Homeಕರ್ನಾಟಕ'ಡಿಕೆಶಿ, ಶಾಮನೂರರಿಗೆ ಹೆದರಬೇಡಿ, ಧೈರ್ಯವಾಗಿರಿ': ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್

‘ಡಿಕೆಶಿ, ಶಾಮನೂರರಿಗೆ ಹೆದರಬೇಡಿ, ಧೈರ್ಯವಾಗಿರಿ’: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್

- Advertisement -
- Advertisement -

ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿಕೆ ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದಾರೆ. ನೀವು ಯಾವ ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪನವರಿಗೂ ಹೆದರಬೇಡಿ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿದ ಅವರು, ”ಕಾಂಗ್ರೆಸ್‌ನವರೇ ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಕುತಂತ್ರ ಮಾಡುತ್ತಿದ್ದಾರೆ. ಆಡಳಿತ ಮಾಡಲು ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್‌ನವರೇ ಬಿಡುತ್ತಿಲ್ಲ. ಒಬ್ಬೊಬ್ಬರಾಗಿ ಶಾಸಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

”ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿಕೆ ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದಾರೆ. ಹೀಗಾಗಿ, ತಮ್ಮದೇ ಹಾದಿಯಲ್ಲಿ ಸಿಎಂ ಸಿದ್ದರಾಮಯ್ಯ ಹೋಗುತ್ತಿದ್ದಾರೆ. ಕರ್ನಾಟಕದ ಜನರು ಸಿದ್ದರಾಮಯ್ಯ ಅವರ ಮೇಲಿನ ವಿಶೇಷವಾದ ಪ್ರೀತಿಯಿಂದಲೇ ಮತ ಹಾಕಿ 135 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ತೆಗೆದುಕೊಳ್ಳಬೇಕು” ಎಂದು ಸಿಎಂ ಪರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಬ್ಯಾಟಿಂಗ್ ಮಾಡಿದ್ದಾರೆ.

ಲಿಂಗಾಯತರನ್ನು ಸಿಎಂ ಮಾಡುತ್ತೇವೆಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದಾರೆ. ”ಸಿದ್ದರಾಮಯ್ಯನವರೇ, ನೀವು ಯಾವ ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪನವರಿಗೂ ಹೆದರಬೇಡಿ. ಜಾತಿ – ಜನಾಂಗದ ಮೇಲೆ ಯಾರೂ ಸಿಎಂ ಆಗಲ್ಲ. ಯಾರ ಸಮರ್ಥ ಆಡಳಿತ ಕೊಡುತ್ತಾರೋ ಅವರು ಸಿಎಂ ಆಗಬೇಕು” ಎಂದು ಹೇಳಿದ್ದಾರೆ.

”ಸಿದ್ದರಾಮಯ್ಯ ಅವರು ತೂಕದ ವ್ಯಕ್ತಿತ್ವ, ಉಳಿದವರಂತೆ ಜೈಲಿಗೆ ಹೋಗಿಬಂದವರಲ್ಲ, ಗೂಂಡಾಗಿರಿ ಮಾಡಿದವರಲ್ಲ” ಎಂದು ಸಿಎಂ ಪರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ವರದಿ ಸಲ್ಲಿಕೆಗೆ ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ; ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...