿಕೆಗೆ ತಮಿಳುನಾಡಿನಲ್ಲಿ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ. ವಿವಿಧ ರಾಜ್ಯಗಳ ಜನರು ಹಿಂದಿ ಭಾಷೆಯಲ್ಲಿ ವ್ಯವಹರಿಸುವಂತೆ ಒ‌ಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ಈ ಹೇಳಿಕೆ ನೀಡಿದೆ.

ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಣ್ಣಾಮಲೈ, “ನಮಗೆ ಕೆಲಸ, ಶಿಕ್ಷಣ ಅಥವಾ ಇತರ ಉದ್ದೇಶಗಳಿಗಾಗಿ ಅಗತ್ಯವಿದ್ದರೆ ನಾವು ಹಿಂದಿ ಕಲಿಯುತ್ತೇವೆ. ಆದರೆ ಹಿಂದಿ ಹೇರಿಕೆ ಮಾಡಲು ಸಾಧ್ಯವಿಲ್ಲ. ನಾನೂ ಸೇರಿದಂತೆ ಇಲ್ಲಿ ಯಾರೂ ಹಿಂದಿ ಮಾತನಾಡುವುದಿಲ್ಲ. ನಾವು ಭಾರತೀಯರು ಎಂದು ಸಾಬೀತುಪಡಿಸಲು ನಾವು ಭಾಷೆಯೊಂದನ್ನು ಕಲಿಯಬೇಕಾದ ಪರಿಸ್ಥಿತಿ ಇಲ್ಲಿ ಇಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ 40 ವರ್ಷಗಳಿಂದ ಹಿಂದಿ ಭಾಷೆಯ ವಿಷಯದಲ್ಲಿ ರಾಜಕೀಯ ಮಾಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿಯನ್ನು ಮುಖ್ಯ ಭಾಷೆಯನ್ನಾಗಿ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಅನುಮೋದಿಸಲಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಹಿಂದಿಯನ್ನು ಐಚ್ಛಿಕ ಭಾಷೆಯನ್ನಾಗಿ ಮಾಡಿದ ಅಂತಿಮ ವರದಿಯನ್ನು ಸಂಪುಟ ಪರಿಶೀಲಿಸಿದ ನಂತರವೇ ಮೋದಿ ಅನುಮತಿ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು ಹೇಳಿಕೆ ನೀಡಿದ್ದ ಸಂಗೀತಗಾರ ಎ.ಆರ್.ರೆಹಮಾನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಣ್ಣಾ ಮಲೈ, “ತಮಿಳು ಭಾರತದ ಸಂಪರ್ಕ ಭಾಷೆಯಾದರೆ, ಅದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಆದರೆ ತಮಿಳು ಭಾಷೆ ಆ ಜಾಗವನ್ನು ಸಾಧಿಸಲು ನಾವು ಪ್ರಯತ್ನಗಳನ್ನು ಮಾಡಿದ್ದೇವೆಯೇ?” ಎಂದು ಪ್ರಶ್ನಿಸಿದ್ದಾರೆ.

ತಮಿಳನ್ನು ಸಂಪರ್ಕ ಭಾಷೆಯನ್ನಾಗಿ ಮಾಡಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೊದಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಬೇಕು. ಆಯಾ ರಾಜ್ಯಗಳ ಕನಿಷ್ಠ 10 ಶಾಲೆಗಳಲ್ಲಿ ಸಂಪೂರ್ಣವಾಗಿ ತಮಿಳಿನಲ್ಲಿ ಕಲಿಸುವಂತೆ ಕೇಳಿಕೊಳ್ಳಬೇಕೆಂದು ಅಣ್ಣಾಮಲೈ ಹೇಳಿದ್ದಾರೆ. ಇದಲ್ಲದೆ, ಇದರ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅವರಿಗೆ ಭರವಸೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಹಿಂದಿ ಹೇರಿಕೆ ಮಾಡುವ ಅಮಿತ್‌ ಶಾ ಅವರ ನಡೆಯು ಭಾರತದ ಸಮಗ್ರತೆ ಮತ್ತು ಬಹುತ್ವಕ್ಕೆ ವಿರುದ್ಧವಾಗಿದೆ ಮತ್ತು ಅದು ಯಶಸ್ವಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಟಾಲಿನ್ ಈ ಹಿಂದೆ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಗುಜರಾತಿ ಮಾತೃಭಾಷೆಯ ಅಮಿತ್‌ ಶಾ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಕರ್ನಾಟಕದ ಯಾವೊಬ್ಬ ಬಿಜೆಪಿ ನಾಯಕನಿಗೂ ಇಂತಹ ದೈರ್ಯ ಇಲ್ಲದಿರುವುದು ನಮ್ಮ ದುರಂತ.

  2. ಇದು ತಾಯಿಯ ನೆಲದಿಂದ ಹುಟ್ಟಿದ ಅಪ್ಪಟ ಅಪ್ಪನಿಗೆ ಹುಟ್ಟಿದ ಮಾತಾಗಿದೆ
    ಧನ್ಯವಾದಗಳು ಅವರಿಗೆ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...