Homeಮುಖಪುಟ'ಅಪ್ಪ-ಅಮ್ಮ' ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ...

‘ಅಪ್ಪ-ಅಮ್ಮ’ ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ ಸೃಷ್ಟಿ

- Advertisement -
- Advertisement -

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ನಿಮ್ಮ ಹೆತ್ತವರು ತನಗೆ ಮತ ಹಾಕದಿದ್ದರೆ ಎರಡು ದಿನ ಊಟ ಮಾಡಬೇಡಿ ಎಂದು ಮಕ್ಕಳಿಗೆ ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

ಚುನಾವಣಾ ಆಯೋಗವು ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನಗಳನ್ನು ಹೊರಡಿಸಿದ ಒಂದು ವಾರದಲ್ಲೇ ಕಳಮ್ನೂರಿ ಶಾಸಕ ಸಂತೋಷ್ ಬಂಗಾರ್ ಅವರ ಹೇಳಿಕೆಗಳು ಹೊರಬಿದ್ದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಕಂಡು ಬಂದಿದೆ. ಇದರ ಜೊತೆಗೆ ಶಾಲೆಗೆ ತೆರಳಿ ಶಾಸಕ ಚುನಾವಣಾ ಕ್ಯಾಂಪೇನ್‌ ಆರಂಭಿಸಿದ್ದಾರೆ ಎಂಬಂತಹ ಟೀಕೆ ವ್ಯಕ್ತವಾಗಿದೆ.

ಈ ಕುರಿತ ಶಾಸಕ ಸಂತೋಷ್ ಬಂಗಾರ್ ಅವರ ವಿಡಿಯೋ ವೈರಲ್‌ ಆಗಿದ್ದು, ವಿಡಿಯೋದಲ್ಲಿ ಮುಂದಿನ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ, ಎರಡು ದಿನ ಊಟ ಮಾಡಬೇಡಿ ಎಂದು ಬಂಗಾರ್ ಅವರು ಹಿಂಗೋಲಿ ಜಿಲ್ಲೆಯ ಜಿಲ್ಲಾ ಪರಿಷತ್ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಹೇಳಿರುವುದು ಸೆರೆಯಾಗಿದೆ.

ಶಾಸಕ ಬಂಗಾರ್ ಅವರು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ, ಸಂತೋಷ್ ಬಂಗಾರ್ ಅವರಿಗೆ ಮತ ನೀಡಿ, ಆಗ ಮಾತ್ರ ನಾವು ತಿನ್ನುತ್ತೇವೆ ಎಂದು ಅಪ್ಪ-ಅಮ್ಮನಿಗೆ ಉತ್ತರಿಸಬೇಕು ಎಂದು ಹೇಳುತ್ತಿರುವುದು ಕಂಡು ಬರುತ್ತದೆ, ನಂತರ ಶಾಸಕರು ಮುಂದಿನ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂಬುದರ ಕುರಿತು ತಮ್ಮ ಪೋಷಕರ ಮುಂದೆ ಹೇಳುವುದನ್ನು ಪುನರಾವರ್ತಿಸುವಂತೆ ಮಕ್ಕಳಿಗೆ ಹೇಳಿದ್ದಾರೆ.

ಬಂಗಾರ್ ಅವರ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ನಾಯಕರು ವಾಗ್ಧಾಳಿಯನ್ನು ನಡೆಸಿದ್ದಾರೆ. ಎನ್‌ಸಿಪಿ(ಶರದ್‌ ಪವಾರ್‌ ಬಣ) ವಕ್ತಾರ ಕ್ಲೈಡ್ ಕ್ರಾಸ್ಟೊ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಂಗಾರ್ ಶಾಲಾ ಮಕ್ಕಳಿಗೆ ಹೇಳಿರುವುದು ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ, ಆದ್ದರಿಂದ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರು ಬಿಜೆಪಿಯ ಮಿತ್ರರಾಗಿರುವುದರಿಂದ ಆರಾಮವಾಗಿದ್ದಾರೆ. ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ವಿಜಯ್ ವಾಡೆತ್ತಿವಾರ್ ಮಾತನಾಡಿ,  ಬಂಗಾರ್ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ತಮ್ಮ ಪಕ್ಷದ ಶಾಸಕರೊಬ್ಬರು ಶಾಲಾ ಮಕ್ಕಳ ಬಳಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವಾಗ ರಾಜ್ಯದ ಶಿಕ್ಷಣ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಬಂಗಾರ್ ಅವರು ತಮ್ಮ ಆಘಾತಕಾರಿ ಹೇಳಿಕೆಗಳು ಮತ್ತು ಕ್ರಮಗಳಿಗೆ ಹೆಸರುವಾಸಿಯಾಗಿದ್ದಾರೆ, ಅವರು ಈ ಹಿಂದೆ ಕೂಡ ವಿವಾದಕ್ಕೆ ಗುರಿಯಾಗಿದ್ದರು. ಕಳೆದ ತಿಂಗಳು 2024ರ ಲೋಕಸಭೆ ಚುನಾವಣೆಯ ನಂತರ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗದಿದ್ದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಹಬ್ಬದ ರ್ಯಾಲಿಯೊಂದರಲ್ಲಿ ಕತ್ತಿ ಝಳಪಿಸಿದ್ದರು, ಆ ಬಳಿಕ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. 2022ರಲ್ಲಿ ಕೇಟರಿಂಗ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ ವೀಡಿಯೊ ವೈರಲ್ ಆಗಿ ವಿವಾದಕ್ಕೆ ಕಾರಣರಾಗಿದ್ದರು.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...