Homeಮುಖಪುಟ'ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ': ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

- Advertisement -
- Advertisement -

”ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ” ಎಂದು ಹಮಾಸ್ ಸಶಸ್ತ್ರ ಸಂಘಟನೆ ಹೇಳಿದೆ.​ ದಿಗ್ಬಂಧನಕ್ಕೊಳಗಾದ ಗಾಜಾ ಪಟ್ಟಿಯ ಮೇಲೆ ವಾಯು, ಸಮುದ್ರ ಹಾಗೂ ನೆಲದ ಮೂಲಕ ಮೂರು ಮಾರ್ಗದಲ್ಲಿ ಇಸ್ರೇಲ್ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಮಾಸ್​ನ ಮಿಲಿಟರಿ ವಕ್ತಾರ ಅಬು ಒಬೇಡೆ ನಾವು ಯಾವುದಕ್ಕೂ ಹೆದರುವುದಿಲ್ಲ, ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ನ​ ಸಶಸ್ತ್ರ ಸಂಘಟನೆ ಹಮಾಸ್ ನಡುವೆ ಆರಂಭವಾದ ಸಂಘರ್ಷ ಮುಂದುವರೆದಿದೆ. ಎರಡೂ ಕಡೆಯಿಂದ ಸುಮಾರು ನಾಲ್ಕು ಸಾವಿರ ಜನರು ಸಾವನ್ನಪ್ಪಿದ್ದಾರೆ. ಈ ಮಧ್ಯೆ ಇರಾನ್ ವಿದೇಶಾಂಗ ಸಚಿವಾಲಯವು ಇಸ್ರೇಲ್​ನ ಗಾಜಾ ಪಟ್ಟಿಯ ಮೇಲಿನ ವಾಯುದಾಳಿಯನ್ನು ನಿಲ್ಲಿಸಿದರೆ, ಒತ್ತೆಯಾಳಾಗಿದ್ದ ಸುಮಾರು 200 ಜನರನ್ನು ಬಿಡುಗಡೆ ಮಾಡಲು ಹಮಾಸ್ ಸಿದ್ಧವಾಗಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿದೆ. ಆದರೆ ಇರಾನ್​ನ ಈ ಹೇಳಿಕೆಗೆ ಹಮಾಸ್​ ಯಾವುದೇ ಪ್ರತಕ್ರಿಯೆಯನ್ನು ನೀಡಿಲ್ಲ.

ಅದೇ ಸಮಯದಲ್ಲಿ,ಇರಾನ್​ನ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಹಮಾಸ್‌ನ್ನು ಉಲ್ಲೇಖಿಸಿ ಮಾತನಾಡಿ, ”ಈ ಯುದ್ಧವನ್ನು ಮುಂದುವರೆಸಲು ನಮಗೆ ಯಾವುದೇ ಸಮಸ್ಯೆಯಿಲ್ಲ. ಇಸ್ರೇಲ್‌ನ್ನು ಎದುರಿಸಲು ಸಾಕಷ್ಟು ಮಿಲಿಟರಿ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಗಾಜಾದಲ್ಲಿ ಇಂತಹ ಹಿಂಸಾತ್ಮಕ ಪ್ರವೃತ್ತಿ ಮುಂದುವರೆದರೆ ಇರಾನ್ ಕೂಡ ಯುದ್ಧಕ್ಕೆ ಧುಮುಕುತ್ತದೆ ಎಂದು ಇರಾನ್ ಇಸ್ರೇಲ್​ಗೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್​ ಮೇಲೆ ದಾಳಿ ನಡೆಸಿತ್ತು, ಎರಡೂ ಕಡೆಗಳು ಸೇರಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಯುದ್ಧ ಆರಂಭಕ್ಕೂ ಒಂದು ವಾರದ ಮುಂಚೆ ಅಬು ಒಬೇಡೆಹ್ ಅವರು, ”ನಮ್ಮ ಜನರ ವಿರುದ್ಧ ನೆಲದ ಆಕ್ರಮಣವನ್ನು ಪ್ರಾರಂಭಿಸುವ ಆಕ್ರಮಣದ (ಇಸ್ರೇಲ್) ಬೆದರಿಕೆಯು ನಮ್ಮನ್ನು ಹೆದರಿಸುವುದಿಲ್ಲ ಮತ್ತು ನಾವು ಅದಕ್ಕೆ ಸಿದ್ಧರಿದ್ದೇವೆ” ಎಂದು ಹೇಳಿದ್ದರು.

ಇಸ್ರೇಲಿ ಅಧಿಕಾರಿಗಳ ಪ್ರಕಾರ ಮುಂಜಾನೆ ಹಮಾಸ್ ದಾಳಿಯೊಂದಿಗೆ ಪ್ರಾರಂಭವಾದ ಹಿಂಸಾಚಾರದಲ್ಲಿ ಇಸ್ರೇಲ್‌ನಲ್ಲಿ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಸೇನೆಯ ವಕ್ತಾರ ಡೇನಿಯಲ್ ಹಗಾರಿ ಸೋಮವಾರ ಮುಂಜಾನೆ ಇಸ್ರೇಲ್ ಗಾಜಾದಲ್ಲಿ ಬಂಧಿಯಾಗಿರುವ 199 ಜನರ ಸಂಬಂಧಿಕರನ್ನು ಖಚಿತಪಡಿಸಲು ಮತ್ತು ತಿಳಿಸಲು ಸಾಧ್ಯವಾಯಿತು ಎಂದು ಹೇಳಿದರು.

”ಪರಿಸ್ಥಿತಿಗಳು ಪಕ್ವವಾದಾಗ ನಾವು ವಿದೇಶಿ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ” ಎಂದು ಅಬು ಒಬೇಡೆ ಹೇಳಿದ್ದಾರೆ.

ಗಾಜಾದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ರೇಲ್‌ನಿಂದ ತೆಗೆದುಕೊಳ್ಳಲಾದ ಕನಿಷ್ಠ 22 ಒತ್ತೆಯಾಳುಗಳನ್ನು ಕೊಲ್ಲಲಾಗಿದೆ ಎಂದು ಅವರು ಹೇಳಿದರು.

ಹಮಾಸ್ ಅಧಿಕಾರಿಗಳ ಪ್ರಕಾರ, ಒಟ್ಟಾರೆಯಾಗಿ, ಅಕ್ಟೋಬರ್ 7 ರಿಂದ ಕಿರಿದಾದ ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ 2,750 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...