Homeಮುಖಪುಟಸರ್ವಾಧಿಕಾರಿಗಳ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾನ ಮಾಡಿ: ಖರ್ಗೆ, ರಾಹುಲ್‌ ಗಾಂಧಿ ಆಗ್ರಹ

ಸರ್ವಾಧಿಕಾರಿಗಳ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾನ ಮಾಡಿ: ಖರ್ಗೆ, ರಾಹುಲ್‌ ಗಾಂಧಿ ಆಗ್ರಹ

- Advertisement -
- Advertisement -

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದೆ. ಸರ್ವಾಧಿಕಾರಿಗಳ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾರರು ಮನೆಯಿಂದ ಹೊರಗೆ ಬಂದು ಮತ ಚಲಾಯಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

ಇದು ಸಾಮಾನ್ಯ ಚುನಾವಣೆಯಲ್ಲ, ಯಾವುದೇ ದಿಕ್ಕು ತಪ್ಪಿಸುವ ತಂತ್ರಗಳಿಗೆ ಮಣಿಯಬಾರದು. ಮತದಾನದ ಗುಂಡಿಗೆ ಒತ್ತುವ ಮೊದಲು ಸಂವಿಧಾನವು ಹೃದಯದಲ್ಲಿ ಪ್ರತಿಧ್ವನಿಸಬೇಕು. ಪ್ರಜಾತಂತ್ರದ ಈ ಆಂದೋಲನದಲ್ಲಿ ನಿಜವಾದ ಬದಲಾವಣೆ ಮಾಡುವವರಾದ ಮೊದಲ ಬಾರಿಗೆ ಮತದಾನ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸುವಂತೆ ಖರ್ಗೆ ಮನವಿ ಮಾಡಿದ್ದಾರೆ.

‘ನಾವು, ಭಾರತದ ಜನರು’ ಇದು ಭಾರತದ ಸಂವಿಧಾನದ ಆತ್ಮ, ನೀವು ಮತದಾನಕ್ಕೆ ವೋಟಿಂಗ್‌ ಮಿಷಿನ್‌ನಲ್ಲಿ ಗುಂಡಿಯನ್ನು ಒತ್ತುವ ಮೊದಲು ನಿಮ್ಮ ಹೃದಯ ಮತ್ತು ಮನಸ್ಸಿನಲ್ಲಿ ಅದು ಪ್ರತಿಧ್ವನಿಸಬೇಕು. ಇದು ಸಾಮಾನ್ಯ ಚುನಾವಣೆಯಲ್ಲ ಎಂಬುದನ್ನು ಮರೆಯಬೇಡಿ. ಇದು ಸರ್ವಾಧಿಕಾರದ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಚುನಾವಣೆ ಎಂದು ಖರ್ಗೆ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 89 ಕ್ಷೇತ್ರಗಳ ನನ್ನ ಪ್ರೀತಿಯ ಎಲ್ಲಾ ನಾಗರಿಕರೆ, ಯಾವುದೇ ತಂತ್ರಗಳು ಮತ್ತು ಸುಳ್ಳುಗಳಿಗೆ ಮಣಿಯಬೇಡಿ. ಯುವ ನ್ಯಾಯ, ನಾರಿ ನ್ಯಾಯ, ಕಿಶನ್ ನ್ಯಾಯ, ಶ್ರಮಿಕ ನ್ಯಾಯ ಮತ್ತು ಹಿಸ್ಸೆದಾರಿ ನ್ಯಾಯದ ಮಾದರಿಯನ್ನು ತರುವ ಮೂಲಕ 140 ಕೋಟಿ ಭಾರತೀಯರ ಜೀವನವನ್ನು ಬದಲಾಯಿಸಬಹುದು. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಖಾತರಿಪಡಿಸುವ ಬಗ್ಗೆ ಕಲ್ಪಿಸಿಕೊಳ್ಳಿ ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

ಚುನಾವಣೆಯ ಹಿನ್ನೆಲೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಪ್ರೀತಿಯ ದೇಶದ ನಿವಾಸಿಗಳೇ, ಇಂದು ದೇಶದ ಭವಿಷ್ಯವನ್ನು ನಿರ್ಧರಿಸುವ ಐತಿಹಾಸಿಕ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಮುಂದಿನ ಸರ್ಕಾರ ‘ಕೆಲವು ಬಿಲಿಯನೇರ್‌’ ಅಥವಾ ‘140 ಕೋಟಿ ಭಾರತೀಯರದ್ದು’ ಎಂಬುದನ್ನು ನಿಮ್ಮ ಮತ ನಿರ್ಧರಿಸುತ್ತದೆ. ಆದ್ದರಿಂದ ಎಲ್ಲರೂ ಮನೆಯಿಂದ ಹೊರಗೆ ಬಂದು ‘ಸಂವಿಧಾನದ ಯೋಧ’ ಆಗುವ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ಮತ ಹಾಕುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ’ ಎಂದು ಹೇಳಿದ್ದಾರೆ.

ಇದನ್ನು ಓದಿ: ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...