Homeಮುಖಪುಟದೆಹಲಿಯಲ್ಲಿ ಗೃಹಬಳಕೆಯ ಅಡುಗೆ ಅನಿಲ (LPG) ದರ 50 ರೂ. ಏರಿಕೆ; ಸಿಲಿಂಡರ್‌ಗೆ 1,103ರೂ.

ದೆಹಲಿಯಲ್ಲಿ ಗೃಹಬಳಕೆಯ ಅಡುಗೆ ಅನಿಲ (LPG) ದರ 50 ರೂ. ಏರಿಕೆ; ಸಿಲಿಂಡರ್‌ಗೆ 1,103ರೂ.

- Advertisement -
- Advertisement -

ದೆಹಲಿಯಲ್ಲಿ ಇಂದಿನಿಂದ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 50 ರೂ. ಏರಿಕೆಯಾಗಿದೆ. ಈ ಪರಿಷ್ಕರಣೆಯೊಂದಿಗೆ, ಪ್ರತಿ ಸಿಲಿಂಡರ್‌ನ ಬೆಲೆ 1103 ರೂ. ಆಗಲಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ ಜೊತೆ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕೂಡ ಹೆಚ್ಚಳ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 350.50 ರೂ. ಏರಿಕೆಯಾಗಿದೆ, ಈ ಹೆಚ್ಚಳದೊಂದಿಗೆ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 2119.50 ಆಗಲಿದೆ. ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಸ್ಥಳೀಯ ತೆರಿಗೆಗಳ ಮೇಲೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯದಕ್ಕೆ ಅಡುಗೆ ಅನಿಲದ ಬೆಲೆಗಳು ವ್ಯತ್ಯಾಸವಿರುತ್ತವೆ. ಇಂಧನ ಚಿಲ್ಲರೆ ವ್ಯಾಪಾರಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ತಿಂಗಳ ಆರಂಭದಲ್ಲಿ ಪರಿಷ್ಕರಿಸುತ್ತಾರೆ.

ಒಂದು ವರ್ಷದಲ್ಲಿ ಪ್ರತಿ ಕುಟುಂಬವು 14.2 ಕೆಜಿಯ 12 ಸಿಲಿಂಡರ್‌ಗಳನ್ನು ಸಬ್ಸಿಡಿ ದರದಲ್ಲಿ ಪಡೆದುಕೊಳ್ಳಬಹುದು. ಒಂದು ವೇಳೆ ಹೆಚ್ಚುವರಿ ಸಿಲಿಂಡರ್‌ಗಳ ಪಡೆಯಬೇಕಾದರೆ ಮಾರುಕಟ್ಟೆ ಬೆಲೆಗೆ ಕೊಳ್ಳಬೇಕಾಗುತ್ತದೆ. ಹಾಗಾಗಿ ಗ್ರಾಹಕರು ಪಹಲ್ (LPG ಯ ನೇರ ಲಾಭ ವರ್ಗಾವಣೆ) ಯೋಜನೆಯಡಿ, ಸಬ್ಸಿಡಿ ದರದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡೆಯುತ್ತಾರೆ. ಸಬ್ಸಿಡಿಯು ವಿದೇಶಿ ವಿನಿಮಯ ದರಗಳು, ಕಚ್ಚಾ ತೈಲ ಬೆಲೆಗಳಂತಹ ಹಲವಾರು ಅಂಶಗಳನ್ನು ಅವಲಂಬಿಸಿರುತ್ತದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read