Homeಕರ್ನಾಟಕಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ; ನೀವು ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ. ನಾವು ಬಸವಾದಿ ಶರಣರ ಮಾರ್ಗದಲ್ಲಿ ಹಿಂದೆಯೂ ನುಡಿದಂತೆ ನಡೆದಿದ್ದೇವೆ. ಈಗಲೂ ನಡೆಯುತ್ತಿದ್ದೇವೆ’ ಎಂದು ಮುಖ್ಯಮಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

‘ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿತು’ ಎಂದು ವಿವರಿಸಿದರು.

‘ಆದರೆ, ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ ‘ಇವ ನಮ್ಮವ ಇವ ನಮ್ಮವ’ ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

‘ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು , ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.

‘ಒಂದೇ ದಿನ ₹227 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

‘ಮಾರ್ಚ್ 20 ರಂದು ನಾನು ಮುದ್ಸೇಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇ ಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ಸೇವೆ. ಈಗಲೂ ಅಷ್ಟೆ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ; ಎಂದು ವಿವರಿಸಿದರು.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲೇ ಅಭಿನಂದಿಸಿ, ಸನ್ಮಾನಿಸಿ ಆಶೀರ್ವದಿಸಿದರು.

ಇದನ್ನೂ ಓದಿ; ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...