Homeಮುಖಪುಟಭಯದ ವಾತಾವರಣ ಸೃಷ್ಟಿಸಬೇಡಿ: 'ಇಡಿ'ಗೆ ಸುಪ್ರೀಂ ತಾಕೀತು

ಭಯದ ವಾತಾವರಣ ಸೃಷ್ಟಿಸಬೇಡಿ: ‘ಇಡಿ’ಗೆ ಸುಪ್ರೀಂ ತಾಕೀತು

- Advertisement -
- Advertisement -

“ಭಯದ ವಾತಾವರಣವನ್ನು ಸೃಷ್ಟಿಸಬೇಡಿ” ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸುಪ್ರೀಂ ಕೋರ್ಟ್ ಮಂಗಳವಾರ ತಾಕೀತು ಮಾಡಿದೆ.

ಛತ್ತೀಸಗಡ ಮೂಲದ ವ್ಯಕ್ತಿಗಳಿಬ್ಬರು, ಇಡಿ ತನಿಖೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಪ್ರಕರಣದಲ್ಲಿ ತಮ್ಮನ್ನೂ ಶಕ್ತಿದಾರರನ್ನಾಗಿಸುವಂತೆ ಕೋರಿ ರಾಜ್ಯ ಸರ್ಕಾರವೂ ಅರ್ಜಿ ಸಲ್ಲಿಸಿತ್ತು, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಆಹ್ವಾನುದ್ದೀಷ್ ಅಮಾನುಲ್ಲಾ ಅವರ ದ್ವಿಸದಸ್ಯ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿತು.

”ರಾಜ್ಯದಲ್ಲಿ 22,000 ಕೋಟಿ ಮೊತ್ತದ ಅಬಕಾರಿ ಹಗರಣ ನಡೆದಿದೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಭೂಪೇಶ್ ಬಜೆಲ್ ಅವರನ್ನು ಸಿಲುಕಿಸಲು ಇಡಿ ಕುತಂತ್ರ ನಡೆಸುತ್ತಿದೆ. ಇದಕ್ಕಾಗಿ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರಿಗೆ ಬಂಧನದ ಬೆದರಿಕೆ ಒಡ್ಡುತ್ತಿದೆ” ಎಂದು ಛತ್ತಿಸಗಡ ಸರ್ಕಾರ ಆರೋಪಿಸಿದೆ.

ರಾಜ್ಯ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್‌, ”ಚುನಾವಣೆ ಸಮೀಪಿಸುತ್ತಿರುವ ಕಾರಣದಿಂದ ಈ ರೀತಿಯ ಬೆದರಿಕೆ ತಂತ್ರಗಳನ್ನು ಅನುಸರಿಸಲಾಗುತ್ತಿದೆ. ತನಿಖಾ ಸಂಸ್ಥೆಯ ಈ ನಡೆ ಆಘಾತಕಾರಿಯಾದುದು ಸಂಸ್ಥೆಯು ಹದ್ದು ಮೀರಿ ವರ್ತಿಸುತ್ತಿದೆ” ಎಂದು ಹೇಳಿದರು.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಬಿಲ್‌ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ಜಾರಿ ನಿರ್ದೇಶನಾಲಯವು ರಾಜ್ಯದಲ್ಲಿ ನಡೆದಿರುವ ಹಗರಣದ ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದರು.

ಈ ವೇಳೆ ನ್ಯಾಯಪೀಠ, ”ಭಯದ ವಾತಾವರಣ ಸೃಷ್ಟಿಸಬೇಡಿ, ನಿಮ್ಮ (ಇ.ಡಿ) ಈ ಬಗೆಯ ವರ್ತನೆಯಿಂದಾಗಿ ನಿಜವಾದ ಪ್ರಕರಣವನ್ನೂ ಸಂಶಯದಿಂದಲೇ ನೋಡುವಂತಾಗುತ್ತದೆ” ಎಂದು ತನಿಖಾ ಸಂಸ್ಥೆಗೆ ಮೌಖಿಕ ಎಚ್ಚರಿಕೆ ನೀಡಿತು.

”ಈ ಏಜೆನ್ಸಿಗಳಲ್ಲಿ ಸಾಮಾನ್ಯ ಜನರಿಗೆ ಸ್ವಲ್ಪ ವಿಶ್ವಾಸವಿರಲಿ. ಇಲ್ಲದಿದ್ದರೆ, ಒಂದು ಪ್ರಾಮಾಣಿಕ ಕಾರಣವೂ ಶಂಕಿತವಾಗುತ್ತದೆ” ಎಂದು ಪೀಠವು ಇಡಿ ವಕೀಲರಿಗೆ ಹೇಳಿದೆ.

”ಇ.ಡಿ ಅಧಿಕಾರಿಗಳು ತಮ್ಮ ಜೊತೆಗೆ ಕುಟುಂಬದ ಸದಸ್ಯರನ್ನೂ ಬೆದರಿಸುತ್ತಿರುವುದಾಗಿ ಅಬಕಾರಿ ಇಲಾಖೆಯ ಅಧಿಕಾರಿಗಳೇ ದೂರಿದ್ದಾರೆ. ತನಿಖೆ ವೇಳೆ ತಮಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿರುವುದಾಗಿಯೂ ಅವರು ಆರೋಪಿಸಿದ್ದಾರೆ. ಇ.ಡಿ ಕೈಗೊಂಡಿರುವ ಕ್ರಮದಿಂದಾಗಿ ಆಡಳಿತವು ನಿಷ್ಕ್ರಿಯಗೊಂಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆ ತಲೆದೋರಿದೆ” ಎಂದು ರಾಜ್ಯ ಸರ್ಕಾರ ಅರ್ಜಿಯಲ್ಲಿ ದೂರಿದೆ.

ಮುಖ್ಯಮಂತ್ರಿ ಹಾಗೂ ರಾಜ್ಯದ ಇತರ ಉನ್ನತ ಅಧಿಕಾರಿಗಳನ್ನು ಪ್ರಕರಣದಲ್ಲಿ ಸಿಲುಕಿಸುವ ಉದ್ದೇಶದಿಂದ ತಾವು ಸಿದ್ಧಪಡಿಸಿರುವ ಹೇಳಿಕೆಗೆ ಸಹಿ ಮಾಡುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಸಹಿ ಮಾಡದಿದ್ದರೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಅವರು ಅಬಕಾರಿ ಅಧಿಕಾರಿಗಳಿಗೆ ಹೆದರಿಸಿದ್ದಾರೆ. ಪ್ರಭಾವಿ ರಾಜಕೀಯ ಮುಖಂಡರ ಆಣತಿಯಂತೆ ಇಡಿ ಕೆಲಸ ಮಾಡುತ್ತಿದೆ. ತನಿಖೆಯು ಪಕ್ಷಪಾತದಿಂದ ಕೂಡಿದೆ” ಎಂದೂ ರಾಜ್ಯ ಸರ್ಕಾರ ಆರೋಪಿಸಿದೆ.

ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯವು ಜಾರಿ ನಿರ್ದೇಶನಾಯಲಕ್ಕೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...