Homeಕರ್ನಾಟಕಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನತೆಗೆ ಸಿಎಂ ಕರೆ

ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನತೆಗೆ ಸಿಎಂ ಕರೆ

- Advertisement -
- Advertisement -

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾತಿ ವ್ಯವಸ್ಥೆಯಿಂದ ಅಸಮಾನತೆ

ದೇಶದಲ್ಲಿ ವಿವಿಧ ಜಾತಿ, ಧರ್ಮಗಳ ವ್ಯವಸ್ಥೆಯಿದೆ. ಬಹು ಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿ ವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ, ಡಾ.ಬಿ.ಆರ್ ಅಂಬೇಡ್ಕರ್‌ ಅವರು ಸಂವಿಧಾನ ಜಾರಿಗೊಂಡ ಸಂದರ್ಭದಲ್ಲಿ ವೈರುಧ್ಯತೆಯಿರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದು, ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಅಸಮಾನತೆಗಳಿವೆ. ದೇಶದಲ್ಲಿ ಜನರಿಗೆ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಯಶಸ್ವಿಯಾಗುತ್ತದೆ ಎಂದಿದ್ದರು ಎಂದು ಸಿಎಂ ತಿಳಿಸಿದರು.

12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಬಸವಣ್ಣನವರು ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಜೀವ ತುಂಬಿದ್ದರು. ಅತ್ಯಂತ ತಳ ಸಮುದಾಯದವರಾದ ಅಲ್ಲಮ ಪ್ರಭು ಅವರನ್ನು ಅನುಭವ ಮಂಟಪದ ಅಧ್ಯಕ್ಷರಾಗಿಸಿದ್ದರು. ಇದರಲ್ಲಿ ಮಹಿಳೆಯರೂ ಸೇರಿದಂತೆ ಸಮಾಜದ ಎಲ್ಲ ವರ್ಗದವರೂ ಪ್ರಾತಿನಿಧ್ಯವನ್ನು ಹೊಂದಿದ್ದರು. ಎಲ್ಲಿ ಎಲ್ಲ ವರ್ಗದವರ ಅಭಿಪ್ರಾಯಕ್ಕೆ ಬೆಲೆ ದೊರಕುವುದು, ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ ಎಂದು ಹೇಳಬಹುದು ಎಂದರು.

ಮತಗಳ್ಳತನದಿಂದ ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದೆ

ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ ‘ನನ್ನ ಮತ ನನ್ನ ಹಕ್ಕು’. ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ, ಈಗ ಶ್ರೀಮಂತ, ಬಡವ ಬಲ್ಲಿದ ಎಂಬ ಬೇಧವಿಲ್ಲದೇ ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ. ಡಾ.ಬಿ.ಆರ್ ಅಂಬೇಡ್ಕರ್ ಅವರು ‘ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದಿದ್ದರು. ಆದರೆ, ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ. ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಜಾತಿ ವ್ಯವಸ್ಥೆಗೆ ಚಲನೆಯಿಲ್ಲದೆ ಸಮಾಜದಲ್ಲಿ ಆಳವಾಗಿ ಬೇರೂರಿದೆ. ಆರ್ಥಿಕ, ಸಾಮಾಜಿಕ ಸಮಾನತೆ ತರದೇ ಜಾತಿ ವ್ಯವಸ್ಥೆ ನಿರ್ಮೂಲಗೊಳಿಸಲು ಸಾಧ್ಯವಿಲ್ಲ. ಎಲ್ಲರಿಗೂ ಸಮಾನ ಅವಕಾಶಗಳು ದೊರೆತಾಗ ಮಾತ್ರ ಬದಲಾವಣೆ ಸಾಧ್ಯ. ಹಿಂದಿನಿಂದಿಲೂ ಮಹಿಳೆಯರು ಹಾಗೂ ಶೂದ್ರರು ಅಕ್ಷರ ಸಂಸ್ಕೃತಿ ಹಾಗೂ ಅವಕಾಶಗಳಿಂದ ವಂಚಿಕತರಾಗಿದ್ದ ಕಾರಣ, ಅಸಮಾನತೆ ತಲೆದೋರಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಅಂಬೇಡ್ಕರ್ ಅವರು ಬೋಧಿಸಿದ್ದರು. ಸಮಾಜದಲ್ಲಿ ಬಹುಸಂಖ್ಯಾತರು ಎಚ್ಚರದಿಂದಿರಬೇಕು ಎಂದರು.

ಪ್ರಜಾಪ್ರಭುತ್ವದಲ್ಲಿ ಎಲ್ಲಾ ಜಾತಿ, ಧರ್ಮವೂ ಸಮಾನ

ಅಧಿಕಾರವನ್ನು ಉಳಿಸಿಕೊಳ್ಳಲು ಮತಗಳ್ಳತನದ ಹಾದಿಯನ್ನು ಹಿಡಿದಿದ್ದಾರೆ. ಆದ್ದರಿಂದ, ನನ್ನ ಮತ ನನ್ನ ಹಕ್ಕು ಎಂಬುದು ಇಂತಹ ಸನ್ನಿವೇಶದಲ್ಲಿ ಪ್ರಮುಖವಾಗಿದ್ದು, ಮತಗಳ ದುರುಪಯೋಗ ಆಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬೇಡಿ. ಪ್ರಜಾಪ್ರಭುತ್ವ ಉಳಿಸಿ, ಹಕ್ಕುಗಳನ್ನು ರಕ್ಷಿಸುವ ಪ್ರಮಾಣವನ್ನು ಸ್ವೀಕರಿಸಲಾಗಿದೆ. ಸಂವಿಧಾನ ನೀಡುವ ಹಕ್ಕು ಹಾಗೂ ಕರ್ತವ್ಯಗಳ ಪಾಲನೆಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲಾ ಜಾತಿ, ಧರ್ಮವೂ ಸಮಾನವಾಗಿದೆ. ಇಂತಹ ಸಂವಿಧಾನಕ್ಕೆ ಧಕ್ಕೆ ತರುವ ಕೆಲಸವನ್ನು ಮನುವಾದಿಗಳು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಸಂವಿಧಾನ ವಿರೋಧಿಗಳು ಇದ್ದಾರೆ. ಅಸಮಾನತೆ ನಿವಾರಣೆಯಾದರೆ ಶೋಷಣೆ ಸಾಧ್ಯವಿಲ್ಲಎಂದು ಹೇಳಿದರು.

ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು

ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯ ಧರ್ಮದವರೆಂದು, ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಜಾತಿ, ಧರ್ಮ, ವರ್ಗ ವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರ ಹಿತಾಸಕ್ತಿಗಳು, ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು. ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ. ಜನರನ್ನು ತಪ್ಪದಾರಿಗೆಳೆಯುವ ಪ್ರಯತ್ನಗಳು ಖಂಡನೀಯ. ಆರ್ಥಿಕ ಅಸಮಾನತೆ ನಿವಾರಣೆಗಾಗಿ ಗ್ಯಾರಂಟಿ ಯೋಜನೆಗಳ ಮೂಲಕ 98,950 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಸಂವಿಧಾನ ಆಶಯಗಳ ಅರಿವು ಅಗತ್ಯ

ಸಂವಿಧಾನ ಆಶಯಗಳ ಅರಿವು ಎಲ್ಲರೂ ಹೊಂದಬೇಕೆಂಬ ದೃಷ್ಟಿಯಿಂದ, ಸರ್ಕಾರ ಎಲ್ಲ ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದಲು ಕ್ರಮ ಕೈಗೊಂಡಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಅರ್ಥೈಸಿಕೊಳ್ಳಬೇಕು. ಸಂವಿಧಾನದ ಬಗ್ಗೆ ಅರಿವಿಲ್ಲದೇ, ಅದರ ದುರುಪಯೋಗಕ್ಕೆ ಬಲಿಯಾಗುತ್ತಿದ್ದಾರೆ ಎಂದರು.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...