Homeಮುಖಪುಟಮತಯಂತ್ರಗಳನ್ನು ಹಾಳು ಮಾಡಲಾಗುತ್ತಿದೆ: ಆಮ್‌ ಆದ್ಮಿ ಪಕ್ಷ ಆರೋಪ

ಮತಯಂತ್ರಗಳನ್ನು ಹಾಳು ಮಾಡಲಾಗುತ್ತಿದೆ: ಆಮ್‌ ಆದ್ಮಿ ಪಕ್ಷ ಆರೋಪ

ಮೀಸಲು ಪಡೆಗಳು ಇವಿಎಂನೊಂದಿಗೆ ಹೋಗುವುದಿಲ್ಲವೇ? ಈ ಅಧಿಕಾರಿಯನ್ನು ಇವಿಎಂನೊಂದಿಗೆ ಬಾಬರ್‌ಪುರ ವಿಧಾನಸಭಾ ಕ್ಷೇತ್ರದ ಸರಸ್ವತಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಜನರು ಹಿಡಿದಿದ್ದಾರೆ ಎಂದು ಆಪ್‌ ಸಂಸದರು ಆರೋಪಿಸಿದ್ದಾರೆ.

- Advertisement -
- Advertisement -

ದೆಹಲಿಯ ಆಡಳಿತಾರೂಢ ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್‌ರವರು ವಿಧಾನಸಭಾ ಚುನಾವಣೆಯ ನಂತರ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು ಹಾಳುಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳಲು ಅವರು ಒಂದೆರಡು ವೀಡಿಯೊಗಳನ್ನು ಟ್ವೀಟ್ ಮಾಡಿದ್ದಾರೆ. ಮೀಸಲು ಪಡೆಗಳು ಇವಿಎಂನೊಂದಿಗೆ ಹೋಗುವುದಿಲ್ಲವೇ? ಈ ಅಧಿಕಾರಿಯನ್ನು ಇವಿಎಂನೊಂದಿಗೆ ಬಾಬರ್‌ಪುರ ವಿಧಾನಸಭಾ ಕ್ಷೇತ್ರದ ಸರಸ್ವತಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಜನರು ಹಿಡಿದಿದ್ದಾರೆ” ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

ಅಲ್ಲದೇ ಮತದಾನ ಯಂತ್ರಗಳನ್ನು ಹಲವು ರಸ್ತೆಗಳಲ್ಲಿ ಸಾಗಿಸಲಾಗಿದೆಯೆಂದು ಆರೋಪಿಸಿದ ಅವರು, “ಈ ಇವಿಎಂಗಳನ್ನು ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿದೆ? ಇಲ್ಲಿ ಹತ್ತಿರದಲ್ಲಿ ಯಾವುದೇ ಕೇಂದ್ರಗಳಿಲ್ಲ. ಇದರ ಬಗ್ಗೆಯೂ ಚುನಾವಣಾ ಆಯೋಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಆದರೆ ಮತದಾನಕ್ಕೆ ಬಳಸಿದ ಎಲ್ಲಾ ಇವಿಎಂಗಳನ್ನು ಪಕ್ಷದ ಏಜೆಂಟರ ಮುಂದೆ ಮೊಹರು ಮಾಡಲಾಗಿದೆ ಮತ್ತು ಮತದಾನ ಕೇಂದ್ರಗಳಿಂದ ನೇರವಾಗಿ ಸುರಕ್ಷತಾ ಕೊಠಡಿಗಳಿಗೆ ತರಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

“ಮತದಾನಕ್ಕಾಗಿ ಬಳಸಲಾದ ಎಲ್ಲಾ ಇವಿಎಂಗಳನ್ನು ಲೆಕ್ಕಹಾಕಲಾಗಿದೆ. ಇವಿಎಂಗಳನ್ನು ಪೊಲೀಸ್ ರಕ್ಷಣೆಯೊಂದಿಗೆ ಕೇಂದ್ರಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲಾಗಿದೆ. ಪಕ್ಷದ ಏಜೆಂಟರು ಬಯಸಿದಲ್ಲಿ ಕೇಂದ್ರದ ಹೊರಗೆ ಉಳಿಯಲು ಅವಕಾಶವಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಆದರೆ ನಿನ್ನೆ ಚುನಾವಣೆ ಕೊನೆಗೊಂಡಾಗಿನಿಂದ, ಇಎವಿಗಳಿಗೆ ಸಂಬಂಧಿಸಿದಂತೆ ಎಎಪಿ ತನ್ನ ಅನುಮಾನಗಳನ್ನು ವ್ಯಕ್ತಪಡಿಸಿದೆ. ಸಂಜೆ ತಡವಾಗಿ ಅಧಿಕಾರಿಗಳು ಇವಿಎಂಗಳನ್ನು “ಅನಧಿಕೃತ ರೀತಿಯಲ್ಲಿ” ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಆಪ್‌ ಪಕ್ಷ ಹೇಳಿದೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ 2017 ರ ವಿಧಾನಸಭಾ ಚುನಾವಣೆಯ ನಂತರ ಇವಿಎಂ ಮತ್ತು ಇವಿಎಂ ಟ್ಯಾಂಪರಿಂಗ್ ಆರೋಪದ ಮೇಲೆ ಎಎಪಿ ಧ್ವನಿ ಎತ್ತಿದೆ. ಚುನಾವಣಾ ಆಯೋಗ ಅದನ್ನು ನಿರಾಕರಿಸಿದರೂ ಮತ್ತು ಯಂತ್ರಗಳನ್ನು ಹ್ಯಾಕ್ ಮಾಡುವಂತೆ ವಿರೋಧ ಪಕ್ಷಗಳಿಗೆ ಸವಾಲು ಹಾಕಿದರೂ ಆರೋಪಗಳು ಮುಂದುವರೆದಿದೆ. ಎಎಪಿ ಈ ಸವಾಲನ್ನು ಸ್ವೀಕರಿಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...