Homeಮುಖಪುಟಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

'ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು ಎಂಬ ಮಾತುಗಳಿಗೆ ಕೊನೆಹಾಡಿ'

- Advertisement -
- Advertisement -

ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ ಎಂದು ನಟೆ, ಮಾಜಿ ಸಂಸದೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದ ಬೆನ್ನಲ್ಲೇ “ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದರು.

ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟಿ ರಮ್ಯಾ ಕೂಡ ಮಹಿಳೆಯರದ್ದೇ ತಪ್ಪು ಎನ್ನುವವರ ವಿರುದ್ಧ, ಮಹಿಳೆಯರ ಮೇಲೆ ನಡೆಯುವ ಅಪರಾಧಗಳ ಬಗ್ಗೆ ಕುರುಡಾಗದಿರಿ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರ ಇನ್​ಸ್ಟಾಗ್ರಾಮ್ ಪೋಸ್ಟ್ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

 

 

View this post on Instagram

 

A post shared by Ramya/Divya Spandana (@divyaspandana)

” ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ” ಎಂದಿದ್ದಾರೆ.

“ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು  ತುಂಬ ಬಿಗಿ ಆದಂತಹ, ತುಂಬ ಸಡಿಲ ಆಗಿರುವಂತಹ ಬಟ್ಟೆ ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌, ನೀವು ಕಣ್ಣು ಮಿಟುಕಿಸಬಾರದಿತ್ತು..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು… ಏಕೆ..? ಏಕೆಂದರೆ ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು- ಇಲ್ಲ. ಇಲ್ಲ… ಇಂಥ ಅಸಂಬದ್ಧವೆಲ್ಲ ಕೊನೆಯಾಗಬೇಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ಒಪ್ಪಿಕೊಳ್ಳುವ ತಪ್ಪನ್ನು ನಾನೂ ಮಾಡಿದ್ದೇನೆ. ಸ್ನೇಹಿತರಿಗೂ ಹೇಳಿದ್ದೇನೆ. ಆದರೆ ಇನ್ಮುಂದೆ ಸಾಧ್ಯವಿಲ್ಲ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ನೋಡಿಕೊಂಡು ಸುಮ್ಮನಿರಬೇಡಿ, ಕುರುಡಾಗದಿರಿ. ಧ್ವನಿ ಎತ್ತಿ’ ಇದು ಇಂದಿಗೆ ಕೊನೆಯಾಗಲಿ” ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...