Homeಕೊರೊನಾಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಡಿಸಿಯಿಂದ ಮುಚ್ಚಳಿಕೆ ಬರೆಸಿ ಲಸಿಕೆ ಪಡೆದ ವ್ಯಕ್ತಿ!

ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಡಿಸಿಯಿಂದ ಮುಚ್ಚಳಿಕೆ ಬರೆಸಿ ಲಸಿಕೆ ಪಡೆದ ವ್ಯಕ್ತಿ!

- Advertisement -
- Advertisement -

ಕರ್ನಾಟಕದ ಹಲವಾರು ಜನರು ಕೋವಿಡ್ ಲಸಿಕೆ ಪಡೆದಿದ್ದಾರೆ. ಆದರೆ ಮತ್ತಷ್ಟು ಜನರು ಲಸಿಕೆಯ ಅಡ್ಡಪರಿಣಾಮದ ಭಯದಿಂದ, ಇತರೆ ಗುಮಾನಿಗಳಿಂದ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಕಾರ್ಯಕರ್ತರು ಮನವೊಲಿಸಿದರೂ ಸಹ ಕೆಲವರು ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬ ಲಸಿಕೆಯಿಂದ ಅಡ್ಡಪರಿಣಾಮವಿಲ್ಲ ಎಂಬ ಗ್ಯಾರಂಟಿ ಕೊಡ್ತೀರಾ? ಎಂದು ಪ್ರಶ್ನಿಸಿ ಜಿಲ್ಲಾಧಿಕಾರಿಯಿಂದ ಮುಚ್ಚಳಿಕೆ ಬರೆಸಿಕೊಂಡು ಲಸಿಕೆ ಪಡೆದ ಪ್ರಸಂಗ ಹುಬ್ಬಳ್ಳಿಯಲ್ಲಿ ಜರುಗಿದೆ.

ಲಸಿಕೆ ಪ್ರಮಾಣ ಹೆಚ್ಚಿಸಲು ಜನಜಾಗೃತಿ ಮೂಡಿಸುವ ಸಲುವಾಗಿ ಹುಬ್ಬಳಿಯ ಮಹಾನಗರ ಪಾಲಿಕೆಯ ಆವರಣದಲ್ಲಿ ಸಾರ್ವಜನಿಕರು ಸಭೆ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಯಲ್ಲಾಪುರ ಓಣಿಯ ನಿವಾಸಿಯಾದ ಆನಂದ ಕೊನ್ನೂರುಕರ ಎಂಬುವವರು ಲಸಿಕೆ ಪಡೆದರೆ ಅಡ್ಡಪರಿಣಾಮವಿಲ್ಲ ಎಂಬುದಕ್ಕೆ ಯಾರು ಗ್ಯಾರಂಟಿ? ಒಂದು ವೇಳೆ ನನಗೆ ಏನಾದರೂ ತೊಂದರೆಯಾದರೆ ನನ್ನ ಕುಟುಂಬವನ್ನು ಯಾರು ನೋಡುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ನನ್ನ ಮನೆಯಲ್ಲಿ ಎಲ್ಲರೂ ಲಸಿಕೆ ಪಡೆದಿದ್ದಾರೆ. ಆದರೆ ಏನಾದರೂ ಹೆಚ್ಚು ಕಡಿಮೆ ಆಗಬಹುದೆಂಬ ಭಯಕ್ಕೆ ನಾನು ಲಸಿಕೆ ಪಡೆದಿಲ್ಲ. ನನ್ನ ಆರೋಗ್ಯದಲ್ಲಿ ಏನಾದರೂ ಸಮಸ್ಯೆಯಾದರೆ ನೀವು ಜವಾಬ್ದಾರಿ ತೆಗೆದುಕೊಳ್ಳುವಿರಾ ಎಂದು ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲರವರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಪಾಲಿಕೆ ಆಯುಕ್ತರಾದ ಸುರೇಶ ಇಟ್ನಾಳ್‌ರವರು ಲಸಿಕೆಯಿಂದ ಅಡ್ಡಪರಿಣಾಮ ಅಥವಾ ದುಷ್ಪರಿಣಾಮ ಉಂಟಾದರೆ ನಾವು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಎಂದು ಲಿಖಿತವಾಗಿ ಬರೆದು ತಮ್ಮ ಸಹಿಯೊಂದಿಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಮತ್ತು ಉಪ ವಿಭಾಗಾಧಿಕಾರಿಯವರ ಸಹಿ ಹಾಕಿಸಿ ಆನಂದ ಕೊನ್ನೂರುಕರವರಿಗೆ ನೀಡಲಾಯಿತು. ನಂತರ ಅವರು ಕೋವಾಕ್ಸಿನ್ ಲಸಿಕೆ ಪಡೆದಿದ್ದಾರೆ.

ಅವರ ಈ ಲಸಿಕೆ ಪಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಲ್ಲಾಡಳಿತವು ಈ ಲಿಖಿತ ಭರವಸೆಯ ಮೂಲಕ ಹೆಚ್ಚಿನ ಜನರು ಲಸಿಕೆ ಪಡೆಯಲು ಮುಂದೆ ಬರಬಹುದು ಎಂದು ಅಂದಾಜಿಸಿದೆ. ಸರ್ಕಾರವು ಜನರಿಗೆ ಲಸಿಕೆಯ ಕುರಿತು ಇನ್ನಷ್ಟು ಧೈರ್ಯ ನೀಡಬೇಕಿದೆ. ಜೊತೆಗೆ ಈಗಲೇ ಮತ್ತೊಂದು ಕೋವಿಡ್ ಅಲೆ ಬಾರದಂತೆ, ಒಂದು ವೇಳೆ ಬಂದರೂ ಅದನ್ನು ಸಮರ್ಪಕವಾಗಿ, ವೈಜ್ಞಾನಿಕವಾಗಿ, ಹೆಚ್ಚಿನ ಸಾವು ನೋವುಗಳಿಗೆ ಆಸ್ಪದ ರೀತಿ ಎದುರಿಸಲು ಸಿದ್ದತೆ ನಡೆಸಬೇಕಿದೆ.


ಇದನ್ನೂ ಓದಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ಕೃಷಿ ಕಾನೂನು ರದ್ದತಿ ಮಸೂದೆ ಮಂಡನೆ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...