ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವನಾತ್ಮಕ ಭಾಷಣಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕ್ಯಾಮೆರಾಗಳು ಆನ್ ಆಗಿರುವಾಗ ಮಾತ್ರ ಅವರ ರಕ್ತ ಕುದಿಯುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ಆಯೋಜಿಸಿದ್ದಕ್ಕಾಗಿ ಮತ್ತು ಬೆಂಬಲಿಸಿದ್ದಕ್ಕಾಗಿ ಪಾಕಿಸ್ತಾನ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಆಪರೇಷನ್ ಸಿಂಧೂರ್ ಸ್ಪಷ್ಟಪಡಿಸಿದೆ ಎಂದು ಪ್ರಧಾನಿ ಮೋದಿ ಗುರುವಾರದಂದು ರಾಜಸ್ಥಾನದಲ್ಲಿ ಹೇಳಿದ್ದಾರೆ. “ನನ್ನ ರಕ್ತನಾಳಗಳಲ್ಲಿ ಕೇವಲ ರಕ್ತ ಮಾತ್ರ ಹರಿಯುತ್ತಿಲ್ಲ, ಬದಲಾಗಿ ಬಿಸಿ ಸಿಂಧೂರ್ (ಸಿಂಧೂರ)ವು ಕುದಿಯುತ್ತಿದೆ” ಎಂದು ಮೋದಿ ಘೋಷಿಸಿದ್ದರು.
“ಮೋದಿಜೀ, ಟೊಳ್ಳು ಭಾಷಣಗಳನ್ನು ಮಾಡುವುದನ್ನು ನಿಲ್ಲಿಸಿ. ಭಯೋತ್ಪಾದನೆಯ ಕುರಿತು ಪಾಕಿಸ್ತಾನದ ಹೇಳಿಕೆಯನ್ನು ನೀವು ಏಕೆ ನಂಬಿದ್ದೀರಿ ಎಂದು ಹೇಳಿ? ಟ್ರಂಪ್‌ಗೆ ನಮಸ್ಕರಿಸುವ ಮೂಲಕ ನೀವು ಭಾರತದ ಹಿತಾಸಕ್ತಿಗಳನ್ನು ಏಕೆ ತ್ಯಾಗ ಮಾಡಿದ್ದೀರಿ? ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಕುದಿಯುತ್ತದೆಯೇ? ನೀವು ಭಾರತದ ಗೌರವಕ್ಕೆ ಧಕ್ಕೆ ತಂದಿದ್ದೀರಿ!” ಎಂದು ಗಾಂಧಿ ಎಕ್ಸ್‌ನಲ್ಲಿ ಬರೆದಿದ್ದಾರೆ.
ಗುರುವಾರದಂದು, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಧಾನಿ ನರೇಂದ್ರ ಮೋದಿಯವರು ಭವ್ಯವಾದ ಆದರೆ ಟೊಳ್ಳಾದ ಚಲನಚಿತ್ರ ಶೈಲಿಯ ಸಂಭಾಷಣೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಇಂದು ಬಿಕಾನೇರ್‌ನಲ್ಲಿ ಮಾಡಿದಂತೆ ಸಾರ್ವಜನಿಕ ರ್ಯಾಲಿಗಳಲ್ಲಿ ಭವ್ಯವಾದ ಆದರೆ ಟೊಳ್ಳಾದ ಚಲನಚಿತ್ರ ಸಂಭಾಷಣೆಗಳನ್ನು ಮಾಡುವ ಬದಲು, ಪ್ರಧಾನಿ ತಮ್ಮ ಬಗ್ಗೆ ಕೇಳಲಾಗುತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಜೈರಾಮ್ ರಮೇಶ್ ಪೋಸ್ಟ್ ಮಾಡಿದ್ದಾರೆ.
“ಪಹಲ್ಗಾಮ್‌ನ ಕ್ರೂರ ಹಂತಕರು ಇನ್ನೂ ಏಕೆ ಮುಕ್ತರಾಗಿದ್ದಾರೆ. ಕೆಲವು ವರದಿಗಳ ಪ್ರಕಾರ ಕಳೆದ 18 ತಿಂಗಳುಗಳಲ್ಲಿ ಪೂಂಚ್, ಗಗಂಗೀರ್ ಮತ್ತು ಗುಲ್ಮಾರ್ಗ್‌ನಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಗಳಿಗೆ ಅವರು ಕಾರಣರಾಗಿದ್ದರು. ನೀವು ಯಾವುದೇ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿಲ್ಲ ಮತ್ತು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಏಕೆ?” ಎಂದು ಅವರು ಪ್ರಶ್ನಿಸಿದರು.
ರಾಜಸ್ಥಾನಕ್ಕೆ ನೀಡಿದ ಭೇಟಿಯಲ್ಲಿ ಬಾಲಾಕೋಟ್ ವಾಯುದಾಳಿಯನ್ನು ಪ್ರಧಾನಿ ನೆನಪಿಸಿಕೊಂಡಿದ್ದಾರೆ. ಏಪ್ರಿಲ್ 22ರಂದು ಭಯೋತ್ಪಾದಕರು ನಮ್ಮ ಸಹೋದರಿಯರ ಹಣೆಯ ಮೇಲಿನ ಸಿಂಧೂರವನ್ನು ಅವರ ಧರ್ಮದ ಬಗ್ಗೆ ಕೇಳುವ ಮೂಲಕ ನಾಶಪಡಿಸಿದರು. ಭಯೋತ್ಪಾದಕರ ಆ ಗುಂಡುಗಳು 140 ಕೋಟಿ ದೇಶವಾಸಿಗಳ ಹೃದಯಗಳನ್ನು ಚುಚ್ಚಿದವು. ಇದರ ನಂತರ ದೇಶದ ಪ್ರತಿಯೊಬ್ಬ ನಾಗರಿಕರು ಒಗ್ಗೂಡಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಿರ್ಧರಿಸಿದರು. ಅವರು ಊಹಿಸುವುದಕ್ಕಿಂತ ಹೆಚ್ಚಿನ ಮಟ್ಟದಲ್ಲಿ ನಾವು ಅವರನ್ನು ಶಿಕ್ಷಿಸುತ್ತೇವೆ ಎಂದು ರಾಹುಲ್ ಹೇಳಿದರು.
ಈ ತಿಂಗಳ ಆರಂಭದಲ್ಲಿ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳನ್ನು ನಾಶಮಾಡುವ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಂಡಿತು. ನಂತರ ಭಾರತವು ಭಾರತೀಯ ಮಿಲಿಟರಿ ಸ್ಥಾಪನೆಗಳು ಮತ್ತು ನಾಗರಿಕ ಪ್ರದೇಶಗಳ ಮೇಲೆ ಪಾಕಿಸ್ತಾನಿ ಸಶಸ್ತ್ರ ಪಡೆಗಳ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ವಾಯುನೆಲೆಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡಿತು.
ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳು ಕದನ ವಿರಾಮ ಒಪ್ಪಂದಕ್ಕೆ ಬಂದ ನಂತರ ನಾಲ್ಕು ದಿನಗಳ ಕಾಲ ನಡೆದ ಯುದ್ಧವನ್ನು ವಿರಾಮಗೊಳಿಸಲಾಯಿತು.


