Homeಮುಖಪುಟಭಯಪಡಬೇಡಿ, ನಿಮ್ಮ ಜೊತೆಗಿದ್ದೇವೆ: ಉದ್ಧವ್‌ಗೆ ಕರೆ ಮಾಡಿದ ರಾಹುಲ್‌ ಗಾಂಧಿ!

ಭಯಪಡಬೇಡಿ, ನಿಮ್ಮ ಜೊತೆಗಿದ್ದೇವೆ: ಉದ್ಧವ್‌ಗೆ ಕರೆ ಮಾಡಿದ ರಾಹುಲ್‌ ಗಾಂಧಿ!

- Advertisement -
- Advertisement -

ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಶಮನ ದೃಷ್ಟಿಯಲ್ಲಿ ಇಂದು ಸಿಎಂ ಉದ್ಧವ್‌ಠಾಕ್ರೆಗೆ ಕರೆ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಯಪಡಬೇಡಿ, ನಿಮ್ಮ ಜೊತೆಗಿದ್ದೇವೆ ಎಂಬ ಭರವಸೆ ನೀಡಿದ್ದಾರೆ.

“ರಾಹುಲ್‌ಜಿ ಮತ್ತು ಉದ್ಧವ್‌ಜಿಯವರು ಇಂದು ಬೆಳಿಗ್ಗೆ ದೂರವಾಣಿ ಸಂಭಾಷಣೆ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯಿಂದ ಉಂಟಾಗಿರುವ ಉಹಾಪೋಹಗಳಿಗೆ ತೆರೆ ಎಳೆಯಲಾಯಿತು. ಈ ಸರ್ಕಾರಕ್ಕೆ ಕಾಂಗ್ರೆಸ್‌ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ” ಎಂದು ಶಿವಸೇನೆಯ ಮುಖಂಡರೊಬ್ಬರು ಹೇಳಿದ್ದಾರೆ.

ನಾವು ಮಹಾರಾಷ್ಟ್ರದಲ್ಲಿ ಬೆಂಬಲ ನೀಡಿರುವವರು ಅಷ್ಟೆ ಹೊರತು ನಿರ್ಧಾರ ತೆಗೆದುಕೊಳ್ಳುವವರ ಅಲ್ಲ. ನಾವು ರಾಜಸ್ತಾನ, ಪಂಜಾಬ್‌, ಛತ್ತೀಸ್‌ಘಡ ಮತ್ತು ಜಾರ್ಖಂಡ್‌ನಲ್ಲಿ ಮಾತ್ರ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ಮಹಾರಾಷ್ಟ್ರದಲ್ಲಿ ಬಿಕ್ಕಟ್ಟು ಉಂಟಾಗಿತ್ತು.

ಶಿವಸೇನೆ, ಎನ್‌ಸಿಪಿ ಮತ್ತುಕಾಂಗ್ರೆಸ್‌ ಮೂರು ಪಕ್ಷಗಳು ಸೇರಿ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಹೆಸರಿನಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿವೆ.

ರಾಜ್ಯವು ಎದುರಿಸುತ್ತಿರುವ ತೊಂದರೆಗಳ ನಡುವೆಯೂ ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ತಮ್ಮ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಅವರು ಮಂಗಳವಾರ ಉದ್ಧವ್ ಠಾಕ್ರೆ ಅವರಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರು ಹೇಳಿಕೆಯ ಹಿಂದಿನ ತಮ್ಮ ನಿಲುವನ್ನು ವಿವರಿಸಿದರು. ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ಹೇಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು. ಆದರೆ ಕೆಲವರು ಅವರ ಹೇಳಿಕೆಯನ್ನು ತಿರುಚಿದ್ದರು ಎಂದು ಶಿವಸೇನೆಯ ಮುಖಂಡರು ತಿಳಿಸಿದ್ದಾರೆ.

ಕಾಂಗ್ರೆಸ್ ಮಹಾರಾಷ್ಟ್ರದೊಂದಿಗಿದೆ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಎಂವಿಎ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ರಾಹುಲ್‌ ಗಾಂಧಿ ಹೇಳಿದ್ದಾಗಿ ಅವರು ತಿಳಿಸಿದ್ದಾರೆ.

ಎಂವಿಎದಲ್ಲಿ ಕಿರಿಯ ಪಾಲುದಾರರಾದ ಕಾಂಗ್ರೆಸ್‌ಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ಸಮಾನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಉದ್ಧವ್‌ ಠಾಕ್ರೆ ಕೂಡ ರಾಹುಲ್ ಗಾಂಧಿಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲವು ದಿನಗಳಲ್ಲಿ ರಾಜಕೀಯ ಚಟುವಟಿಕೆಗಳಲ್ಲಿ ಭರಾಟೆ ಉಂಟಾದ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಮಧ್ಯಾಹ್ನ ಮೈತ್ರಿ ಪಾಲುದಾರರ ಸದಸ್ಯರನ್ನು ಭೇಟಿಯಾಗಲಿದ್ದಾರೆ. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ವರ್ಷಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಎಂವಿಎ ಸಚಿವರು ತಿಳಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...