Homeಮುಖಪುಟಕೇಜ್ರಿವಾಲ್ ಕೈಯಲ್ಲಿ ರಿಮೋಟ್ ಕಂಟ್ರೋಲ್ ಆಗಬೇಡಿ: ಪಂಜಾಬ್ ಸಿಎಂಗೆ ರಾಹುಲ್ ಗಾಂಧಿ ಸಲಹೆ

ಕೇಜ್ರಿವಾಲ್ ಕೈಯಲ್ಲಿ ರಿಮೋಟ್ ಕಂಟ್ರೋಲ್ ಆಗಬೇಡಿ: ಪಂಜಾಬ್ ಸಿಎಂಗೆ ರಾಹುಲ್ ಗಾಂಧಿ ಸಲಹೆ

- Advertisement -
- Advertisement -

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಇದೀಗ ಪಂಜಾಬ್‌ನ ಹೋಶಿಯಾರ್‌ಪುರ ತಲುಪಿದೆ. ಈ ವೇಳೆ ರಾಹುಲ್ ಗಾಂಧಿ, “ಸಿಎಂ ಭಗವಂತ್ ಮಾನ್ ಅವರು, ಆಪ್ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಒತ್ತಡದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ದೆಹಲಿಯಿಂದ ಮಾನ್ ಅವರನ್ನು ರಿಮೋಟ್ ಕಂಟ್ರೋಲ್ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಆಡಲಿತವನ್ನು ಪಂಜಾಬ್‌ನಿಂದ ನಡೆಸಬೇಕು ಮತ್ತು ದೆಹಲಿಯಿಂದ ಅಲ್ಲ. ಪಂಜಾಬ್‌ನ ಸಿಎಂ ಭಗವಂತ್ ಮಾನ್ ಅವರು, ಒತ್ತಡಕ್ಕೆ ಒಳಗಾಗಬಾರದು. ದೆಹಲಿ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಸ್ವತಂತ್ರವಾಗಿ ಕೆಲಸ ಮಾಡಬೇಕು ಮತ್ತು ಯಾರೊಬ್ಬರ ರಿಮೋಟ್ ಕಂಟ್ರೋಲ್ ಆಗಬಾರದು” ಎಂದು ಹೇಳಿದರು.

ಶನಿವಾರ ಪಾದಯಾತ್ರೆ ವೇಳೆ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಆ ಹಿನ್ನೆಲೆಯಲ್ಲಿ ಯಾತ್ರೆಯನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಭಾರತ್ ಜೋಡೋ ಯಾತ್ರೆ ಪುನರಾರಂಭಗೊಳ್ಳುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಜಲಂಧರ್‌ನ ದೇವಿ ತಲಾಬ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಾಜ್ವಾ, ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಶಾಸಕ ಪರ್ಗತ್ ಸಿಂಗ್ ಮತ್ತು ಪಕ್ಷದ ಇತರ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಕಳೆದ ವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಶ್ರೀನಗರದಲ್ಲಿ ಜನವರಿ 30 ರಂದು ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ 21 ವಿರೋಧ ಪಕ್ಷಗಳಗಳಿಗೆ ಆಹ್ವಾನಿಸಿದ್ದಾರೆ. ಈ ಕ್ರಮವು ಈ ವ‍ರ್ಷ ದೇಶದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಹಾಗೂ 2024 ರಲ್ಲಿ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಒಗ್ಗಟ್ಟಿನ ವಿರೋಧವನ್ನು ತೊರುವ ಪ್ರಯತ್ನವೆಂದು ಪರಿಗಣಿಸಲಾಗಿದೆ.

ತೃಣಮೂಲ ಕಾಂಗ್ರೆಸ್, ಜನತಾ ದಳ-ಯುನೈಟೆಡ್, ಶಿವಸೇನೆ-ಯುಬಿಟಿ, ತೆಲುಗು ದೇಶಂ ಪಕ್ಷ, ನ್ಯಾಷನಲ್ ಕಾನ್ಫರೆನ್ಸ್ (ಫಾರೂಕ್ ಮತ್ತು ಒಮರ್ ಅಬ್ದುಲ್ಲಾ ಇಬ್ಬರನ್ನೂ ಆಹ್ವಾನಿಸಿದ್ದರು), ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ, ಡಿಎಂಕೆ, ದಿ. CPI, CPI-M, ಜಾರ್ಖಂಡ್ ಮುಕ್ತಿ ಮೋರ್ಚಾ, RJD (ಲಾಲು ಪ್ರಸಾದ್ ಮತ್ತು ತೇಜಸ್ವಿ ಯಾದವ್ ಇಬ್ಬರೂ), RLD, ಹಿಂದೂಸ್ತಾನಿ ಅವಾಮ್ ಮೋರ್ಚಾ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ, MDMK, VCK, IUML, KSM ಮತ್ತು RSP ಪಕ್ಷಗಳಿಗೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...

‘ಉತ್ತರ ಪ್ರದೇಶ ಪೊಲೀಸರಿಗೆ ತನಿಖೆಯ ಸೂಕ್ತ ತರಬೇತಿ ಅಗತ್ಯ’: 6 ವರ್ಷ ಅನಗತ್ಯವಾಗಿ ಜೈಲಿನಲ್ಲಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ₹6 ಲಕ್ಷ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ಅಪಹರಣ ಮತ್ತು ಕೊಲೆ ಪ್ರಕರಣವೊಂದರಲ್ಲಿ ಯಾವುದೇ ಆಧಾರವಿಲ್ಲದೆ ಸುದೀರ್ಘ 6 ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಕಾಲ ಕಳೆದ ಅರುಣ್ ಅಲಿಯಾಸ್ ದೀಪಕ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿರಪರಾಧಿ...

ನವದೆಹಲಿ| ರಾಷ್ಟ್ರಪತಿ ಭವನ ಸಮೀಪದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ; ದಟ್ಟ ಹೊಗೆ

ನವದೆಹಲಿಯ ರಾಷ್ಟ್ರಪತಿ ಭವನದ ಸಮೀಪವಿರುವ ನಾರ್ತ್ ಬ್ಲಾಕ್ ಪ್ರದೇಶದಲ್ಲಿ ಸೋಮವಾರ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ...

ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳ ಡಿಕ್ಕಿ; ಎಸ್‌ಐಟಿ ತನಿಖೆಗೆ ಆದೇಶ

ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಸುಲ್ತಾನ್‌ಪುರ ನ್ಯಾಯಾಲಯಕ್ಕೆ ತೆರಳುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆಯಲ್ಲಿದ್ದ ಹಲವು ವಾಹನಗಳು 'ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ'ನಲ್ಲಿ ಪರಸ್ಪರ ಡಿಕ್ಕಿ...

ಮಹಾರಾಷ್ಟ್ರ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, ತಡೆ ನೀಡಲು ನಿರಾಕರಣೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...

ಕರ್ನಾಟಕ SIR : ಚುನಾವಣಾ ಅಧಿಕಾರಿಗಳಿಂದಲೇ 61,000ಕ್ಕೂ ಹೆಚ್ಚು ಫಾರಂ-7 ಅರ್ಜಿ ಸಲ್ಲಿಕೆ; ಒಂದರಲ್ಲೂ ಕಾರಣ ಉಲ್ಲೇಖಿಸಿಲ್ಲ-ವರದಿ

ಕರ್ನಾಟಕದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವಂತೆ ಕೋರಿ ಕನಿಷ್ಠ 61,059 ಫಾರಂ-7 ಅರ್ಜಿಗಳನ್ನು ಸ್ವತಃ ಚುನಾವಣಾ ಅಧಿಕಾರಿಗಳೇ ಸಲ್ಲಿಸಿದ್ದು, ಅವುಗಳಲ್ಲಿ ಒಂದೇ ಒಂದು ಅರ್ಜಿಯಲ್ಲೂ ಹೆಸರು ಕೈಬಿಡಲು ಕಾರಣವನ್ನು ನಮೂದಿಸಿಲ್ಲ. ಮತದಾರರ ನೋಂದಣಿ...