Homeಚಳವಳಿಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

ಕೇರಳದ ನೂರಾರು ಮನೆಗಳ ಮುಂದೆ ರಾರಾಜಿಸುತ್ತಿರುವ BJP-RSS ಕಾರ್ಯಕರ್ತರಿಗೆ ಪ್ರವೇಶವಿಲ್ಲವೆಂಬ ಪೋಸ್ಟರ್‌ಗಳು!

- Advertisement -
- Advertisement -

“ಈ ಕಾನೂನು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ನಮಗೆ ಸಂಪೂರ್ಣವಾಗಿ ತಿಳಿದಿದೆ. ಇದಕ್ಕೆ ಬೆಂಬಲ ಕೊಡಿ ಎಂದು ವಿವರಿಸಲು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಇಲ್ಲಿಗೆ ಬರಬೇಕಾಗಿಲ್ಲ”.

ಕೇರಳದ ಹಲವು ಮನೆಗಳ ಮುಂದೆ ಈ ರೀತಿಯ ಪೋಸ್ಟರ್‌ಗಳನ್ನು ಹಚ್ಚಲಾಗಿದ್ದು  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಗೆ ಭಾರೀ ಪ್ರತಿರೋಧ ವ್ಯಕ್ತಪಡಿಸಿವೆ.

ವಿವಾದಾತ್ಮಕ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಂತೆ, ಬಿಜೆಪಿಯು ಜನರ ಬೆಂಬಲವನ್ನು ಪಡೆಯಲು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಮನೆ ಮನೆ ಪ್ರಚಾರವು ಒಂದು. ಅದರೆ  ಕೇರಳದ ಕೋಳಿಕೋಡ್ ಜಿಲ್ಲೆಯ ಕರಡಿ ಗ್ರಾಮವೊಂದರಲ್ಲೇ ಸುಮಾರು 350 ಮನೆಗಳು ಬಿಜೆಪಿಗರಿಗೆ ಪ್ರವೇಶವಿಲ್ಲ ಎಂದು ತಿಳಿಸುವ ಪೋಸ್ಟರ್‌ಗಳನ್ನು ಹಾಕಿವೆ. ಪೋಸ್ಟರ್‌ಗಳು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಕರೆ ನೀಡಿವೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಯುವ ವಿಭಾಗವಾದ ಮುಸ್ಲಿಂ ಯೂತ್ ಲೀಗ್‌ನ ಸ್ಥಳೀಯ ಕಾರ್ಯಕರ್ತ ಆಜಾದ್ ಕರಡಿ ಮಾತನಾಡಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಿರುಪುಸ್ತಕದಲ್ಲಿ “ಬಡ ಮುಸ್ಲಿಂ ಪುರುಷರ ಮತ್ತು ಮಹಿಳೆಯರು ಸಿಎಎ ಪರವಿದ್ದಾರೆ ಎಂಬ ಮಾಹಿತಿ ಪ್ರಕಟಿಸಿದೆ. ಹಾಗಾಗಿ ಜನರಿಗೆ ಸತ್ಯ ತಿಳಿಸಲು ನಾವು ಪೋಸ್ಟರ್‌ ಅಭಿಯಾನ ಆರಂಭಿಸಿದ್ದೇವೆ ಎಂದಿದ್ದಾರೆ.

ಎಲ್ಲಾ ಸಮುದಾಯಗಳ ಕುಟುಂಬಗಳು ಸಿಎಎ ಬೆಂಬಲಿಸುತ್ತಿವೆ ಎಂಬ ತಪ್ಪು ಸಂದೇಶವನ್ನು ಬಿಜೆಪಿಯವರು ಹರಡುತ್ತಿದ್ದಾರೆ. ಹಲವಾರು ಕುಟುಂಬಗಳು ಈ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಆದರೂ ಕರಪತ್ರ ಕೊಡುವ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಎಲ್ಲರ ಬೆಂಬಲವಿದೆ ಎಂಬ ಸುಳ್ಳು ಹರಡಲಾಗುತ್ತಿದೆ. ಇದು ಆಕ್ಷೇಪಾರ್ಹ ಸಂಗತಿಯಾಗಿದೆ ಎಂದು ಆಜಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಎಡಪಂಥೀಯ ಸ್ವತಂತ್ರ ಶಾಸಕರಾದ ಕರತ್ ರಜಾಕ್ ಮತ್ತು ಸುನ್ನಿ ಯುವ ಚಳವಳಿಯ ರಾಜ್ಯ ಕಾರ್ಯದರ್ಶಿ ನಾಸರ್ ಫೈಜಿ ಕೂದಥೈ ಅವರಿಗೆ ಸಿಎಎ ಕರಪತ್ರ ಕೊಡುತ್ತಿರುವ ಫೋಟೊಗಳನ್ನು ಪ್ರಕಟಿಸಿರುವ ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಖಾತೆಗೆಳು ಇವರು ಕೂಡ ಬೆಂಬಲಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿವೆ.

ಫೋಟೋಗಳ ಬಗ್ಗೆ ಇವರಿಬ್ಬರನ್ನು ಪ್ರಶ್ನಿಸಿದಾಗ, ತಮ್ಮನ್ನು ಭೇಟಿ ಮಾಡಿದ ಪ್ರಚಾರಕರನ್ನು ತಡೆಯಲು ಸಾಧ್ಯವಾಗದಿದ್ದರೂ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಾವು ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಬೆಂಬಲಿಸಿದ್ದಾರೆ ಎಂದು ಹಾಕಿಕೊಂಡಿದೆ.. ಹಾಗಾಗಿ ಪೋಸ್ಟರ್‌ ಹಾಕುತ್ತಿದ್ದೇವೆ, ನಮ್ಮ ಮನೆಗಳಿಗೆ ಅವರು ಬರುವುದೇ ಬೇಡ ಎಂಬುದು ನಮ್ಮ ಅಭಿಪ್ರಾಯ ಎಂದಿದ್ದಾರೆ.

ಪೋಸ್ಟರ್‌ಗಳನ್ನು ಹಿಂದೂಗಳು, ಮುಸ್ಲಿಮರು ಮತ್ತು ಕ್ರೈಸ್ತರ ಮನೆಗಳಲ್ಲಿ ಹಾಕಲಾಗಿದೆ ಎಂದು ಆಜಾದ್ ಹೇಳಿದ್ದಾರೆ. ನಾವು ಅವರು ಸ್ನೇಹಿತರಾಗಿದ್ದರೂ ಸಹ ನಂಬಿಕೆಯ ದೃಷ್ಟಿಯಿಂದ ಪೋಸ್ಟರ್‌ಗಳನ್ನು ಅಂಟಿಸುವ ಮೊದಲು ನಾವು ಅವರ ಅನುಮತಿಯನ್ನು ಪಡೆಯುತ್ತೇವೆ ಎಂದು ಅಜಾದ್‌ ಹೇಳಿದ್ದಾರೆ.

ನಾನು ಸಿಎಎಯನ್ನು ಬೆಂಬಲಿಸುತ್ತೇನೆ ಎಂದು ನಂಬುವಂತೆ ಜನರನ್ನು ದಾರಿ ತಪ್ಪಿಸಲು ಬಿಜೆಪಿ ಕಾರ್ಯಕರ್ತರು ನನ್ನ ಚಿತ್ರವನ್ನು ಪ್ರಸಾರ ಮಾಡುತ್ತಾರೆಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಶಾಸಕ ರಜಾಕ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ. “ನಾನು ಎಲ್ಲರನ್ನು ಸ್ವಾಗತಿಸುವ ರೀತಿಯಲ್ಲೇ ಅವರನ್ನು ಸಹ ಸ್ವಾಗತಿಸಿದೆ. ಆದರೆ ಮುಸ್ಲಿಮರು ಮತ್ತು ಎಡಪಂಥೀಯರು ಸಿಎಎಗೆ ಬೆಂಬಲ ನೀಡುತ್ತಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುವಂತಹ ಚಿತ್ರಗಳನ್ನು ಪ್ರಸಾರ ಮಾಡಿರುವುದು ಸರಿಯಲ್ಲ” ಎಂದು ರಜಾಕ್ ಹೇಳಿದ್ದಾರೆ.

ಆಧಾರ: ದಿವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...