Homeಮುಖಪುಟಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

- Advertisement -
- Advertisement -

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ.

ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ರೂ. 913 ಆಗಿದ್ದು, ಈ ಹಿಂದೆ ರೂ. 853 ಬೆಲೆ ಇತ್ತು. 11 ತಿಂಗಳಲ್ಲಿ ಎಲ್‌ಪಿಜಿ ಬೆಲೆಯಲ್ಲಿ ಇದು ಎರಡನೇ ಏರಿಕೆಯಾಗಿದೆ.

ಪ್ರಮುಖ ಮೆಟ್ರೋ ನಗರಗಳಾದ ಮುಂಬೈನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ. 852.50 ರಿಂದ ರೂ. 912.50ಕ್ಕೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ರೂ. 879 ರಿಂದ ರೂ. 930ಕ್ಕೆ ಏರಿದ್ದರೆ, ಚೆನ್ನೈನಲ್ಲಿ ರೂ.868.50 ರಿಂದ ರೂ.928.50ಕ್ಕೆ ಹೆಚ್ಚಳವಾಗಿದೆ. ಇನ್ನು ಬೆಂಗಳೂರಿನಲ್ಲಿ ರೂ.855.50 ಇದ್ದ ಬೆಲೆ ರೂ. 915.50ಕ್ಕೆ ತಲುಪಿದೆ ಎಂದು ವರದಿಯಾಗಿದೆ.

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಈ ಹಿನ್ನೆಲೆ ದೇಶದಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸುವಂತೆ ಸರ್ಕಾರ ಶುಕ್ರವಾರ (ಮಾ.6) ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳಿಗೆ (ಒಎಂಸಿ) ಕೇಳಿದ ನಂತರ ಬೆಲೆ ಏರಿಕೆ ಮಾಡಲಾಗಿದೆ. ಭಾರತದಲ್ಲಿ ಪ್ರಸ್ತುತ 33.08 ಕೋಟಿ ಸಕ್ರಿಯ ಎಲ್‌ಪಿಜಿ ಗ್ರಾಹಕರಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೇಶೀಯ ಪೂರೈಕೆಯನ್ನು ಸುಗಮಗೊಳಿಸಲು, ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಸರ್ಕಾರವು ತುರ್ತು ಆದೇಶವನ್ನು ಜಾರಿಗೊಳಿಸಿದೆ. ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ತೈಲ ಸಂಸ್ಕರಣಾ ಕಂಪನಿಗಳು ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠಗೊಳಿಸುವಂತೆ ಈ ಆದೇಶವು ನಿರ್ದೇಶಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರಮುಖ ರಾಷ್ಟ್ರವ್ಯಾಪಿ ಕಡಿತವು ಮಾರ್ಚ್ 15,2024 ರಂದು ಮಾಡಲಾಗಿತ್ತು. ಆಗ ಕೇಂದ್ರ ಸರ್ಕಾರವು ಎರಡೂ ಇಂಧನಗಳ ಮೇಲೆ ಪ್ರತಿ ಲೀಟರ್‌ಗೆ ರೂ. 2 ಕಡಿತವನ್ನು ಘೋಷಿಸಿತ್ತು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು, ಅಂದರೆ 2016ರಲ್ಲಿ ಯೋಜನೆ ಆರಂಭವಾದಾಗಿನಿಂದ ಉಚಿತ ಎಲ್‌ಪಿಜಿ ಸಂಪರ್ಕ ಪಡೆದಿರುವ 10 ಕೋಟಿಗೂ ಹೆಚ್ಚು ಬಡ ಕುಟುಂಬಗಳು, ವರ್ಷಕ್ಕೆ 12 ರೀಫಿಲ್‌ಗಳವರೆಗೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ರೂ.300 ಸಬ್ಸಿಡಿಯನ್ನು ಪಡೆಯುವುದನ್ನು ಮುಂದುವರಿಸಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಬಡವರನ್ನು ದಾರಿ ತಪ್ಪಿಸಿತು; ನನ್ನ ಸರ್ಕಾರ 50 ಕೋಟಿ ಜನರನ್ನು ಬಡತನದಿಂದ ಹೊರತಂದಿದೆ’: ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

ಪಾಟ್ನಾ: ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡುವಲ್ಲಿ ವಿಫಲವಾಗಿದೆ. ಬಡವರನ್ನು ದಾರಿ ತಪ್ಪಿಸುವ ಕೆಲಸ ಮಾಡಿದೆ. ಆದರೆ, ತಮ್ಮ ಸರ್ಕಾರದ ಉತ್ತಮ ಉದ್ದೇಶಗಳು ಮತ್ತು ಪ್ರಯತ್ನಗಳಿಂದಾಗಿ ದೇಶದ 50...

ರಿಪೋಟರ್ಸ್ ಕಲೆಕ್ಟಿವ್‌ ‘ಎಲೆಕ್ಷನ್ ಆಡಿಟ್’ ವರದಿಗೆ ಚುನಾವಣಾ ಅಧಿಕಾರಿಗಳಿಂದ ಸಮಜಾಯಿಸಿ : ವರದಿಗಾರ್ತಿ ಸುಮೇಧಾ ಮಿತ್ತಲ್ ತಿರುಗೇಟು

2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ...

1.27 ಕೋಟಿ ಹಿಂದೂ ಮತದಾರರ ಹೆಸರು ಕೈಬಿಟ್ಟುಹೋಗಿದೆ ಎಂಬ ಯೋಗಿ ಆದಿತ್ಯನಾಥ್‌ ಹೇಳಿಕೆ: ಪೂರಕ ಮಾಹಿತಿ ಸಲ್ಲಿಸುವಂತೆ ಕೋರಿದ SIR ಸ್ವತಂತ್ರ ಆಯೋಗ!

ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಕೈಬಿಟ್ಟುಹೋಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದ ಪೂರಕ ದಾಖಲೆಗಳು ಮತ್ತು ದತ್ತಾಂಶಗಳನ್ನು ಸಲ್ಲಿಸುವಂತೆ...

ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಕೇಂದ್ರದ ವಿರುದ್ಧ ಕಾನೂನು ಹೋರಾಟ ಮುಂದುವರಿಕೆ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರವಾಗಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯನ್ನು ಕೇಂದ್ರ ಸರ್ಕಾರ ಪರಿಗಣಿಸದಿದ್ದರೆ, ಕೇಂದ್ರದ ವಿರುದ್ಧ ಕಾನೂನು ಹೋರಾಟವನ್ನು ಮುಂದುವರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ...

ಸಾಂಸ್ಕೃತಿಕ ನಾಯಕ ಬಸವಣ್ಣನ ನಿಂದನೆ: ರವಿ ಹಂಜ್‌ ವಿರುದ್ದ ಕರವೇ ನಾರಾಯಣಗೌಡ ಆಕ್ರೋಶ.

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನ ಕುರಿತು ರವಿ ಹಂಜ್‌ ಎನ್ನುವ ವ್ಯಕ್ತಿ ಆಕ್ಷೇಪಾರ್ಹ ಹಾಗೂ ನಿಂದನೆ ಮಾತುಗಳನ್ನಾಡಿದ್ದರ ಕುರಿತು ಕರವೇ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಕರ್ನಾಟಕ ಕಂಡ ಮಹಾ ಮಾನವತಾವಾದಿ, ದಾರ್ಶನಿಕ, ಸಾಮಾಜಿಕ ಕ್ರಾಂತಿಯ...

ಮುರಿದ ಕೈಗೆ ಚಿಕಿತ್ಸೆ ಬದಲು ಕಾರ್ಡ್‌ಬೋರ್ಡ್ ರಟ್ಟು ಕಟ್ಟಿ ಕಳಿಸಿದ ಆಸ್ಪತ್ರೆ ಸಿಬ್ಬಂದಿ: ಉತ್ತರ ಪ್ರದೇಶದ ಆರೋಗ್ಯ ವ್ಯವಸ್ಥೆ ವಿರುದ್ಧ ಕಾಂಗ್ರೆಸ್ ಕಿಡಿ!

ಉತ್ತರ ಪ್ರದೇಶದ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಸ್ತೆ ಅಪಘಾತದಲ್ಲಿ ಕೈ ಮೂಳೆ ಮುರಿದಿದ್ದ ತರಕಾರಿ ವ್ಯಾಪಾರಿಯೊಬ್ಬರಿಗೆ ಸೂಕ್ತ ಚಿಕಿತ್ಸೆ ನೀಡುವ ಬದಲು ಕಾರ್ಡ್‌ಬೋರ್ಡ್ ರಟ್ಟು ಕಟ್ಟಿ ಮನೆಗೆ ಕಳುಹಿಸಿದ ಘಟನೆ ವ್ಯಾಪಕ ಆಕ್ರೋಶಕ್ಕೆ...

ಎಸ್‌ಐಆರ್ ಅಂತಿಮ ಪಟ್ಟಿ 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್ ಕಾಂಗ್ರೆಸ್- 115, ಬಿಜೆಪಿ-58 ಹಾಗೂ ಜೆಡಿ(ಎಸ್)ನ 19 ಕ್ಷೇತ್ರಗಳಲ್ಲಿ ಭಾರೀ ವ್ಯತ್ಯಾಸ

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. ದಿನಾಂಕ: 2026ರ ಅಕ್ಟೋಬರ್ 27 ರಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್...

ಉತ್ತರ ಪ್ರದೇಶದಲ್ಲಿ 1.27 ಕೋಟಿ ಹಿಂದೂ ಮತದಾರರ ಹೆಸರು ಅಳಿಸಿದ ಆರೋಪ: ಯೋಗಿ ಆದಿತ್ಯನಾಥ್ ಅವರಿಂದ ದಾಖಲೆ, ದತ್ತಾಂಶ ಕೇಳಿದ ಸ್ವತಂತ್ರ ಆಯೋಗ

ನವದೆಹಲಿ: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸುಮಾರು 1.27 ಕೋಟಿ ಹಿಂದೂ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ...

ಐಸಿಜೆಯ ‘ನರಮೇಧ’ ತೀರ್ಪಿಗೆ ರೋಹಿಂಗ್ಯಾ ನಿರಾಶ್ರಿತರಿಂದ ಸ್ವಾಗತ: ತಾಯ್ನಾಡು ಮ್ಯಾನ್ಮಾರ್‌ಗೆ ಮರಳುವ ಇಂಗಿತ

ನವೆಂಬರ್ 19, 2026ರಂದು, ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವಾದ ಇಂಟರ್‌ನ್ಯಾಷನಲ್ ಕೋರ್ಟ್ ಆಫ್ ಜಸ್ಟೀಸ್ (ಐಸಿಜೆ) ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮ್ಯಾನ್ಮಾರ್ ನರಮೇಧ ನಡೆಸಿದೆ ಎಂದು ಐತಿಹಾಸಿಕ ತೀರ್ಪು ನೀಡಿದೆ. ಅಂತಾರಾಷ್ಟ್ರೀಯ...

‘ಬಸವ ಮಂಟಪ’ ವಿವಾದ: ವಿದೇಶಕ್ಕೆ ತೆರಳಲು ಯತ್ನಿಸಿದ ಲೇಖಕ ರವಿ ಹಂಜ್ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ; ಕೃತಿ ಮುಟ್ಟುಗೋಲು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಡಿಕೆಶಿ ಆದೇಶ

ಬೆಂಗಳೂರು, ನವೆಂಬರ್ 21: 12ನೇ ಶತಮಾನದ ಸಮಾಜ ಸುಧಾರಕ, ವಚನ ಚಳವಳಿಯ ಮುಂಚೂಣಿ ನಾಯಕ ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಮತ್ತು ಅವಮಾನಕರ ವಿಚಾರಗಳನ್ನು ಬರೆದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ‘ಬಸವ ಮಂಟಪ’...