ತಮ್ಮ ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿರುವ ರಾಹುಲ್ ಗಾಂಧಿ, ಹಿರಿತನವು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಖಾತರಿಪಡಿಸುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ. ಗುಜರಾತ್‌ನ ದಾಹೋದ್‌ನಲ್ಲಿ ಪಕ್ಷದ ಬುಡಕಟ್ಟು ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು ಪಕ್ಷದ ಚುನಾವಣಾ ತಂತ್ರವನ್ನು ಬಹಿರಂಗಪಡಿಸಿದ್ದಾರೆ.
ಜನರಿಗಾಗಿ ದುಡಿಯುವ ಮತ್ತು ಹೋರಾಟ ಮಾಡುವವರಿಗೆ ಮಾತ್ರ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಖಚಿತ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ತಮ್ಮ ಪಕ್ಷದ ಬುಡಕಟ್ಟು ಮುಖಂಡರನ್ನು ಅರಣ್ಯ, ನೆಲ ಮತ್ತು ಜಲಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಆದಿವಾಸಿಗಳ ಪರವಾಗಿ ಹೋರಾಡುವಂತೆ ರಾಹುಲ್ ಗಾಂಧಿ ಕೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಪಕ್ಷದ ಪದಾಧಿಕಾರಿಗಳು ಹಾಗೂ ಹಿರಿಯ ನಾಯಕರು ಮನೆ-ಮನೆ ಪ್ರಚಾರದಲ್ಲಿ ಆದಿವಾಸಿಗಳನ್ನು ತಲುಪುವಂತೆ ಒತ್ತಾಯಿಸಿದ ಅವರು, ನೈತಿಕತೆಯನ್ನು ಹೆಚ್ಚಿಸುವಂತೆ ಕೇಳಿಕೊಂಡಿದ್ದಾರೆ. ಹಿರಿತನದ ಮೇಲೆ ಟಿಕೆಟ್ ಕೇಳುವುದರ ಬದಲು ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೆ ಮಾತ್ರ ಟಿಕೆಟ್ ಸಿಗುತ್ತದೆ ಎಂದು ಅವರು ಹೇಳಿದ್ದಾರೆ.
“ನೋ ವರ್ಕ್ ನೋ ಟಿಕೇಟ್” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ.
ಇದನ್ನೂ ಓದಿ: ಮೋದಿಗೆ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ, ಮೇವಾನಿ ಬಂಧನ ಪ್ರಜಾಪ್ರಭುತ್ವ ವಿರೋಧಿ: ರಾಹುಲ್ ಗಾಂಧಿ ಆಕ್ರೋಶ
ಮೋದಿ ಆಡಳಿತದ ಮೇಲೆ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ಮೋದಿ ನೇತೃತ್ವದಲ್ಲಿ ಬಿಜೆಪಿ ದೇಶದ ಆರ್ಥಿಕತೆಯನ್ನು ಹಾಳು ಮಾಡಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಬಹಳಷ್ಟು ನಷ್ಟವನ್ನು ಅನುಭವಿಸಿವೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಲ್ಲದೆ ಮೋದಿ ಸರ್ಕಾರವು ಗುಜರಾತ್ ಅಥವಾ ರಾಷ್ಟ್ರದಲ್ಲಿ ಉದ್ಯೋಗವನ್ನು ಖಚಿತಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
2017ಕ್ಕಿಂತ ಭಿನ್ನವಾಗಿ ಈ ಬಾರಿ ಗುಜರಾತ್‌ನಲ್ಲಿ ಚುನಾವಣೆ ಗೆಲ್ಲಲು ಕಾಂಗ್ರೆಸ್‌ಗೆ ಉತ್ತಮ ಅವಕಾಶವಿದೆ. ತಮಗೆ ಇದನ್ನು ಸಾಧಿಸಲು ಸಾಧ್ಯ ಎಂಬ ಆತ್ಮವಿಶ್ವಾಸ ಮತ್ತು ನಂಬಿಕೆಯೊಂದಿಗೆ ಹೋರಾಟವನ್ನು ಪ್ರಾರಂಭಿಸಲು ರಾಹುಲ್ ಗಾಂಧಿ ತಮ್ಮ ಪಕ್ಷದ ನಾಯಕರನ್ನು ಕೇಳಿದ್ದಾರೆ.


