Homeಅಂತರಾಷ್ಟ್ರೀಯಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

- Advertisement -
- Advertisement -

ಅಮೆರಿಕಕ್ಕೆ ಆಮದಾಗುವ ಕಾರುಗಳು ಮತ್ತು ಅದರ ಬಿಡಭಾಗಗಳ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಮಾ.26) ಪ್ರಕಟಿಸಿದ್ದಾರೆ.

ಈ ಕ್ರಮವು ದೇಶೀಯ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಆದರೆ, ಜಾಗತಿಕ ಪೂರೈಕೆ ಸರಪಳಿಗಳನ್ನು ಅವಲಂಬಿಸಿರುವ ವಾಹನ ತಯಾರಕರ ಮೇಲೆ ಆರ್ಥಿಕ ಒತ್ತಡವನ್ನುಂಟು ಮಾಡುತ್ತದೆ ಎಂದು ಶ್ವೇತಭವನ ಹೇಳಿಕೊಂಡಿದೆ.

ಶ್ವೇತಭವನವು ವಾರ್ಷಿಕವಾಗಿ 100 ಶತಕೋಟಿ ಡಾಲರ್ ಆದಾಯ ಸಂಗ್ರಹಿಸುವ ನಿರೀಕ್ಷೆ ಹೊಂದಿರುವ ಈ ಸುಂಕ ವಿಧಿಸುವ ನಿರ್ಧಾರವು, ವಿದೇಶಗಳಲ್ಲಿ ಘಟಕಗಳನ್ನು ಹೊಂದಿರುವ ಅಮೆರಿಕದ ಕಾರು ತಯಾರಕರಿಗೂ ಹೊರೆಯಾಗಲಿದೆ.

ಸುಂಕ ವಿಧಿಸುವ ಆದೇಶ ಏಪ್ರಿಲ್‌ 3ರಿಂದ ಜಾರಿಯಾಗಲಿದೆ. ಇದರಿಂದ ಕಾರು ತಯಾರಕರು ಹೆಚ್ಚಿನ ವೆಚ್ಚ ಮತ್ತು ಕಡಿಮೆ ಮಾರಾಟದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ, ಈ ನಿರ್ಧಾರವು ಅಮೆರಿಕದಲ್ಲಿ ಹೆಚ್ಚಿನ ಕಾರ್ಖಾನೆಗಳು ತೆರೆಯಲು ಕಾರಣವಾಗಲಿದೆ ಮತ್ತು ಕಾರುಗಳ ಬಿಡಿಭಾಗಗಳು ಮತ್ತು ಸಿದ್ದಪಡಿಸಿದ ಕಾರುಗಳಿಗಾಗಿ ಅಮೆರಿಕ, ಕೆನಡಾ, ಮೆಕ್ಸಿಕೊದಾದ್ಯಂತ ಹರಡಿರುವ ‘ಹಾಸ್ಯಾಸ್ಪದ’ ಪೂರೈಕೆ ಸರಪಳಿ ಅಂತ್ಯವಾಗಲಿದೆ. ತಾನು ಸಹಿ ಮಾಡಿರುವ ಆದೇಶ ಶಾಶ್ವತ ಎಂದು ಟ್ರಂಪ್ ಹೇಳಿದ್ದಾರೆ.

ಕಾರುಗಳ ಆಮದುಗಳ ಮೇಲೆ ಸುಂಕ ವಿಧಿಸುವುದು ತನ್ನ ಅಧಿಕಾರವಧಿಯ ನಿರ್ಣಾಯಕ ನೀತಿಯಾಗಿರುತ್ತವೆ ಎಂದು ಟ್ರಂಪ್ ಬಹಳ ಹಿಂದಿನಿಂದಲೂ ಹೇಳುತ್ತಿದ್ದರು. ತೆರಿಗೆಗಳಿಂದ ಉಂಟಾಗುವ ವೆಚ್ಚಗಳು ಹೆಚ್ಚಿನ ಉತ್ಪಾದನೆಯನ್ನು ಅಮೆರಿಕಕ್ಕೆ ಸ್ಥಳಾಂತರಿಸಲು ಕಾರಣವಾಗುತ್ತವೆ ಮತ್ತು ಬಜೆಟ್ ಕೊರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎನ್ನುತ್ತಿದ್ದರು.

ಅಮೆರಿಕ ಮತ್ತು ವಿದೇಶಿ ಕಾರು ತಯಾರಕರು ಸ್ಪರ್ಧಾತ್ಮಕ ಬೆಲೆಗಳನ್ನು ಕಾಯ್ದುಕೊಳ್ಳುವಾಗ ಜಾಗತಿಕ ಮಾರಾಟವನ್ನು ಸರಿಹೊಂದಿಸಲು ಪ್ರಪಂಚದಾದ್ಯಂತ ಘಟಕಗಳನ್ನು ಹೊಂದಿದ್ದಾರೆ. ಆದ್ದರಿಂದ, ಟ್ರಂಪ್ ಹೇಳಿದಂತೆ ಅಮೆರಿಕದಲ್ಲಿ ಹೊಸ ಕಾರ್ಖಾನೆಗಳನ್ನು ವಿನ್ಯಾಸಗೊಳಿಸಲು, ನಿರ್ಮಿಸಲು ಮತ್ತು ತೆರೆಯಲು ಕಂಪನಿಗಳಿಗೆ ವರ್ಷಗಳೇ ತೆಗೆದುಕೊಳ್ಳಬಹುದು ಎಂದು ವರದಿಗಳು ಹೇಳಿವೆ.

ಕಾರು ಆಮದಿನ ಮೇಲೆ ಸುಂಕ ವಿಧಿಸುವುದರಿಂದ ಅವುಗಳ ಬೆಲೆ ಹೆಚ್ಚಾಗಬಹುದು, ಆಯ್ಕೆಗಳು ಕಡಿಮೆಯಾಗಬಹುದು. ಈ ರೀತಿಯ ತೆರಿಗೆಗಳು ಮಧ್ಯಮ ಮತ್ತು ಕಾರ್ಮಿಕ ವರ್ಗದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಇನ್ಸ್ಟಿಟ್ಯೂಟ್ ಫಾರ್ ಇಂಟರ್ನ್ಯಾಷನಲ್ ಎಕನಾಮಿಕ್ಸ್‌ನ ಹಿರಿಯ ಅರ್ಥಶಾಸ್ತ್ರಜ್ಞೆ ಮೇರಿ ಲವ್ಲಿ ಹೇಳಿದ್ದಾರೆ.

ಈಗಾಗಲೇ ಸರಾಸರಿ ಕಾರು ಬೆಲೆ 49 ಸಾವಿರ ಡಾಲರ್‌ಗಳಷ್ಟಿರುವುದರಿಂದ ಹಲವು ಕುಟುಂಬಗಳು ಹೊಸ ಕಾರು ಮಾರುಕಟ್ಟೆಯಿಂದ ವಿಮುಖವಾಗಲಿವೆ ಮತ್ತು ಹಳೆಯ ವಾಹನಗಳನ್ನು ಇಟ್ಟುಕೊಳ್ಳುವುದು ಅನಿವಾರ್ಯವಾಗಲಿದೆ ಎಂದಿದ್ದಾರೆ.

ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...